ಮಧ್ಯಪ್ರದೇಶ | ದೇವಾಲಯದ ಬಾಗಿಲು ತೆರೆಯದ ಅರ್ಚಕರಿಗೆ ಥಳಿಸಿದ ಬಿಜೆಪಿ ಶಾಸಕರ ಪುತ್ರನ ಸಹಚರರು

Date:

ದೇವಾಲಯದ ಬಾಗಿಲು ತೆರೆಯದ ಕಾರಣ ಮಧ್ಯಪ್ರದೇಶದ ಬಿಜೆಪಿ ಶಾಸಕರ ಪುತ್ರನ ಆಪ್ತ ಸಹಾಯಕರು ಅರ್ಚಕರಿಗೆ ಥಳಿಸಿದ್ದಾರೆ. ದೇವಾಸ್‌ನ ಪ್ರಸಿದ್ಧ ಚಾಮುಂಡಾ ದೇವಿ ದೇವಾಲಯದ ಅರ್ಚಕರೊಬ್ಬರನ್ನು ಮಧ್ಯಪ್ರದೇಶದ ಇಂದೋರ್‌ನ ಬಿಜೆಪಿ ಶಾಸಕರ ಪುತ್ರನ ಆಪ್ತ ಸಹಚರರು ಥಳಿಸಿದ್ದು ತೀವ್ರ ವಿಚಾರಣೆ ನಡೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೋಲು ಶುಕ್ಲಾ ಅವರ ಪುತ್ರ ರುದ್ರಾಕ್ಷ ಶುಕ್ಲಾ ಕಳೆದ ವಾರ ಬೆಳಗಿನ ಜಾವ 12.45ರ ಸುಮಾರಿಗೆ ಬೆಂಗಾವಲು ಪಡೆಯೊಂದಿಗೆ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ದೇವಾಲಯದ ದ್ವಾರಗಳಲ್ಲಿ ಬೀಗ ಹಾಕಲಾಗಿತ್ತು. ತಡರಾತ್ರಿ ಸುಮಾರು 10 ರಿಂದ 12 ವಾಹನಗಳು ದೇವಾಲಯದ ಆವರಣಕ್ಕೆ ಬಂದಿದೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ: ಆದಿವಾಸಿ ಯುವಕನ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನಿಂದ ಮೂತ್ರ ವಿಸರ್ಜನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರುದ್ರಾಕ್ಷನ ಸಹಚರರಲ್ಲಿ ಒಬ್ಬರಾದ ದೇವಾಸ್ ನಿವಾಸಿ ಜಿತೇಂದ್ರ ರಘುವಂಶಿ, ದೇವಾಲಯದ ದ್ವಾರಗಳನ್ನು ತೆರೆಯಬೇಕೆಂದು ಅರ್ಚಕರ ಬಳಿ ಒತ್ತಾಯಿಸಿದ್ದಾರೆ. ಈ ವೇಳೆ ವಾಗ್ವಾದ ನಡೆದಿದೆ. ರಾತ್ರಿಯಲ್ಲಿ ಪ್ರವೇಶವನ್ನು ನಿಷೇಧಿಸುವ ದೇವಾಲಯದ ನಿಯಮಗಳನ್ನು ಅರ್ಚಕರಾದ ಉಪದೇಶ ನಾಥ್ ಉಲ್ಲೇಖಿಸಿದ್ದಾರೆ.

ಅರ್ಚಕರು ಬಾಗಿಲು ತೆಗೆಯಲು ನಿರಾಕರಿಸುತ್ತಿದ್ದಂತೆ ಜಿತೇಂದ್ರ ಅರ್ಚಕರನ್ನು ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಜಿತೇಂದ್ರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ನಿಂದನೆ ಮತ್ತು ದೈಹಿಕ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಜಿತೇಂದ್ರ ಹೆಸರು ಮಾತ್ರವಿದೆ. ರುದ್ರಾಕ್ಷ ಶುಕ್ಲಾ ಅವರ ಯಾವುದೇ ಉಲ್ಲೇಖವಿಲ್ಲ. ಅಷ್ಟು ಮಾತ್ರವಲ್ಲದೆ ದೂರು ನೀಡಿದ ಕೆಲವೇ ಸಮಯದಲ್ಲಿ ದೂರು ಹಿಂಪಡೆಯುವಂತೆ ಒತ್ತಾಯಿಸಿ ಕರೆ ಬಂದಿದೆ. ಆದರೆ “ನಾನು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅರ್ಚಕರು ಹೇಳಿದ್ದಾರೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿರುವ ಆರೋಪಿಗೆ ಕ್ರಿಮಿನಲ್ ಹಿನ್ನೆಲೆಯಿದೆ ಎನ್ನಲಾಗಿದೆ.

ಶಾಸಕರ ಮಗನೂ ಈ ಹಲ್ಲೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ನಾವು ದೇವಾಲಯದ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲಿಸುತ್ತಿದ್ದೇವೆ. ಎಲ್ಲಾ ಪುರಾವೆಗಳನ್ನು ಪರಿಶೀಲಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...