ಐಪಿಸಿ, ಸಿಆರ್‌ಪಿಸಿ ಕಾಯ್ದೆಗಳಿಗೆ ಹಿಂದಿ ಪದ ಬಳಕೆ ಸಂವಿಧಾನ ವಿರೋಧಿ: ಮದ್ರಾಸ್‌ ಬಾರ್‌ ಅಸೋಸಿಯೇಷನ್‌ ಆಕ್ಷೇಪ

Date:

ಕೇಂದ್ರ ಸರ್ಕಾರ ಇತ್ತೀಚಿಗೆ ಲೋಕಸಭೆಯಲ್ಲಿ ಐಪಿಸಿ, ಸಿಆರ್‌ಪಿಸಿ ಹಾಗೂ ಎವಿಡೆನ್ಸ್ ಕಾಯ್ದೆಗಳನ್ನು ಬದಲಿಸಿ ಹಿಂದಿ ಹೆಸರುಗಳಾಗಿ ಮರು ನಾಮಕರಣ ಮಾಡಿರುವುದಕ್ಕೆ ಮದ್ರಾಸ್‌ ಬಾರ್‌ ಅಸೋಸಿಯೇಷನ್‌ ಆಕ್ಷೇಪ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್‌, ಕೇಂದ್ರ ಸರ್ಕಾರವು ಐಪಿಸಿ 1860, ಸಿಆರ್‌ಪಿಸಿ 1973 ಹಾಗೂ 1872ರ ಎವಿಡೆನ್ಸ್ ಕಾಯ್ದೆಗಳ ಬದಲಿಯಾಗಿ ಹಿಂದಿ ಹೆಸರುಗಳಾದ ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ 2023 ಎಂದು ಮರು ನಾಮಕರಣ ಮಾಡಿರುವುದು ಭಾರತ ಸಂವಿಧಾನದ ವಿರೋಧಿಯಾಗಿದೆ.

ಕೇಂದ್ರ ಸರ್ಕಾರದ ಮರುನಾಮಕರಣಗಳ ನಡೆಯನ್ನು ಮದ್ರಾಸ್ ಬಾರ್ ಅಸೋಸಿಯೇಷನ್ ಸರ್ವಾನುಮತ ನಿರ್ಧಾರದಿಂದ ಆಕ್ಷೇಪಣೆ ಹಾಗೂ ಕಳವಳ ವ್ಯಕ್ತಪಡಿಸುತ್ತದೆ. ಮಸೂದೆಗಳನ್ನು ಹಿಂದಿಯಲ್ಲಿ ಹೆಸರಿಸುವುದು ಸಂವಿಧಾನದ ನಿಬಂಧನೆಗಳಿಗೆ ವಿರುದ್ಧವಾಗಿದೆ. ಬದಲಿಯಾಗಿರುವ ಹೆಸರುಗಳನ್ನು ಮರುಪರಿಶೀಲನೆಯೊಂದಿಗೆ ಹಳೆಯ ಹೆಸರುಗಳನ್ನು ಉಳಿಸಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವರಿಗೆ ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಶೀಘ್ರದಲ್ಲೇ ಕಳುಹಿಸಲಾಗುವುದು ಎಂದು ಅಸೋಸಿಯೇಷನ್ ಅಧ್ಯಕ್ಷರಾದ ವಿ ಆರ್‌ ಕಮಲನಾಥನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IPC hindi

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು 1860ರ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಪುರಾವೆ ಕಾಯ್ದೆಗಳನ್ನು ಬದಲಿಸುವ ಮಸೂದೆಗಳನ್ನು ಅವರು ಆಗಸ್ಟ್‌ 11 ರಂದು ಲೋಕಸಭೆಯಲ್ಲಿ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ನದಿ ವಿವಾದ : ವಾಸ್ತವ ಸ್ಥಿತಿ ಕುರಿತು ವರದಿಗೆ ಸೂಚಿಸಿ ಸೆ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ಅಲ್ಲದೆ ದೇಶದ್ರೋಹ ಕಾನೂನನ್ನು ರದ್ದುಪಡಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದರು. ಪ್ರಸ್ತಾವಿತ ಕಾನೂನಿನಲ್ಲಿ ‘ದೇಶದ್ರೋಹ’ ಎಂಬ ಪದ ಇಲ್ಲ. ಅದನ್ನು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ತಂದೊಡ್ಡುವ ಕೃತ್ಯಗಳಿಗಾಗಿ ಸೆಕ್ಷನ್ 150 ಅನ್ನು ದೇಶದ್ರೋಹದ ಕಾನೂನಿನ ಬದಲಿಗೆ ಜಾರಿಗೆ ತರಲಾಗುತ್ತಿದೆ ಎಂದಿದ್ದರು.

ಕೇಂದ್ರ ಸರ್ಕಾರವು ಐಪಿಸಿ, ಸಿಆರ್‌ಪಿಸಿ ಮತ್ತು ಇಂಡಿಯನ್ ಎವಿಡೆನ್ಸ್ ಕಾಯ್ದೆ 1872 ಅನ್ನು ಪರಿಷ್ಕರಿಸಲು ಸಲಹೆಗಳನ್ನು ನೀಡಲು ಕ್ರಿಮಿನಲ್ ಕಾನೂನು ಸುಧಾರಣಾ ಸಮಿತಿಯನ್ನು ರಚಿಸಿತ್ತು. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ ರಣಬೀರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...