ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

Date:

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ ಗಾಳಿಯ ಗುಣಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ವಾಯು ಮಾಲಿನ್ಯದ ಕಾರಣದಿಂದಾಗಿ ಈ ಮೂರು ಜಿಲ್ಲೆಗಳಲ್ಲಿ ಗಾಳಿಯು ಅಪಾಯಕಾರಿ ಮಟ್ಟಕ್ಕೆ ತಲುಪಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ‘ಸ್ಪೇರ್ ದಿ ಏರ್-2’ ವರದಿಯು ಎಚ್ಚರಿಕೆ ನೀಡಿದೆ.

ದಕ್ಷಿಣ ಭಾರತದ ಪ್ರಮುಖ 10 ನಗರಗಳ ಗಾಳಿಯು ಮಾಲಿನ್ಯವಾಗಿದೆ. ಈ ಹತ್ತು ನಗರಗಳಲ್ಲಿ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ)ಗಳ ಪ್ರಮಾಣವು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟಗಳನ್ನು ಮೀರಿದೆ. ಇದನ್ನು ಈಗಲೇ ನಿಯಂತ್ರಿಸದಿದ್ದರೆ ಆ ಗಾಳಿಯನ್ನೇ ಉಸಿರಾಡುವ ಜನರ ಆರೋಗ್ಯಕ್ಕೆ ಅತೀ ಕೆಟ್ಟ ಪರಿಣಾಮ ಬೀರಲಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ‘ಸ್ಪೇರ್ ದಿ ಏರ್-2’ ವರದಿ ಹೇಳಿದೆ.

ದಕ್ಷಿಣ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ, ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ಗ್ರೀನ್‌ಪೀಸ್ ಇಂಡಿಯಾ ವಿಶ್ಲೇಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ

ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಲುಷಿತವಾಗಿದೆ. ಇಲ್ಲಿನ ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣ ಡಬ್ಲ್ಯುಎಚ್‌ಒ ಮಾರ್ಗಸೂಚಿ ನಿಗದಿಪಡಿಸಿದ ಮಾನದಂಡಕ್ಕಿಂತ 10 ಪಟ್ಟು ಮತ್ತು ಪಿಎಂ 10 ಕಣಗಳ ಪ್ರಮಾಣ 9 ಪಟ್ಟು ಹೆಚ್ಚಿದೆ.

ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ ಸುಮಾರು 6ರಿಂದ 7 ಪಟ್ಟು ಅಧಿಕವಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...