ಗುಜರಾತ್ | ನಕಲಿ ಟೋಲ್ ಪ್ಲಾಜಾ, ಸರ್ಕಾರಿ ಕಚೇರಿ ನಂತರ ಈಗ ನಕಲಿ ಆಸ್ಪತ್ರೆ ಪತ್ತೆ

Date:

ಕೆಲವು ತಿಂಗಳ ಹಿಂದಷ್ಟೆ ಗುಜರಾತ್‌ನಲ್ಲಿ ನಕಲಿ ಟೋಲ್‌ ಪ್ಲಾಜಾ ಹಾಗೂ ನಕಲಿ ಸರ್ಕಾರಿ ಕಚೇರಿಗಳು ಪತ್ತೆಯಾಗಿದ್ದವು. ಇದೀಗ ಅಹಮದಾಬಾದ್‌ನಲ್ಲಿ ನಕಲಿ ಆಸ್ಪತ್ರೆ ಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒರ್ವ ರೋಗಿ ಮೃತಪಟ್ಟ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ತಂಡ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ‘ಅನನ್ಯ ಮಲ್ಟಿ ಸ್ಪೆಷಾಲಿಟಿ’ ಎಂಬ ಹೆಸರಿನ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಪ್ರಕರಣವನ್ನು ಬಯಲಿಗೆಳದಿದ್ದಾರೆ.

ಅಧಿಕಾರಿಗಳ ಪ್ರಕಾರ ಸಂಪೂರ್ಣ ಆಸ್ಪತ್ರೆ ನಕಲಿ ವೈದ್ಯರಿಂದ ನಡೆಯುತ್ತಿತ್ತು. ಆಸ್ಪತ್ರೆಯು ಬೇರೆ ವ್ಯದ್ಯರ ಹೆಸರಿನಲ್ಲಿ ನೋಂದಣಿಯಾಗಿತ್ತು. ಸದ್ಯ ಆಸ್ಪತ್ರೆಯನ್ನು ಮುಚ್ಚಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯಲ್ಲಿ ಇಎನ್‌ಟಿ, ಮೂತ್ರ ವಿಭಾಗ, ಚರ್ಮ ವಿಭಾಗ ಸೇರಿದಂತೆ ಹಲವು ವಿಭಾಗಗಳಿದ್ದು,ದಿನವಿಡಿ ಕಾರ್ಯನಿರ್ವಹಿಸಲಾಗುತ್ತಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಆಸ್ಪತ್ರೆಯಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ನಂತರ ಆಕೆಯ ಕುಟುಂಬದವರು ವಿಡಿಯೋ ಚಿತ್ರೀಕರಿಸಿದ ನಂತರ ಕ್ರಮ ಕೈಗೊಳ್ಳಲಾಗಿತ್ತು.

ಸಾಮಾನ್ಯ ಆನಾರೋಗ್ಯದ ಸಮಸ್ಯೆಯಿಂದಾಗಿ ಕುಟುಂಬವು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿತ್ತು. ದಾಖಲಿಸಿದ ಕೆಲವು ದಿನಗಳಲ್ಲಿ ಬಾಲಕಿಯ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿತು. ಅಲ್ಲಿನ ನಕಲಿ ವೈದ್ಯರು ಇಲ್ಲಿ ಸರಿಪಡಿಸಲು ಸಾಧ್ಯವಿಲ್ಲ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದರು.

ಬಾಲಕಿಗೆ 1.5 ಲಕ್ಷ ರೂ. ಶುಲ್ಕ ವಿಧಿಸಿದ ಆಸ್ಪತ್ರೆ ಸಿಬ್ಬಂದಿ ಪೋಷಕರು ಪರಿಪರಿಯಾಗಿ ಕೇಳಿಕೊಂಡರು ವೈದ್ಯಕೀಯ ವರದಿಯನ್ನು ಮಾತ್ರ ನೀಡಲಿಲ್ಲ.

ಬೇರೆ ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಬಾಲಕಿ ಮೃತಪಟ್ಟಿದ್ದಳು. ಬಾಲಕಿ ಸಾವಿನ ನಂತರ ಆಸ್ಪತ್ರೆ ನಡೆಸುತ್ತಿರುವವರ ವಿರುದ್ಧ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅಹಮದಾಬಾದ್‌ನ ಎಸ್‌ಪಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...