ಆಗ್ರಾ | ಶಸ್ತ್ರಾಸ್ತ್ರ ಹಿಡಿದು ಕರ್ನಿ ಸೇನಾ ರ್‍ಯಾಲಿ; ಮೂಕಪ್ರೇಕ್ಷಕರಾದ ಪೊಲೀಸರು

Date:

ಉತ್ತರ ಪ್ರದೇಶದ ಆಗ್ರಾದಲ್ಲಿ ಸಮಾಜವಾದಿ ಪಕ್ಷದ ಸಂಸದ ಡಾ. ರಾಮ್‌ಜಿ ಲಾಲ್ ಸುಮನ್ ವಿರುದ್ಧ ಕರ್ನಿ ಸೇನಾ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಹಲವರು ಶಸ್ತ್ರಾಸ್ತ್ರ ಹಿಡಿದು ರ್‍ಯಾಲಿ ನಡೆಸಿದ್ದಾರೆ. ಮಾರಕಾಸ್ತ್ರಗಳು ಮತ್ತು ದೊಣ್ಣೆಗಳೊಂದಿಗೆ ರ್‍ಯಾಲಿ ನಡೆಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಮೂಕಪ್ರೇಕ್ಷಕರಂತೆ ನಿಂದಿದ್ದದ್ದು ಕಂಡುಬಂದಿದೆ.

ಆಗ್ರಾದಲ್ಲಿ ನಡೆದ ರ್‍ಯಾಲಿಯಲ್ಲಿ ಕರ್ನಿ ಸೇನಾದ ಸಾವಿರಾರು ಕಾರ್ಯಕರ್ತರು ಶಸ್ತ್ರಾಸ್ತ್ರ ಹಿಡಿದು, ಅವುಗಳನ್ನು ಬೀಸುತ್ತಾ, ಜಳಪಿಸುತ್ತಾ ಮೆರವಣೆಗೆ ನಡೆಸಿದ್ದಾರೆ. ಸಮಾಜವಾದಿ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ, ಹೆಚ್ಚುವರಿ ಪೊಲೀಸ್ ಆಯುಕ್ತರು, ರಕ್ಷಣಾ ಪಡೆಗಳು ಸೇರಿದಂತೆ ಬೃಹತ್ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಪೊಲೀಸರ ನಡೆಯ ಬಗ್ಗೆ ಆಕ್ರೋಶ, ಆಕ್ಷೇಪಗಳು ವ್ಯಕ್ತವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಘಲ್ ದೊರೆ ಬಾಬರ್‌ನನ್ನು ರಜಪೂತ ರಾಜ ರಾಣಾ ಸಂಗಾ ಭಾರತಕ್ಕೆ ಆಹ್ವಾನಿಸಿದ್ದರು ಎಂದು ಎಸ್‌ಪಿ ಸಂಸದ ಡಾ. ರಾಮ್‌ಜಿ ಲಾಲ್ ಸುಮನ್ ಹೇಳಿದ್ದರು. ಇದಕ್ಕೆ ಐತಿಹಾಸಿಕ ದಾಖಲೆಗಳಿವೆ ಎಂದಿದ್ದರು. ಅವರ ಹೇಳಿಕೆಯ ವಿರುದ್ಧ ಕರ್ನಿ ಸೇನಾ ಪ್ರತಿಭಟನೆಗೆ ಕರೆಕೊಟ್ಟಿತ್ತು. ಈ ವೇಳೆ, ಕರ್ನಿ ಸೇನಾದ ಕಾರ್ಯಕರ್ತರು ಶಸ್ತ್ರಾಸ್ತ್ರ ಹಿಡಿದು ಮೆರವಣಿಗೆ ನಡೆಸಿದ್ದು, ಕಾನೂನು-ಸುವ್ಯವಸ್ಥೆಗೆ ಅಡ್ಡಿಯುಂಟುಮಾಡಿದ್ದಾರೆ.

ಇನ್ನು, ತಮ್ಮ ಹೇಳಿಕೆಗಾಗಿ ರಾಮ್‌ಜಿ ಲಾಲ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಯಾರ ಭಾವನೆಗಾದರೂ ಧಕ್ಕೆ ಉಂಟಾಗಿದ್ದರೆ, ವಿಷಾಧಿಸುವುದಾಗಿ ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...