ದೆಹಲಿ ಬೆನ್ನಲ್ಲೇ ಆಗ್ರಾ, ಮಥುರಾ, ಮೀರತ್, ಅಲಿಗರ್ ಪ್ರದೇಶಗಳಿಗೂ ಕಾಲಿಡುತ್ತಿರುವ ಕನ್ನಡಿಗರ ‘ನಂದಿನಿ’

Date:

- ಉತ್ತರಪ್ರದೇಶದ 'ಹತ್ರಾಸ್' ಜಿಲ್ಲೆಯಲ್ಲಿ ನೂತನ ಹಾಲು ಸಂಸ್ಕರಣಾ ಘಟಕ
- ಮಾರ್ಚ್16ರಿಂದ ನಂದಿನಿ ಹಾಲು-ಮೊಸರು ಮಾರಾಟಕ್ಕೆ ಅಗತ್ಯ ಕ್ರಮ

ದೆಹಲಿ ಮಾರುಕಟ್ಟೆಗೆ ಕಾಲಿಟ್ಟಿರುವ ಕನ್ನಡಿಗರ ಹೆಮ್ಮೆಯ ಹಾಲಿನ ಬ್ರ್ಯಾಂಡ್ ‘ನಂದಿನಿ’ ಈಗ ಉತ್ತರ ಭಾರತದ ಆಗ್ರಾ, ಮಥುರಾ, ಮೀರತ್ ಹಾಗೂ ಅಲಿಗರ್ ಪ್ರದೇಶಗಳಲ್ಲೂ ಹಾಲು-ಮೊಸರು ಮಾರಾಟವನ್ನು ಪ್ರಾರಂಭಿಸಲು ಸಜ್ಜಾಗಿದೆ.

ಉತ್ತರಪ್ರದೇಶದ ‘ಹತ್ರಾಸ್’ ಜಿಲ್ಲೆಯಲ್ಲಿ ನೂತನ ಹಾಲು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಮುಂದಾಗಿದೆ.

ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ 2024 ನವೆಂಬರ್ 11ರಂದು ‘ನಂದಿನಿ’ ಹಾಲು ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಆ ಮೂಲಕ ಉತ್ತರ ಭಾರತಕ್ಕೆ ನಂದಿನಿ ಕಾಲಿಟ್ಟಿತ್ತು. ಈಗ ನಾಲ್ಕು ತಿಂಗಳಲ್ಲೇ ಉತ್ತರ ಭಾರತದಲ್ಲಿ ಮಾರುಕಟ್ಟೆಯನ್ನು ಹಂತ ಹಂತವಾಗಿ ‘ನಂದಿನಿ’ ವಿಸ್ತರಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಪ್ರದೇಶದ ‘ಹತ್ರಾಸ್’ ಜಿಲ್ಲೆಯಲ್ಲಿ ಹಾಲು ಸಂಸ್ಕರಣಾ ಘಟಕವನ್ನು ತೆರೆಯಲು ಸ್ಥಳ ಗುರುತಿಸಲಾಗಿದ್ದು, ಆಗ್ರಾ, ಮಥುರಾ, ಮೀರತ್, ಅಲಿಗರ್ ಪ್ರದೇಶಗಳಲ್ಲಿ ನಂದಿನಿ ಹಾಲು ಮಾರಾಟವನ್ನು ಪ್ರಾರಂಭಿಸುವ ಸಂಬಂಧ ಅಲ್ಲಿನ ಮಾರಾಟಗಾರರೊಂದಿಗೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ ಅವರು ಬುಧವಾರ (ಮಾ.5) ಸಭೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ನಂದಿನಿ’ ಮೇಲೆ ಮತ್ತೆ ಅಮುಲ್ ಆಕ್ರಮಣ – ದರ ಸಮರ ತಂತ್ರ!

“ಮಾ.16ರಿಂದ ನಂದಿನಿ ಹಾಲು ಮತ್ತು ಮೊಸರು ಮಾರಾಟಕ್ಕೆ ಎಲ್ಲಾ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ರಾಜಸ್ಥಾನದ ಜೈಪುರ್‌ನಲ್ಲಿ ಸಹ ಈ ಮಾಹೆಯಲ್ಲಿಯೇ ಹಾಲು ಮಾರಾಟ ಪ್ರಾರಂಭಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ ಅವರು ‘ಈ ದಿನ.ಕಾಂ‘ ತಿಳಿಸಿದ್ದಾರೆ.

“ಕೆಎಂಎಫ್ ಸಂಸ್ಥೆಯು ‘ನಂದಿನಿ’ ಬ್ರಾಂಡ್‌ನ ಉತ್ಪನ್ನಗಳ ಮಾರಾಟವನ್ನು ಕರ್ನಾಟಕ ರಾಜ್ಯಕ್ಕೆ ಮಾತ್ರ ಸಿಮೀತಗೊಳಿಸದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲಿಯೂ ಸಹ ಮಾರಾಟ ಜಾಲವನ್ನು ವಿಸ್ತರಿಸುತ್ತ ಹೋಗುತ್ತಿದೆ. ಮಹಾರಾಷ್ಟ್ರದ ಮುಂಬೈ, ನಾಗಪುರ, ಪುಣೆ, ಸೋಲಾಪುರ, ಗೋವಾ, ಹೈದರಾಬಾದ್, ಚೆನ್ನೈ ಹಾಗೂ ಕೇರಳ ರಾಜ್ಯದಲ್ಲಿ ನಂದಿನಿ ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ಈಗ, ದೆಹಲಿಗೆ ಪ್ರವೇಶಿಸುವ ಮೂಲಕ ಉತ್ತರ ಭಾರತದ ಮಾರುಕಟ್ಟೆಯನ್ನು ಮುಟ್ಟಿದ್ದೇವೆ. ಹೊಸ ಸಂಸ್ಕರಣಾ ಘಟಕದ ಮೂಲಕ ಸುತ್ತಮುತ್ತಲಿನ ನಗರಗಳಿಗೆ ಹಾಲು ಮಾರಾಟ ಜಾಲ ವಿಸ್ತರಣೆಯಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಬಿ. ಶಿವಸ್ವಾಮಿ
ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ

ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ರಾಷ್ಟ್ರದಲ್ಲಿಯೇ ಎರಡನೇಯ ದೊಡ್ಡ ಹಾಲು ಸಹಕಾರ ಸಂಸ್ಥೆಯಾಗಿದೆ. ಕೆಎಂಎಫ್ ಸಂಸ್ಥೆಯು ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26 ಲಕ್ಷಕ್ಕೂ ಹೆಚ್ಚಿನ ಹೈನುಗಾರ ರೈತರಿಂದ ಹಾಲನ್ನು ಖರೀದಿಸಿ. ಸಂಸ್ಕರಿಸಿ ‘ಗೋವಿನಿಂದ ಗ್ರಾಹಕರವರೆಗೆ’ ಎಂಬ ಶೀರ್ಷಿಕೆಯನ್ನು ಹೊತ್ತು ‘ನಂದಿನಿ’ ಬ್ರ್ಯಾಂಡ್‌ ಅಡಿಯಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಗಳಲ್ಲಿ ಕಳೆದ 05 ದಶಕಗಳಿಂದ ಮಾರಾಟ ಮಾಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...