ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ವಿಶೇಷ ಶಾಖೆಯ ಘಟಕದಲ್ಲಿ ನಿಯೋಜಿತರಾಗಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಶನಿವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
54 ವರ್ಷದ ಎಎಸ್‌ಐ ಸತ್ಯನಾರಾಯಣ ಅವರು ಮಧ್ಯಾಹ್ನ 1.30 ರ ಸುಮಾರಿಗೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದೆ ನಡೆದ ಅಪಘಾತದಿಂದಾಗಿ ಅವರು ನಿರಂತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಹರಿಯಾಣ | ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ; ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯ ಪರಿಣಾಮ: ಮಲ್ಲಿಕಾರ್ಜುನ ಖರ್ಗೆ
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸೂರ್ಯಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್, “ಪ್ರಾಥಮಿಕ ತನಿಖೆಯ ಪ್ರಕಾರ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಸದ್ಯ ಈ ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಹರಿಯಾಣದಲ್ಲಿ ಹಿರಿಯ ದಲಿತ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ್ ಅವರ ಡೆತ್ ನೋಟ್‌ನಲ್ಲಿ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಜಾತಿ ಆಧಾರಿತ ತಾರತಮ್ಯ ಸೇರಿದಂತೆ ಇತರ ಕೆಲವು ಅಧಿಕಾರಿಗಳಿಂದ ಕಿರುಕುಳದ ಆರೋಪಗಳನ್ನು ಅಧಿಕಾರಿ ಮಾಡಿದ್ದಾರೆ. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ತೆಲಂಗಾಣದಲ್ಲಿಯೂ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.





