ಮಾಂಸಾಹಾರ ತಿನ್ನದಂತೆ ಕಿರುಕುಳ: ನೇಣಿಗೆ ಶರಣಾದ ಏರ್ ಇಂಡಿಯಾ ಪೈಲಟ್‌, ಪ್ರಿಯಕರ ಬಂಧನ

Date:

ಆಹಾರ ಪದ್ಧತಿ ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರ ಸೇವಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾದ ಮಹಿಳಾ ಪೈಲಟ್ ನೇಣಿಗೆ ಶರಣಾದ ಘಟನೆ ಮುಂಬೈನ ಅಂಧೇರಿಯ ಮರೋಲ್ ಪ್ರದೇಶದಲ್ಲಿ ನಡೆದಿದೆ.

25 ವರ್ಷದ ಸೃಷ್ಟಿ ತುಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೃಷ್ಟಿ ಬಾಯ್​ಫ್ರೆಂಡ್ 27 ವರ್ಷದ ಆದಿತ್ಯ ಪಂಡಿತ್‌ನನ್ನು ಪೊವೈ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಬೆಳಗ್ಗೆ ಅಂಧೇರಿ(ಪೂರ್ವ)ಯಲ್ಲಿರುವ ಮರೋಲ್ ಪೊಲೀಸ್ ಕ್ಯಾಂಪ್‌ನ ಹಿಂಭಾಗದ ಬಾಡಿಗೆ ನಿವಾಸದಲ್ಲಿ ತುಲಿ ಶವವಾಗಿ ಪತ್ತೆಯಾಗಿದ್ದಾಳೆ. ತನ್ನ ಬಾಯ್ ಫ್ರೆಂಡ್ ಜೊತೆಗಿನ ಜಗಳದ ನಂತರ ಆಕೆ ಡೇಟಾ ಕೇಬಲ್‌ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೃಷ್ಟಿ ತುಲಿ ಉತ್ತರ ಪ್ರದೇಶ ಮೂಲದವರಾಗಿದ್ದು, ಕಳೆದ ವರ್ಷ ಜೂನ್‌ನಿಂದ ಮುಂಬೈನಲ್ಲಿ ನೆಲೆಸಿದ್ದರು. ಅವಳು ಮತ್ತು ಆದಿತ್ಯ ಪಂಡಿತ್ ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ವಾಣಿಜ್ಯ ಪೈಲಟ್ ಕೋರ್ಸ್ ಓದುತ್ತಿದ್ದಾಗ ಪರಸ್ಪರ ಪ್ರೇಮಕ್ಕೆ ಹೊರಳಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಆದಿತ್ಯ ಪಂಡಿತ್ ಮಾಂಸಾಹಾರ ಸೇವಿಸದಂತೆ ಸೃಷ್ಟಿಯನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಸಾಕಷ್ಟು ಚರ್ಚೆಯಾಗಿ ಆಕೆಯ ಅರ್ಧದಾರಿಯಲ್ಲೇ ಬಿಟ್ಟು ಆದಿತ್ಯ ಮನೆ ಕಡೆಗೆ ತೆರಳಿದ್ದಾನೆ. ಬಳಿಕ ಸೃಷ್ಟಿ ರವಿವಾರ ಸಂಜೆ ಕೆಲಸದ ಅವಧಿ ಮುಗಿಸಿ ವಾಪಸ್ ಬಂದ ಮೇಲೂ ಆಕೆಯ ಮನೆಯಲ್ಲಿ ಜಗಳವಾಡಿದ್ದಾರೆ. ಬಳಿಕ ಆದಿತ್ಯ ಸೋಮವಾರ ಬೆಳಗ್ಗೆ 1 ಗಂಟೆಗೆ ದಿಲ್ಲಿಗೆ ಮರಳಲು ಆಕೆಯ ಬಿಟ್ಟು ತೆರಳಿದ್ದಾನೆ. ಬಳಿಕ ಸೃಷ್ಟಿ ಆದಿತ್ಯನಿಗೆ ದೂರವಾಣಿ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಪಹರಣವಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಪೊಲೀಸರು: ಕೊನೆಗೂ ತಾಯಿಯ ಮಡಿಲಿಗೆ

ಆದಿತ್ಯ ಕೂಡಲೇ ಹೊರಟು ಆಕೆಯ ಮನೆಗೆ ಧಾವಿಸಿದ್ದಾಗ ಆಕೆಯ ಮನೆ ಬಾಗಿಲು ಬೀಗ ಹಾಕಿತ್ತು. ನಕಲಿ ಕೀ ಬಳಸಿ ಒಳ ಹೋಗಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಆಕೆ ಜೀವಂತವಾಗಿರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಆಕೆಯ ಕುಟುಂಬಸ್ಥರು ಮುಂಬೈ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಆದಿತ್ಯ ಪಂಡಿತ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೂವೈ ಪೊಲೀಸ್ ಠಾಣೆಯ ಪೊಲೀಸರು ಆದಿತ್ಯನ ನವೆಂಬರ್ 29 ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...