ವಿಶ್ವಬ್ಯಾಂಕ್ ನೂತನ ಅಧ್ಯಕ್ಷರಾಗಿ ಅಜಯ್ ಬಂಗಾ ನೇಮಕ | ಮೊದಲ ಭಾರತೀಯ ಎಂಬ ಹೆಗ್ಗಳಿಕೆ

Date:

  • ಫೆಬ್ರವರಿಯಲ್ಲಿ ಅಜಯ್‌ ಬಂಗಾ ಹೆಸರು ಸೂಚಿಸಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್
  • ವಿಶ್ವ ಬ್ಯಾಂಕ್‌ ಅಧ್ಯಕ್ಷ ಸ್ಥಾನ ಏರಿದ ಭಾರತದ ಮೊದಲಿಗ ಎಂಬ ಹೆಗ್ಗಳಿಕೆ

ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ ಅವರು ವಿಶ್ವ ಬ್ಯಾಂಕ್‌ನ ಮುಂದಿನ ಅಧ್ಯಕ್ಷರಾಗಿ ಬುಧವಾರ (ಮೇ 3) ನೇಮಕಗೊಂಡಿದ್ದಾರೆ.

ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಬಂಗಾ ಅವರ ಹೆಸರನ್ನು ಸೂಚಿಸುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಫೆಬ್ರವರಿಯಲ್ಲಿ ಘೋಷಿಸಿದ್ದರು.

ಈ ಮೂಲಕ ಬಂಗಾ ಅವರು ಈ ಹುದ್ದೆಯನ್ನು ಅಲಂಕರಿಸಿದ ಭಾರತದ ಮೊದಲಿಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಜಯ್‌ ಬಂಗಾ ಅವರು ಜೂನ್‌ 2 ರಿಂದ ಐದು ವರ್ಷಗಳ ಅವಧಿಗೆ ಹುದ್ದೆ ಅಲಂಕರಿಸಲಿದ್ದಾರೆ.

ಹವಾಮಾನ ಬದಲಾವಣೆಯಂಥ ಸವಾಲಿನ ಸಂದರ್ಭದಲ್ಲಿ ಬಂಗಾ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಸವಾಲು ಎದುರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ವಿಶ್ವಬ್ಯಾಂಕ್ ಗ್ರೂಪ್ ವಿಕಸನ ಪ್ರಕ್ರಿಯೆಯಲ್ಲಿ ಬಂಗಾ ಅವರೊಂದಿಗೆ ಕೆಲಸ ಮಾಡಲು ಮಂಡಳಿಯು ಎದುರು ನೋಡುತ್ತಿದೆ ಎಂದು ಅದು ತಿಳಿಸಿದೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಎದುರಿಸುತ್ತಿರುವ ಕಠಿಣ ಬೆಳವಣಿಗೆಯ ಸವಾಲುಗಳನ್ನು ನಿಭಾಯಿಸುವ ಗುರಿಯನ್ನು ವಿಶ್ವಬ್ಯಾಂಕ್ ಹೊಂದಿದೆ.

ಸಮೂಹದ ಎಲ್ಲ ಮಹತ್ವಾಕಾಂಕ್ಷೆಗಳು ಮತ್ತು ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಂಗಾ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ಅಜಯ್‌ ಬಂಗಾ ಅವರು ವಿಶ್ವ ಬ್ಯಾಂಕ್ ಅಧ್ಯಕ್ಷರ ಹುದ್ದೆಗೆ ಏಕೈಕ ನಾಮನಿರ್ದೇಶಿತರಾಗಿದ್ದರು. ಹುದ್ದೆಯಿಂದ ನಿರ್ಗಮಿಸಲಿರುವ ಡೇವಿಡ್ ಮಾಲ್ಪಾಸ್ ಅವರು ಬಂಗಾಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಐಟಿಗಳಲ್ಲಿ ನೆಪಕ್ಕಷ್ಟೇ ಇರುವ ಎಸ್‌ಸಿ, ಎಸ್‌ಟಿ ವಿಭಾಗಗಳು

ಅಭಿವೃದ್ಧಿ ಹೊಂದುತ್ತಿರುವ ಮತ್ತು ಉದಯೋನ್ಮುಖ ಆರ್ಥಿಕತೆಗಳಿಂದ ಕೂಡಿರುವ ವಿಶ್ವಬ್ಯಾಂಕ್‌ನ ಅಧ್ಯಕ್ಷ ಸ್ಥಾನದ ಮೇಲೆ ಅಮೆರಿಕದ ಹಿಡಿತ ನಿರಂತರವಾಗಿ ಮುಂದುವರಿದಿದೆ ಎಂಬ ಇತರ ದೇಶಗಳ ಅಸಮಾಧಾನದ ನಡುವೆ ಭಾರತದಲ್ಲಿ ಸಿಖ್ ಕುಟುಂಬದಲ್ಲಿ ಜನಿಸಿದ ಮತ್ತು ಅಮೆರಿಕ ಪ್ರಜೆಯಾಗಿರುವ 63 ವರ್ಷದ ಬಂಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರೂ ಬಂಗಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಜಯ್ ಬಂಗಾ ಅವರಿಗೆ ಕೇಂದ್ರ ಸರ್ಕಾರ 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...