ಜುಲೈ 15ರವರೆಗೆ 19 ಮಾರ್ಗಗಳಿಗೆ ವಿಮಾನಗಳ ಹಾರಾಟ ಕಡಿತಗೊಳಿಸಿದ ಏರ್‌ ಇಂಡಿಯಾ

Date:

ಜುಲೈ 15ರವರೆಗೆ 19 ಮಾರ್ಗಗಳಿಗೆ ವಿಮಾನಗಳ ಹಾರಾಟವನ್ನು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಕಡಿತಗೊಳಿಸಿದೆ. 118 ವಾರದ ವಿಮಾನಗಳನ್ನು ತಾತ್ಕಾಲಿಕವಾಗಿ ಕಡಿಮೆ ಮಾಡುವುದಾಗಿ ಮತ್ತು ಮೂರು ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಏರ್‌ ಇಂಡಿಯಾ ಹೇಳಿದೆ.

ಇತ್ತೀಚೆಗೆ ಟಾಟಾ ಗ್ರೂಪ್ ಒಡೆತನದ ಏರ್‌ ಇಂಡಿಯಾ ವಿಮಾನವು ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾಗಿದೆ. ಈ ವಿಮಾನ ದುರಂತದಲ್ಲಿ 260ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ಬಳಿಕ ಬೋಯಿಂಗ್ 787 ಸೇರಿದಂತೆ ಎಲ್ಲಾ ವಿಮಾನಗಳ ತಪಾಸಣೆ ಮಾಡಲಾಗುತ್ತಿದೆ.

ಇದನ್ನು ಓದಿದ್ದೀರಾ? ವಿಮಾನ ದುರಂತ | ಭವಿಷ್ಯದಲ್ಲಿ ಸಂಭವಿಸುವ ಅನಾಹುತ ತಡೆಗೆ ಉನ್ನತ ಮಟ್ಟದ ಸಮಿತಿ ರಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆ ನಡುವೆ ಅಂತಾರಾಷ್ಟ್ರೀಯ ವಿಮಾನಗಳನ್ನು ತಾತ್ಕಾಲಿಕವಾಗಿ ಶೇಕಡ 15ರಷ್ಟು ಕಡಿತಗೊಳಿಸುವುದಾಗಿ ಏರ್‌ ಇಂಡಿಯಾ ಹೇಳಿತ್ತು. ಇದೀಗ 19 ಮಾರ್ಗಗಳಿಗೆ ವಿಮಾನಗಳ ಹಾರಾಟ ಕಡಿತಗೊಳಿಸುವುದಾಗಿ ಹೇಳಿದೆ.

“3 ಮಾರ್ಗಗಳಲ್ಲಿ ಏರ್ ಇಂಡಿಯಾದ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಮತ್ತು 19 ಮಾರ್ಗಗಳಲ್ಲಿ ಆವರ್ತನವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ಬದಲಾವಣೆಗಳು ಕನಿಷ್ಠ ಜುಲೈ 15, 2025ರವರೆಗೆ ಜಾರಿಯಲ್ಲಿರುತ್ತವೆ” ಎಂದು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಗಳೂರು-ಸಿಂಗಾಪುರ, ಪುಣೆ-ಸಿಂಗಾಪುರ ಮತ್ತು ಮುಂಬೈ-ಬಾಗ್ಡೋಗ್ರ (AI551/552) ಮೂರು ಮಾರ್ಗಗಳಲ್ಲಿ ವಾರಕ್ಕೆ ಏಳು ವಿಮಾನಗಳನ್ನು ಕನಿಷ್ಠ ಜುಲೈ 15 ರವರೆಗೆ ಸ್ಥಗಿತಗೊಳಿಸಲಾಗುವುದು. ದೆಹಲಿ-ಬೆಂಗಳೂರು ಮತ್ತು ದೆಹಲಿ-ಮುಂಬೈ ಸೇರಿದಂತೆ ವಿವಿಧ ಮಾರ್ಗಗಳಲ್ಲಿನ ವಿಮಾನಗಳನ್ನು ಕಡಿಮೆ ಮಾಡಲಾಗುವುದು.

ಏರ್ ಇಂಡಿಯಾದ ಕಾರ್ಯಾಚರಣೆಯ ಸ್ಥಿರತೆಯನ್ನು ಬಲಪಡಿಸುವ ಮತ್ತು ಪ್ರಯಾಣಿಕರಿಗೆ ಕೊನೆಯ ಕ್ಷಣದಲ್ಲಿ ಅನಾನುಕೂಲತೆ ಉಂಟಾಗುವುದನ್ನು ಕಡಿಮೆ ಮಾಡಲು ಈ ನಿರ್ಧಾರ ಮಾಡಲಾಗಿದೆ ಎಂದು ಏರ್‌ ಇಂಡಿಯಾ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...