ಒಂದೇ ಮನೆಯಲ್ಲಿ 4271 ಮತದಾರರು; ಮಹದೇವಪುರ ನಂತರ ಮತ್ತೊಂದು ಭಾರೀ ಮತಗಳ್ಳತನ ಬೆಳಕಿಗೆ

Date:

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಮತಗಳ್ಳತನ ರೀತಿಯಲ್ಲಿಯೇ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಚುನಾವಣಾ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ. ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಲಾಗಿದೆ ಎಂದು ಅವರು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಮಂಗಳವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ,” ಎಂದು ವ್ಯಂಗ್ಯವಾಗಿ ಹೇಳಿದರು.

ಮಹೋಬಾದ ಈ ಗ್ರಾಮದಲ್ಲಿ ಒಟ್ಟು 16,000 ಮತದಾರರಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಮತದಾರರ ದಾಖಲಾತಿಯಿಂದ ಈ ಅಕ್ರಮದ ಗಂಭೀರತೆ ಇನ್ನಷ್ಟು ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು. “ಬಿಜೆಪಿ ಮತ್ತು ಚುನಾವಣಾ ಆಯೋಗದ ಸಹಕಾರದೊಂದಿಗೆ ಉತ್ತರ ಪ್ರದೇಶದಲ್ಲಿ ‘ಮತ ಕಳ್ಳತನ’ ಆರಂಭವಾಗಿದೆ,” ಎಂದು ಸಿಂಗ್ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮನೆಯ ಮಾಲೀಕರಿಗೆ ಹೇಳಲು ಬಯಸುತ್ತೇನೆ, ಅವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತಾರೆ. ಬೇರೆ ಯಾರೂ ಮತ ಹಾಕುವ ಅಗತ್ಯವಿಲ್ಲ,” ಎಂದು ವ್ಯಂಗ್ಯ ಮಾಡಿದರು.

ಇದೇ ವೇಳೆ, ಸಿಂಗ್ ಬಿಹಾರದ ಭಾಗಲ್‌ಪುರದಲ್ಲಿ ಭೂಮಿ ಹಂಚಿಕೆಯ ವಿಷಯದಲ್ಲೂ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಇದನ್ನು ಓದಿದ್ದೀರಾ?ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

ಉದ್ಯಮಿ ಗೌತಮ್ ಅದಾನಿ ಗುಂಪಿಗೆ 1,050 ಎಕರೆ ಭೂಮಿಯನ್ನು ಮೂರು ವಿದ್ಯುತ್ ಸ್ಥಾವರಗಳಿಗಾಗಿ ಕೇವಲ ಒಂದು ರೂಪಾಯಿಗೆ ಪ್ರತಿ ಎಕರೆ ದರದಲ್ಲಿ 25 ವರ್ಷಗಳವರೆಗೆ ಬಾಡಿಗೆ ನೀಡಲಾಗಿದೆ ಎಂದು ಆರೋಪಿಸಿದರು.

“ಕೇವಲ ಒಂದು ರೂಪಾಯಿಗೆ ಭೂಮಿ ನೀಡಿರುವುದಲ್ಲದೆ, ಉತ್ಪಾದಿಸಿದ ವಿದ್ಯುತ್‌ನ್ನು 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ದರದಲ್ಲಿ ಖರೀದಿಸುವ ಗ್ಯಾರಂಟಿಯನ್ನೂ ನೀಡಲಾಗಿದೆ. ಜನರಿಗೆ ವಿದ್ಯುತ್ ದರ 10, 11 ಅಥವಾ 12 ರೂಪಾಯಿಗಳಾದರೂ ಸರ್ಕಾರಕ್ಕೆ ಚಿಂತೆಯಿಲ್ಲ. ಆದರೆ ಪ್ರಧಾನಮಂತ್ರಿಯ ಸ್ನೇಹಿತರಿಗೆ ಯಾವುದೇ ತೊಂದರೆಯಾಗಬಾರದು,” ಎಂದು ಸಿಂಗ್ ಕಿಡಿಕಾರಿದರು.

ಎಎಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸಭಾಜಿತ್ ಸಿಂಗ್, “ಪಕ್ಷವು ಸೆಪ್ಟೆಂಬರ್ 20ರಂದು ಲಖನೌದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದೆ. ಮಹೋಬಾದಂತೆಯೇ ಇತರ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಅಕ್ರಮಗಳ ಬಗ್ಗೆ ಗಮನಹರಿಸಲಾಗುವುದು. ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದೆ, ಯಾವುದೇ ಶಂಕಾಸ್ಪದ ಮತದಾರರ ಹೆಸರು ಸೇರದಂತೆ ಖಚಿತಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...