ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ ರದ್ದು

Date:

ಅಹಮದಾಬಾದ್-ಲಂಡನ್ ಮಾರ್ಗದ ಮತ್ತು ದೆಹಲಿ-ಪ್ಯಾರಿಸ್ ಮಾರ್ಗದ ಏರ್‌ ಇಂಡಿಯಾ ವಿಮಾನವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಇತ್ತೀಚೆಗೆ ಅಹಮದಾಬಾದ್-ಲಂಡನ್ ಮಾರ್ಗದ ಏರ್‌ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ದುರಂತ ಸಂಭವಿಸಿ 270ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಈ ಎರಡು ವಿಮಾನ ರದ್ದಾಗಿರುವುದು ಮಹತ್ವವನ್ನು ಪಡೆದಿದೆ.

ಮಂಗಳವಾರ ಎರಡನೇ ಬಾರಿಗೆ ಏರ್‌ ಇಂಡಿಯಾ ವಿಮಾನವನ್ನು ರದ್ದುಪಡಿಸಲಾಗಿದೆ. ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ AI-159 ವಿಮಾನವನ್ನು ಕಾರ್ಯಾಚರಣೆಯ ಸಮಸ್ಯೆ ಕಾರಣ ನೀಡಿ ರದ್ದುಗೊಳಿಸಲಾಗಿದೆ. ಬಳಿಕ ಇದೇ ಕಾರಣ ನೀಡಿ ದೆಹಲಿ-ಪ್ಯಾರಿಸ್ ಮಾರ್ಗದ ಏರ್‌ ಇಂಡಿಯಾ ವಿಮಾನ ರದ್ದುಪಡಿಸಲಾಗಿದೆ.

ಇದನ್ನು ಓದಿದ್ದೀರಾ? ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ನಿಗೂಢ ಸಾವು; ಮತ್ತೆ ಮುನ್ನೆಲೆಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಅಹಮದಾಬಾದ್‌-ಲಂಡನ್ ಮಾರ್ಗದಲ್ಲಿ ಏರ್‌ ಇಂಡಿಯಾ AI-171 ವಿಮಾನ ಹಾರಾಡುತ್ತಿತ್ತು. ಆದರೆ ಜೂನ್ 12ರಂದು ಈ ವಿಮಾನ ಅಪಘಾತಕ್ಕೆ ಒಳಗಾಗಿದೆ. ಇದಾದ ಬಳಿಕ AI-159 ವಿಮಾನವನ್ನು ಈ ವಾಯು ಮಾರ್ಗಕ್ಕೆ ನಿಯೋಜಿಸಲಾಗಿದೆ. ಈ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3 ಗಂಟೆಗೆ ಹೊರಡಬೇಕಿತ್ತು. ಇದರಿಂದಾಗಿ ಜೂನ್ 18ರಂದು ಪ್ಯಾರಿಸ್‌ನಿಂದ ದೆಹಲಿಗೆ ಹಿಂತಿರುಗುವ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ. ಸದ್ಯ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ವಿಮಾನಯಾನ ಸಂಸ್ಥೆಯು ಹೋಟೆಲ್ ವಸತಿ ಸೌಕರ್ಯವನ್ನು ಒದಗಿಸುತ್ತಿದೆ. ಪ್ರಯಾಣಿಕರು ವಿಮಾನ ರದ್ದು ಮಾಡಬಹುದು ಅಥವಾ ಉಚಿತವಾಗಿ ಬೇರೆ ವಿಮಾನದ ಟಿಕೆಟ್ ಪಡೆಯಬಹುದು. ಸಂಪೂರ್ಣ ಮರುಪಾವತಿಯನ್ನು ನೀಡಲಾಗುತ್ತದೆ. ಆದಷ್ಟು ಬೇಗ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಏರ್‌ ಇಂಡಿಯಾ ಹೇಳಿದೆ.

ಏರ್ ಇಂಡಿಯಾ ತನ್ನ ಬೋಯಿಂಗ್ 787-8 ಮತ್ತು -9 ವಿಮಾನಗಳಲ್ಲಿಹೆಚ್ಚುವರಿ ತಪಾಸಣೆ ನಡೆಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನಿರ್ದೇಶನ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...