BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

Date:

ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ ಎಂದು ಭಾರತ ತಿಳಿಸಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಧೂ ಜಲ ಒಪ್ಪಂದ ಅಮಾನತು, ಪಾಕಿಸ್ತಾನ ಪ್ರಜೆಗಳ ವೀಸಾ ರದ್ದು ಹೀಗೆ ಕೇಂದ್ರ ಸರ್ಕಾರಗಳ ವಿವಿಧ ಘೋಷಣೆಗಳ ಬೆನ್ನಲ್ಲೇ ಪಾಕಿಸ್ತಾನ, ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ರದ್ದುಗೊಳಿಸಿತು. ಇದೀಗ ಭಾರತ ಇಸ್ಲಾಮಾಬಾದ್ ಮೇಲಿನ ನಿರ್ಬಂಧಗಳನ್ನು ವಿಸ್ತರಿಸಿ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ನಿಷೇಧ ವಿಧಿಸಿದೆ.

ಮೇ 2ರಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಈ ಆದೇಶವನ್ನು ಹೊರಡಿಸಿದೆ. ನಿಷೇಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...