ಪೈಲಟ್‌ಗಳ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಏರಿಸಿದ ಏರ್‌ ಇಂಡಿಯಾ

Date:

ಪೈಲಟ್‌ಗಳ ನಿವೃತ್ತಿ ವಯಸ್ಸನ್ನು 58 ರಿಂದ 65ಕ್ಕೇರಿಸಿರುವ ಏರ್‌ ಇಂಡಿಯಾ, ಇತರ ಸಿಬ್ಬಂದಿಯ ನಿವೃತ್ತಿ ವಯಸ್ಸನ್ನು ಕೂಡಾ 58 ರಿಂದ 60ಕ್ಕೇರಿಸಿದೆ.

ಈ ಹಿಂದೆ ವಿಸ್ತಾರ ಏರ್‌ಲೈನ್ಸ್‌ನಲ್ಲೂ ಪೈಲಟ್‌ಗಳ ನಿವೃತ್ತಿ ವಯಸ್ಸು 65 ಆಗಿತ್ತು ಎಂದು ಮೂಲಗಳು ಹೇಳಿವೆ. “ಕಳೆದ ನವೆಂಬರ್ ನಲ್ಲಿ ವಿಸ್ತಾರ, ಏರ್‌ ಇಂಡಿಯಾ ಜತೆಗೆ ವಿಲೀನವಾದ ಹಿನ್ನೆಲೆಯಲ್ಲಿ ಸಮಾನತೆ ತರುವ ಉದ್ದೇಶದಿಂದ ಏರ್‌ ಇಂಡಿಯಾದಲ್ಲಿ ಪೈಲಟ್‌ಗಳ ನಿವೃತ್ತಿ ವಯಸ್ಸನ್ನು 65ಕ್ಕೇರಿಸಲಾಗಿದೆ” ಎಂದು ಮೂಲಗಳು ವಿವರಿಸಿವೆ.

ಏರ್‌ ಇಂಡಿಯಾದಲ್ಲಿ 3600 ಪೈಲಟ್‌ಗಳು ಮತ್ತು 9500 ಮಂದಿ ವೈಮಾನಿಕ ತಂತ್ರಜ್ಞರು ಸೇರಿದಂತೆ 24 ಸಾವಿರ ಉದ್ಯೋಗಿಗಳಿದ್ದಾರೆ. ಪೈಲಟ್‌ಗಳ ನಿವೃತ್ತಿ ವಯಸ್ಸು ಏರಿಸಿದಂತೆ ಕ್ಯಾಬಿನ್ ತಂತ್ರಜ್ಞರ ನಿವೃತ್ತಿ ವಯಸ್ಸನ್ನೂ ಹೆಚ್ಚಿಸಲಾಗಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಏರ್‌ಲೈನ್ಸ್‌ನ ಟೌನ್‌ಹಾಲ್‌ನಲ್ಲಿ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿ ಸಿಇಓ ಮತ್ತು ಎಂಡಿ ಕ್ಯಾಂಪ್ಬೆಲ್ ವಿಲ್ಸನ್ ಅವರು ನಿವೃತ್ತಿ ವಯಸ್ಸು ಹೆಚ್ಚಿಸುವ ನಿರ್ಧಾರ ಪ್ರಕಟಿಸಿದರು ಎಂದು ತಿಳಿದು ಬಂದಿದೆ. 65 ವರ್ಷ ವಯಸ್ಸಿನವರೆಗೂ ಪೈಲಟ್‌ಗಳು ವಿಮಾನ ಚಲಾಯಿಸಲು ವಿಮಾನಯಾನ ಮಹಾ ನಿರ್ದೇಶನಾಲಯ ಅವಕಾಶ ಕಲ್ಪಿಸಿದೆ.

“ಏರ್‌ ಇಂಡಿಯಾ ಮತ್ತು ವಿಸ್ತಾರ ಪೈಲಟ್‌ಗಳ ನಡುವೆ ನಿವೃತ್ತಿ ವಯಸ್ಸೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಸಮಾಧಾನ ಇತ್ತು, ಇದೀಗ ಎಲ್ಲವನ್ನೂ ಬಗೆಹರಿಸಲಾಗಿದೆ” ಎಂದು ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...