ಮಹಾರಾಷ್ಟ್ರ | ಚಿಕ್ಕಮ್ಮನ ನೋಡಲು ಶರದ್‌ ಪವಾರ್‌ ನಿವಾಸಕ್ಕೆ ಅಜಿತ್‌ ಪವಾರ್‌ ಭೇಟಿ

Date:

  • ಶರದ್‌ ಪವಾರ್‌ ವಿರುದ್ಧ ಜುಲೈ 2 ರಂದು ಅಜಿತ್‌ ಪವಾರ್‌ ಬಂಡಾಯ
  • ಕೈಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಶರದ್‌ ಪತ್ನಿ ಪ್ರತಿಭಾ ಪವಾರ್

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರ ಪತ್ನಿ ಪ್ರತಿಭಾ ಪವಾರ್ ಅವರನ್ನು ನೋಡಲು ಅವರ ನಿವಾಸಕ್ಕೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ (ಜುಲೈ 15) ತಿಳಿಸಿದ್ದಾರೆ.

ಅಜಿತ್ ಅವರ ಚಿಕ್ಕಮ್ಮ ಪ್ರತಿಭಾ ಪವಾರ್ ದಕ್ಷಿಣ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಶುಕ್ರವಾರ ಶರದ್‌ ಪವಾರ್‌ ಅವರ ಅಧಿಕೃತ ನಿವಾಸ ಸಿಲ್ವರ್ ಓಕ್‌ಗೆ ಮರಳಿದ್ದರು.

ಅಜಿತ್‌ ಪವಾರ್‌ ಅವರು ಶರದ್ ಪವಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚಿಕ್ಕಮ್ಮನ ಕ್ಷೇಮ ಸಮಾಚಾರ ವಿಚಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಜುಲೈ 2ರಂದು ಏಕನಾಥ ಶಿಂದೆ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಘಟನೆ ಬಳಿಕ ಅವರು ಮೊದಲ ಬಾರಿಗೆ ಸಿಲ್ವರ್‌ ಓಕ್‌ಗೆ ಭೇಟಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಸಂಪೂರ್ಣ ಮೌನ ಪ್ರತಿಜ್ಞೆ: ಕಾಂಗ್ರೆಸ್ ಆಕ್ರೋಶ

ಅಜಿತ್ ಪವಾರ್ ಅವರು ತಮ್ಮ ಚಿಕ್ಕಮ್ಮ ಪ್ರತಿಭಾ ಪವಾರ್ ಅವರಿಗೆ ಆಪ್ತರು ಎನ್ನಲಾಗಿದೆ. 2019ರಲ್ಲಿ ಬಿಜೆಪಿ ಜೊತೆ ಕೈಜೋಡಿಸಲು ಹೋದಾಗ ಅಜಿತ್ ಅವರನ್ನು ಮತ್ತೆ ಎನ್‌ಸಿಪಿ ತೆಕ್ಕೆಗೆ ತರುವಲ್ಲಿ ಪ್ರತಿಭಾ ಪವಾರ್ ನಿರ್ಣಾಯಕ ಪಾತ್ರ ವಹಿಸಿದ್ದರು.

ಎನ್‌ಸಿಪಿ ನಾಯಕರಿಂದ ಕಾಕಿ ಎಂದು ಪ್ರೀತಿಯಿಂದ ಕರೆಯಲ್ಪಡುವ ಪ್ರತಿಭಾ ಪವಾರ್‌ ಪಕ್ಷದಲ್ಲಿ ವಿಶೇಷ ಸ್ಥಾನ ಹೊಂದಿದ್ದಾರೆ. ಆದರೆ ಎಂದಿಗೂ ರಾಜಕೀಯದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...