ಥಾಣೆ ದುರಂತ | ‘ಸ್ವಯಂಚಾಲಿತ ಡೋರ್ ಕ್ಲೋಸ್’ ವ್ಯವಸ್ಥೆ ಕಲ್ಪಿಸಲು ರೈಲ್ವೆ ಮಂಡಳಿ ನಿರ್ಧಾರ

Date:

ಪ್ರಯಾಣಿಕರ ದಟ್ಟಣೆಯಿಂದಾಗಿ ರೈಲಿನಿಂದ ಹೊರಬಿದ್ದು ಸುಮಾರು ಐವರ ಸಾವು ನಡೆದ ಥಾಣೆ ದುರಂತದ ಬೆನ್ನಲ್ಲೇ ಭಾರತೀಯ ರೈಲ್ವೆ ಮಂಡಳಿಯು ಮುಂಬೈನ ಸ್ಥಳೀಯ ರೈಲುಗಳಲ್ಲಿ ‘ಸ್ವಯಂಚಾಲಿತ ಡೋರ್ ಕ್ಲೋಸ್’ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ.

ಈ ಬಗ್ಗೆ ರೈಲ್ವೆ ಮಂಡಳಿಯು ಅಧಿಕೃತ ಹೇಳಿಕೆಯನ್ನು ನೀಡಿದ್ದು, “ಚಲಿಸುವ ರೈಲುಗಳಿಂದ ಪ್ರಯಾಣಿಕರು ಬಿದ್ದು ನಡೆಯುವ ಅಪಘಾತದ ಹಿನ್ನೆಲೆ ಮುಂಬೈನಲ್ಲಿ ತಯಾರಿಸಲಾಗುತ್ತಿರುವ ಎಲ್ಲಾ ಬೋಗಿಗಳಲ್ಲಿ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು” ಎಂದು ದೃಢಪಡಿಸಿದೆ.

ಇದನ್ನು ಓದಿದ್ದೀರಾ? ಮುಂಬೈ | ಪ್ರಯಾಣಿಕರ ದಟ್ಟಣೆ: ರೈಲಿನಿಂದ ಬಿದ್ದು ಐವರು ಸಾವು, ಹಲವರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಯಾಣಿಕರ ದಟ್ಟಣೆಯಿಂದಾಗಿ ರೈಲಿನಿಂದ ಬಿದ್ದು ಐವರು ಸಾನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮವಾರ ಬೆಳಿಗ್ಗೆ ಮುಂಬೈನಲ್ಲಿ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದ ಕಾರಣ ಜನರು ಹೊರಬಿದ್ದಿದ್ದಾರೆ. ಐವರು ಮೃತಪಟ್ಟರೆ ಹಲವು ಮಂದಿ ಗಾಯಗೊಂಡಿದ್ದಾರೆ. ಕೇಂದ್ರ ರೈಲ್ವೆಯ ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(CSMT) ಕಡೆಗೆ ಹೋಗುತ್ತಿದ್ದ ಸ್ಥಳೀಯ(ಲೋಕಲ್‌) ರೈಲಿನಲ್ಲಿ 10ರಿಂದ 12 ಪ್ರಯಾಣಿಕರು ಬೋಗಿಗಳಿಂದ ಹೊರ ಬಿದ್ದಿದ್ದಾರೆ. ರೈಲು ತುಂಬಾ ಜನದಟ್ಟಣೆಯಿಂದ ತುಂಬಿತ್ತು. ಘಟನೆ ಸಂಭವಿಸಿದಾಗ ಪ್ರಯಾಣಿಕರು ಬಾಗಿಲಿನಲ್ಲಿ ನೇತಾಡುತ್ತಿದ್ದರು.

ಈ ಘಟನೆ ಬೆನ್ನಲ್ಲೇ ಸ್ವಯಂಚಾಲಿತ ಡೋರ್ ಕ್ಲೋಸ್ ವ್ಯವಸ್ಥೆ ಅಳವಡಿಸಬೇಕು ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಆಗ್ರಹಿಸಿದ್ದಾರೆ. ಈ ನಡುವೆ ರೈಲುಗಳಲ್ಲಿ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚುವ ಸೌಲಭ್ಯಗಳನ್ನು ರೈಲ್ವೆ ಮಂಡಳಿ ಘೋಷಿಸಿದೆ.

ಮುಂಬೈನ ಸ್ಥಳೀಯ ರೈಲು ವ್ಯವಸ್ಥೆಯನ್ನು ನಗರದ ಜೀವನಾಡಿ ಎಂದೇ ಕರೆಯಬಹುದು. ಪ್ರತಿದಿನ 75 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಈ ವ್ಯವಸ್ಥೆಯ ಮೇಲೆ ಅವಲಂಭಿತರಾಗಿದ್ದಾರೆ. ವಿಶೇಷವಾಗಿ ಮುಂಜಾನೆ ಮತ್ತು ಸಂಜೆಯ ಅವಧಿಯಲ್ಲಿ ಹೆಚ್ಚು ಜನದಟ್ಟಣೆ ಇರುತ್ತದೆ. ಹೀಗಾಗಿ ರೈಲುಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂಬ ಆಗ್ರಹಗಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...