ಉತ್ತರ ಪ್ರದೇಶ | ಸಿಎಂ ಆದಿತ್ಯನಾಥ್‌ ಹೊಗಳಿದ್ದ ಎಸ್‌ಪಿ ಶಾಸಕಿ ಪಕ್ಷದಿಂದ ಉಚ್ಚಾಟನೆ

Date:

ಸಮಾಜವಾದಿ ಪಕ್ಷ (ಎಸ್‌ಪಿ) ಗುರುವಾರ ತನ್ನ ಶಾಸಕಿ ಪೂಜಾ ಪಾಲ್ ಅವರನ್ನು ಪಕ್ಷವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತಿನ ಕಾರಣದಿಂದ ಉಚ್ಚಾಟಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶೂನ್ಯ ಸಹಿಷ್ಣುತೆ ನೀತಿಯನ್ನು ಶ್ಲಾಘಿಸಿದ ಬೆನ್ನಿಗೇ ಈ ಕ್ರಮ ಕೈಗೊಳ್ಳಲಾಗಿದೆ.

ಪೂಜಾ ಪಾಲ್, ತಮ್ಮ ಪತಿ ರಾಜು ಪಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ನ್ಯಾಯ ಒದಗಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದರು. ಪೂಜಾ ಪಾಲ್ ಅವರ ಪತಿ ರಾಜು ಪಾಲ್ 2005 ರಲ್ಲಿ ಗುಂಡಿಕ್ಕಿ ಕೊಲೆಯಾಗಿದ್ದರು. ಈ ಪ್ರಕರಣದ ಪ್ರಮುಖ ಆರೋಪಿಗಳಾದ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಷ್ರಫ್ ಅವರನ್ನು 2023 ರಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಘಟನೆಯ ಬಳಿಕ ಪಾಲ್, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆಗೆ ಕಾರಣವಾದ ಸರಕಾರದ ಕ್ರಮಗಳನ್ನು ಬಹಿರಂಗವಾಗಿ ಕೊಂಡಾಡಿದ್ದರು.

‘ವಿಝನ್ ಡಾಕ್ಯುಮೆಂಟ್ 2047’ ಕುರಿತ ವಿಧಾನಸಭೆಯ ಚರ್ಚೆಯ ಸಂದರ್ಭದಲ್ಲಿ ಪಾಲ್, “ನನ್ನ ಪತಿಯ ಕೊಲೆಗೆ ಕಾರಣರಾದವರು ಎಲ್ಲರಿಗೂ ಗೊತ್ತು. ನನ್ನ ಕಷ್ಟಕ್ಕೆ ಕಿವಿಗೊಟ್ಟು ನ್ಯಾಯ ಒದಗಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಅತೀಕ್ ಅಹ್ಮದ್‌ನಂತಹ ಕ್ರಿಮಿನಲ್‌ಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯಿಂದ ಪ್ರಯಾಗರಾಜ್‌ನ ಅನೇಕ ಮಹಿಳೆಯರಿಗೆ ನ್ಯಾಯ ಸಿಕ್ಕಿದೆ,” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಹಕಾರ ಖಾತೆ | ಡಿಕೆ ಶಿವಕುಮಾರ್ ಗುಂಪಿಗೋ, ಜಾರಕಿಹೊಳಿ ಗುಂಪಿಗೋ?

ಈ ಉಚ್ಚಾಟನೆಯಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ಎಸ್‌ಪಿಯ ಈ ಕ್ರಮವು ದಲಿತ ವಿರೋಧಿ ಮನೋಭಾವವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

“ಅಪರಾಧ ನಿಗ್ರಹಕ್ಕಾಗಿ ರಾಜ್ಯ ಸರಕಾರದ ಕ್ರಮಗಳನ್ನು ಶ್ಲಾಘಿಸಿದ್ದಕ್ಕಾಗಿ ಪೂಜಾ ಪಾಲ್ ಅವರನ್ನು ಉಚ್ಚಾಟಿಸಲಾಗಿದೆ. ಎಸ್‌ಪಿ ಕ್ರಿಮಿನಲ್‌ಗಳನ್ನು ವೋಟ್ ಬ್ಯಾಂಕ್ ಆಗಿ ಪರಿಗಣಿಸುತ್ತಿದೆ,” ಎಂದು ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪೂಜಾ ಪಾಲ್ ಅವರಿಗೆ ಇನ್ನು ಮುಂದೆ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...