ಸುಪ್ರೀಂ ಕೋರ್ಟ್‌ ಘಟನೆ ಬೆನ್ನಲ್ಲೇ ಮತ್ತೊಂದು ಕೃತ್ಯ; ಅಹಮದಾಬಾದ್ ಜಡ್ಜ್‌ ಮೇಲೆ ಚಪ್ಪಲಿ ಎಸೆದ ದುರುಳ

Date:

ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಬಿ.ಆರ್‌ ಗವಾಯಿ ಅವರ ಮೇಲೆ ವಕೀಲನೊಬ್ಬ ಬೂಟು ಎಸೆದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸೆಷನ್ಸ್ ನ್ಯಾಯಾಲಯದಲ್ಲಿ ದುರುಳನೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂದು ವರದಿಯಾಗಿದೆ.

ತಾನು ದಾಖಲಿಸಿದ್ದ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿದ್ದ ನಾಲ್ವರನ್ನು ಖುಲಾಸೆಗೊಳಿದ ಕಾರಣಕ್ಕಾಗಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂದು ಹೇಳಲಾಗಿದೆ.

ಅಹಮದಾಬಾದ್‌ನ ಕರಂಜ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಿ.ಎಚ್. ​​ಭಾಟಿ ವಿವರಿಸಿದಂತೆ; “ಆ ವ್ಯಕ್ತಿಯ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಧೀಶರು ವಜಾಗೊಳಿಸಿ, ಆರೋಪಿಗಳನ್ನು ಖುಲಾಸೆಗೊಳಿದರು. ಇದರಿಂದ, ಕೋಪಗೊಂಡ ವ್ಯಕ್ತಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆತನನ್ನು ನ್ಯಾಯಾಲಯದ ಸಿಬ್ಬಂದಿ ಹಿಡಿದಿಕೊಂಡರು. ಆದರೆ, ಆತನನ್ನು ಬಂಧಿಸುವುದು ಬೇಡವೆಂದು ನ್ಯಾಯಾಧೀಶರು ಆತನನ್ನು ಬಿಟ್ಟುಬಿಡಲು ಸೂಚಿಸಿದರು. ಆದ್ದರಿಂದ, ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಭಾಟಿ ತಿಳಿಸಿದ್ದಾರೆ.

ಏನಿದು ಪ್ರಕರಣ?

ನ್ಯಾಯಾಧೀಶರು ಖುಲಾಸೆಗೊಳಿಸಿದ ಪ್ರಕರಣವು 1997ರಲ್ಲಿ ದಾಖಲಾಗಿತ್ತು. ಆಗ, ಗುಜರಾತ್‌ನ ಗೋಮತಿಪುರದಲ್ಲಿ ಕೆಲವು ಯುವಕರು ಕ್ರಿಕೆಟ್ ಆಡುತ್ತಿದ್ದರು. ಆ ಸಮಯದಲ್ಲಿ ತರಕಾರಿಗಳನ್ನು ಖರೀದಿಸಲು ಹೊರಗೆ ಹೋಗಿದ್ದ ಅರ್ಜಿದಾರರಿಗೆ (ಚಪ್ಪಲಿ ಎಸೆದ ವ್ಯಕ್ತಿ) ಚೆಂಡು ತಗುಲಿತ್ತು. ಮಾತಿನ ಚಕಮಕಿ ನಡೆದು, ಯುವಕರು ಅರ್ಜಿದಾರನ ಮೇಲೆ ದೈಹಿಕ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಆ ವ್ಯಕ್ತಿ ಗೋಮ್ಟಿಪುರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣವು 2009ರಲ್ಲಿ ಮೆಟ್ರೋ ನ್ಯಾಯಾಲಯದ ಮುಂದೆ ವಿಚಾರಣೆ ಬಂದಿತು. ವಿಚಾರಣೆ ನಡೆಸಿದ ನ್ಯಾಯಾಲಯವು, 2017ರ ಫೆಬ್ರವರಿ 15ರಂದು ಎಲ್ಲ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿತು.

ಅರ್ಜಿದಾರರು 2017ರ ಮೇ 19ರಂದು ಸೆಷನ್ಸ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಇದೀಗ ಮೆಟ್ರೋ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಆರೋಪಿಗಳನ್ನು ಖುಲಾಸೆಗೊಳಿಸಿ, ಮೇಲ್ಮನವಿಯನ್ನು ವಜಾಗೊಳಿಸಿದೆ.

ಇದರಿಂದ ಕುಪಿತಗೊಂಡ ಅರ್ಜಿದಾರ, ನ್ಯಾಯಾಲಯದ ಅಂಗಳದಲ್ಲಿಯೇ ಜೋರಾಗಿ ಕೂಗಾಡಿದ್ದಾರೆ. ಆತನನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ, ಆತ ನ್ಯಾಯಾಧೀಶರ ಮೇಲೆ ತನ್ನ ಚಪ್ಪಲಿ ಎಸೆದಿದ್ದಾರೆ. ನ್ಯಾಯಾಧೀಶರು ಚಪ್ಪಲಿ ಬೀಳುವುದರಿಂದ ತಪ್ಪಿಸಿಕೊಂಡಿದ್ದಾರೆ. ತಕ್ಷಣವೇ, ಆತನನ್ನು ಕೋರ್ಟ್‌ ಸಿಬ್ಬಂದಿ ಹಿಡಿದುಕೊಂಡಿದ್ದಾರೆ.

ಆದರೆ, ಆತನನ್ನು ಬಿಟ್ಟುಬಿಡುವಂತೆ ಸೂಚಿಸಿದ ನ್ಯಾಯಾಧೀಶರು, ಆತ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದು ಬೇಡವೆಂದು ನಿರ್ದೇಶಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

ಘಟನೆಯ ನಂತರ, ಗುಜರಾತ್ ನ್ಯಾಯಾಂಗ ಸೇವೆಗಳ ಸಂಘವು ನಿರ್ಣಯ ಅಂಗೀಕರಿಸಿದ್ದು, “ಇಂತಹ ಕೃತ್ಯಗಳು ನ್ಯಾಯಾಂಗದ ಸ್ವಾತಂತ್ರ್ಯ, ಘನತೆ, ಭದ್ರತೆ ಹಾಗೂ ಕಾರ್ಯನಿರ್ವಹಣೆಯ ಮೇಲಿನ ನೇರ ದಾಳಿಯಾಗಿದೆ. ನ್ಯಾಯಾಲಯಗಳು ಭಯ, ಬೆದರಿಕೆ ಅಥವಾ ಹಿಂಸೆಯಿಂದ ಮುಕ್ತವಾಗಿ ಕಾರ್ಯನಿರ್ವಹಿಸಬೇಕು. ನ್ಯಾಯಾಂಗ ಅಧಿಕಾರಿಗಳು, ನ್ಯಾಯಾಲಯ ಆವರಣ ಅಥವಾ ಅವರ ಮೂಲಸೌಕರ್ಯಗಳ ಮೇಲಿನ ಯಾವುದೇ ಬೆದರಿಕೆ ಅಥವಾ ದಾಳಿಯು ಪ್ರಜಾಪ್ರಭುತ್ವ ಮತ್ತು ನ್ಯಾಯದ ಅಡಿಪಾಯವನ್ನು ಹಾಳು ಮಾಡುತ್ತದೆ” ಎಂದು ನಿರ್ಣಯವು ಹೇಳಿದೆ.

“ನ್ಯಾಯಾಂಗ ಅಧಿಕಾರಿಗಳು, ನ್ಯಾಯಾಲಯ ಸಿಬ್ಬಂದಿ ಮತ್ತು ನ್ಯಾಯಾಲಯದ ಕಟ್ಟಡಗಳ ಸುರಕ್ಷತೆಗಾಗಿ ತಕ್ಷಣದ ಮತ್ತು ಕಠಿಣ ಭದ್ರತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಸಂಘವು ರಾಜ್ಯ ಸರ್ಕಾರ, ಗೃಹ ಇಲಾಖೆ, ಪೊಲೀಸ್ ಹಾಗೂ ಭದ್ರತಾ ಸಂಸ್ಥೆಗಳು ಸೇರಿದಂತೆ ಎಲ್ಲ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತದೆ” ಎಂದು ಅವರು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...