83ಕ್ಕೆ ಕಾಲಿಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ; ಕೇಕ್‌ ತಿನ್ನಿಸಿ ಸಂಭ್ರಮಿಸಿದ ರಾಹುಲ್‌ ಗಾಂಧಿ

Date:

ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಜುಲೈ 21-ಸೋಮವಾರ) 83ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್‌ ಸಂಸದರು ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿದರು. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್‌ ಸಂಸದರು, ಹಿರಿಯ ನಾಯಕನಿಗೆ ಆತ್ಮೀಯವಾಗಿ ಶುಭ ಕೋರಿದರು.

ಇದೇ ವೇಳೆ ಲೋಕಸಭೆ ಪ್ರತಿಪಕ್ಷ ಸಂಸದ ರಾಹುಲ್‌ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗ ಕೇಕ್‌ ತಿನ್ನಿಸಿ ಸಂಭ್ರಮಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ನಿಮಿತ್ತವಾಗಿ ತರಿಸಿದ್ದ ಕೇಕ್‌ನ್ನು ಕತ್ತರಿಸಿದ ರಾಹುಲ್‌ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕನಿಗೆ ಶುಭಾಶಯ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಮಲ್ಲಿಕಾರ್ಜುನ ಖರ್ಗೆ ಕೂಡ ರಾಹುಲ್‌ ಗಾಂಧಿ ಅವರಿಗ ಕೇಕ್‌ ತಿನ್ನಿಸಿ ಆತ್ಮೀಯತೆ ಮೆರೆದರು. ಈ ವೇಳೆ ನೆರೆದಿದ್ದ ಕಾಂಗ್ರೆಸ್‌ ಸಂಸದರೆಲ್ಲರೂ ಚಪ್ಪಾಳೆ ತಟ್ಟು ಮೂಲಕ ಸಂಭ್ರಮಿಸಿದರು. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಸಂಸದೆ ಮತ್ತು ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಗೂ ಕೇಕ್‌ ತಿನ್ನಿಸಿದರು.

ಪ್ರಿಯಾಂಕಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರೆ, ರಾಹಲ್‌ ಗಾಂಧಿ ಅವರು ಹೂಗುಚ್ಛ ನೀಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದರು.

ಇನ್ನು ಇಂದಿನಿಂದಲೇ ಸಂಸತ್ತಿನ ಮಾನ್ಸೂನ್‌ ಅಧಿವೇಶನ ಆರಂಭವಾಗಿದ್ದು, ಪಹಲ್ಗಾಮ್‌ ಭಯೋತ್ಪಾದಕ ದಾಳಿ, ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಮತ್ತು ಬಿಹಾರ ಮತದಾರ ಪಟ್ಟಿ ವಿಶೇಷ ತೀವ್ರ ವಿಚಾರಣೆ (SIR) ವಿಚಾರವಾಗಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಿದ್ಧವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...