ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ

Date:

ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು ಆರಂಭದಿಂದ ಗಮನಿಸಿ, ಇದು ರಾಷ್ಟ್ರದಾದ್ಯಂತ ಹೆಚ್ಚಿದ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಉಂಟು ಮಾಡಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಮಾಣದ ತಾಪಮಾನ ದಾಖಲಾಗಲಿದ್ದು, ಪರಿಣಾಮವೂ ವಿಭಿನ್ನವಾಗಿರಲಿದೆ. ಅಂದರೆ ಕೆಲವು ಪ್ರದೇಶಗಳಲ್ಲಿ ಅತಿಯಾದ ಚಳಿ ಇರಲಿದ್ದು, ಇನ್ನು ಕೆಲವೆಡೆ ಮಧ್ಯಮ ಪ್ರಮಾಣದಲ್ಲಿ ಶೀತ ವಾತಾವರಣ ಇರಲಿದೆ ಎಂದು ಇಲಾಖೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ತಾಪಮಾನ ತೀವ್ರವಾಗಿ ಕುಸಿತವಾಗಲಿದ್ದು, 3 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಇದರ ಜೊತೆಗೆ ಮಳೆ ಸುರಿಯುವ ಸಂಭವವೂ ಹೆಚ್ಚಾಗಿದೆ. ಈ ರೀತಿಯ ಹವಾಮಾನ ಚಳಿಗಾಲದ ಕೃಷಿ ಇರುವ ಪ್ರದೇಶಗಳಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ಹವಾಮಾನದಲ್ಲಿ ಉಂಟಾಗಬಹುದಾದ ವೈಪರೀತ್ಯದ ಕಾರಣದಿಂದ ಚಳಿಗಾಲಕ್ಕೆ ಅಗತ್ಯವಿರುವ ಬೆಚ್ಚಗಿನ ಬಟ್ಟೆ, ಹೀಟರ್‌ಗಳು ಸೇರಿದಂತೆ ಚಳಿಗೆ ಅಗತ್ಯವಿರುವ ವಸ್ತುಗಳನ್ನು ಮುಂಚೆಯೇ ಖರೀದಿಸಿಟ್ಟುಕೊಳ್ಳಿ, ಹವಾಮಾನ ಬದಲಾವಣೆಯ ವರದಿಯನ್ನು ಗಮನಿಸುತ್ತಿರಿ ಎಂದು ಜನರಿಗೆ ಇಲಾಖೆ ಸಲಹೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇವಲ 8 ಟಿಎಂಸಿ ನೀರಿಗಾಗಿ 18 ಸಾವಿರ ಕೋಟಿ ಖರ್ಚು ಮಾಡಿದೆಯೇ ಸರ್ಕಾರ!

ಪೆಸಿಫಿಕ್ ಪ್ರದೇಶದ ಮೇಲ್ಮೈನಲ್ಲಿ ಕಡಿಮೆ ತಾಪಮಾನದಿಂದಾಗಿ ಲಾ ನಿನಾ ವಿದ್ಯಮಾನವು ಸಂಭವಿಸುತ್ತದೆ, ಇದು ಮಳೆ ಮತ್ತು ತೀವ್ರ ಚಳಿಗಾಲದಂತಹ ಹವಾಮಾನ ಬದಲಾವಣೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಲಾ ನಿನಾ ಏಪ್ರಿಲ್ ಮತ್ತು ಜೂನ್‌ನಲ್ಲಿ ಆರಂಭವಾಗಿ, ಅಕ್ಟೋಬರ್‌ನಿಂದ ಫೆಬ್ರುವರಿ ತಿಂಗಳಲ್ಲಿ ತೀವ್ರಗೊಳ್ಳುತ್ತದೆ.

ಈ ಬಾರಿ ಲಾ ನಿನಾ ಮಳೆಗಾಲದಲ್ಲಿಯೇ ತನ್ನ ಪ್ರಭಾವವನ್ನು ತೋರಿದೆ. ಅದಕ್ಕೆ ಉದಾಹರಣೆ ಎಂದರೆ ದೇಶದಲ್ಲಿ ಮಳೆಗಾಲ ಇನ್ನೂ ಮುಂದುವರಿದಿರುವುದು. ಲಾ ನಿನಾ ವಿದ್ಯಮಾನವು ಪೂರ್ವದ ಮಾರುತಗಳಿಂದ ತಳ್ಳಲ್ಪಡುತ್ತದೆ, ಇದು ಸಮುದ್ರದ ನೀರನ್ನು ಪಶ್ಚಿಮಕ್ಕೆ ತಳ್ಳುತ್ತದೆ, ಇದರಿಂದ ಸಮುದ್ರದ ಮೇಲ್ಮೈಯನ್ನು ತಂಪಾಗಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...