ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

Date:

ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ‘ಲ್ಯಾಂಡ್‌’ ಆಗುವಾಗ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾರಾಮತಿ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶಕ್ಕೆ ವಿಮಾನ ಯತ್ನಿಸಿದೆ. ಆದರೂ, ರನ್‌ವೇಯಲ್ಲಿ ವಿಮಾನ ಪತನಗೊಂಡಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನವು ಲ್ಯಾಂಡ್‌ ಆಗುವ ಸಮಯಕ್ಕೂ ಮುನ್ನ ತಾಂತ್ರಿಕ ತೊಂದರೆಗಳು ಕಂಡುಬಂದಿವೆ. ಕೂಡಲೇ ವಿಮಾನವನ್ನು ತುರ್ತು ಭೂಸ್ಪರ್ಷಕ್ಕೆ ಯತ್ನಿಸಿದ್ದು, ಸಮಸ್ಯೆ ಉಲ್ಬಣಗೊಂಡಿದೆ. ಪರಿಣಾಮವಾಗಿ ರನ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣವನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಜಿತ್ ಪವಾರ್ ಅಲ್ಲದೆ, ಇನ್ನೂ ಯಾರೆಲ್ಲ ವಿಮಾನದಲ್ಲಿ ಇದ್ದರು ಎಂಬುದರ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಸುರಕ್ಷತಾ ಕ್ರಮವಾಗಿ ಬಾರಾಮತಿ ವಿಮಾನ ನಿಲ್ದಾಣದ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರದೇಶದ ಸುರಕ್ಷತೆ ಮತ್ತು ಪರಿಸ್ಥಿತಿಯ ನಿರ್ವಹಣೆಗಾಗಿ ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...