ಏರ್‌ ಇಂಡಿಯಾ ದುರಂತ | ವಿಮಾನ ಅಪ್ಪಳಿಸಿದ ಮುನ್ನಿನ ಆ 32 ಸೆಕೆಂಡುಗಳು!

Date:

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಇತ್ತೀಚೆಗೆ ಬಿಡುಗಡೆಯಾಗಿದೆ. ವರದಿ ಪ್ರಕಾರ ಟೇಕ್-ಆಫ್ ಆದ 32 ಸೆಕೆಂಡುಗಳಲ್ಲೇ ವಿಮಾನ ದುರಂತ ಸಂಭವಿಸಿದೆ. ಈ 32 ಸೆಕೆಂಡುಗಳಲ್ಲಿ ಸಂಭವಿಸಿದ್ದು ಏನು ಎಂಬುದನ್ನು ರಾಯಿಟರ್ಸ್ ವರದಿ ಮಾಡಿದೆ.

ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ 242 ರಲ್ಲಿ 241 ಜನರು ಸೇರಿದಂತೆ ಕನಿಷ್ಠ 270 ಜನರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿದ್ದಾರೆ.

ಇದನ್ನು ಓದಿದ್ದೀರಾ? ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ಎರಡೂ ಎಂಜಿನ್‌ಗಳು ಸ್ಥಗಿತ: ಏರ್‌ ಇಂಡಿಯಾ ದುರಂತದ ತನಿಖಾ ವರದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದುರಂತದ ಪ್ರಾಥಮಿಕ ತನಿಖಾ ವರದಿ ಪ್ರಕಾರ ಟೇಕ್ ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡು ಇಂಧನ ನಿಯಂತ್ರಣ ಸ್ವಿಚ್‌ಗಳು ತ್ವರಿತವಾಗಿ ‘ಕಟ್‌ಆಫ್’ ಸ್ಥಾನಕ್ಕೆ ಮರಳಿದೆ. ಎಂಜಿನ್‌ಗಳಿಗೆ ಇಂಧನ ಪೂರೈಕೆ ಕಡಿಮೆಯಾಗಿದ್ದು, ವಿಮಾನವು ಸಂಪೂರ್ಣ ಒತ್ತಡವನ್ನೂ ಕಳೆದುಕೊಂಡಿತ್ತು. ಅಂದರೆ ಎರಡೂ ಇಂಜಿನ್‌ಗಳು ಸ್ಥಗಿತಗೊಂಡಿತ್ತು.

ಈ ಸ್ವಿಚ್‌ಗಳು ಕಾಕ್‌ಪಿಟ್‌ನ ಮಧ್ಯದ ಕನ್ಸೋಲ್‌ನಲ್ಲಿ, ಎಂಜಿನ್‌ ಥ್ರಸ್ಟ್ ಲಿವರ್‌ಗಳ ಕೆಳಭಾಗದಲ್ಲಿರುತ್ತದೆ. ಎಂಜಿನ್‌ಗಳಿಗೆ ಇಂಧನ ಹರಿವನ್ನು ನಿಯಂತ್ರಿಸಲು ಈ ಸ್ವಿಚ್‌ಗಳನ್ನು ಬಳಸಲಾಗುತ್ತದೆ. ಸಾಮಾನ್ಯವಾಗಿ ಎಂಜಿನ್ ಆರಂಭಿಸುವ ಸಮಯದಲ್ಲಿ, ನೆಲದ ಮೇಲೆ ಲ್ಯಾಂಡ್ ಆಗುವ ವೇಳೆ ಅಥವಾ ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯವಾದರೆ ಎಂಜಿನ್ ಅನ್ನು ಸ್ಥಗಿತಗೊಳಿಸಲು ಈ ಸ್ವಿಚ್‌ಗಳನ್ನು ಬಳಸಲಾಗುತ್ತದೆ.

cockpit controls X
‍X ಚಿತ್ರ

ಇಂಧನ ನಿಯಂತ್ರಣ ಸ್ವಿಚ್‌ಗಳು ‘ಸ್ಪ್ರಿಂಗ್-ಲೋಡೆಡ್ ಲಾಕಿಂಗ್’ ಅನ್ನು ಹೊಂದಿದ್ದು, ಇದು ಅನಪೇಕ್ಷಿತವಾದ ಚಲನೆಯನ್ನು ತಡೆಯುತ್ತದೆ. ಹಾರಾಟದಿಂದ ‘ಕಟ್‌ಆಫ್’ ಸ್ಥಿತಿಗೆ ವಿಮಾನವನ್ನು ತರಬೇಕಾದರೆ ಮೊದಲು ಈ ಸ್ವಿಚ್ ಅನ್ನು ಮೇಲಕ್ಕೆ ಎಳೆಯಬೇಕಾಗುತ್ತದೆ.

ಇದನ್ನು ಓದಿದ್ದೀರಾ? ತಾಂತ್ರಿಕ ದೋಷ: ಬೆಂಗಳೂರು – ಲಂಡನ್‌ ಸೇರಿ 7 ಏರ್‌ ಇಂಡಿಯಾ ವಿಮಾನಗಳ ಹಾರಾಟ ರದ್ದು

ಈ ಸ್ವಿಚ್ ಬಳಕೆಯಾಗಿದೆ ಎನ್ನಲಾಗಿದೆ. ಆದರೆ ಆಕಸ್ಮಿಕವಾಗಿ ಪೈಲಟ್‌ಗೆ ಇಂಧನ ಸ್ವಿಚ್‌ಗಳನ್ನು ಎಳೆಯುವ ಸಾಧ್ಯತೆಯೇ ಇಲ್ಲ ಎಂದು ವಾಯುಯಾನ ತಜ್ಞರು ಹೇಳುತ್ತಾರೆ. ಒಮ್ಮೆ ಸ್ಥಳಾಂತರಿಸಿದರೆ ಅದು ಎಂಜಿನ್ ಶಕ್ತಿಯನ್ನು ಕಡಿತಗೊಳಿಸುತ್ತದೆ ಎನ್ನುತ್ತಾರೆ ತಜ್ಞರು.

ಪ್ರಾಥಮಿಕ ವರದಿಯಲ್ಲಿ ವಿಮಾನ ಟೇಕ್‌ ಆಫ್ ಆಗುವ ಮೊದಲು ಮತ್ತು ಅದರ ನಂತರದ ಘಟನೆಗಳನ್ನು ವಿವರಿಸಿದೆ. ವಿಮಾನ ಟೇಕ್ ಆಫ್ ಆಗುವವರೆಗೂ ಎಲ್ಲ ವ್ಯವಸ್ಥೆಗಳು ಸಾಮಾನ್ಯವಾಗಿತ್ತು. ಅದಾದ ಬಳಿಕ ದಿಢೀರ್ ಆಗಿ ಎರಡು ಇಂಧನ ನಿಯಂತ್ರಣ ಸ್ವಿಚ್‌ಗಳು ತ್ವರಿತವಾಗಿ ‘ಕಟ್‌ಆಫ್’ ಸ್ಥಾನಕ್ಕೆ ಮರಳಿದೆ ಎಂದು ವರದಿ ಹೇಳುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...