ಬಿಜೆಪಿ ಭಿನ್ನಮತೀಯರಿಗೆ ‘ಮಾನ್ಸೂನ್ ಆಫರ್’ ನೀಡಿದ ಅಖಿಲೇಶ್ ಯಾದವ್

Date:

ಉತ್ತರ ಪ್ರದೇಶದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಿಜೆಪಿಯ ಭಿನ್ನಮತೀಯರಿಗೆ ಮಾನ್‌ಸೂನ್‌ ಅಫರ್‌ ನೀಡಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಉಪ ಮುಖ್ಯಮಂತ್ರಿ ನಡುವೆ ಭಿನ್ನಮತ ಉಂಟಾಗಿರುವ ಹಿನ್ನೆಲೆಯಲ್ಲಿ ಎಕ್ಸ್‌ ಮೂಲಕ ಅಖಿಲೇಶ್ ಯಾದವ್‌ ಬಿಜೆಪಿ ಭಿನ್ನರಿಗೆ ನೇರವಾಗಿ ಆಹ್ವಾನಿಸಿದ್ದಾರೆ.

“ಮಾನ್‌ಸೂನ್‌ ಆಫರ್: ನೂರು ಮಂದಿಯನ್ನು ಕರೆದುಕೊಂಡು ಬನ್ನಿ, ಸರ್ಕಾರವನ್ನು ರಚಿಸಿ” ಎಂದು ಅಖಿಲೇಶ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಪಕ್ಷದ ಮುಖಂಡರ ನಡುವೆ ಮನಸ್ತಾಪವಾಗಿರುವ ಕಾರಣ ಅಖಿಲೇಶ್ ಯಾದವ್‌ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಉತ್ತರ ಪ್ರದೇಶದ ಒಟ್ಟು 80 ಸೀಟುಗಳ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 33 ಸ್ಥಾನಗಳನ್ನು ಮಾತ್ರ ಗೆದ್ದಿತ್ತು.

ಬಿಜೆಪಿಯ ಅಂತಃಕಲಹದಲ್ಲಿ ಜನರ ಅಭಿವೃದ್ಧಿಗೆ ಪೆಟ್ಟು ಬೀಳುತ್ತಿದೆ ಎಂದು ರಾಜ್ಯ ರಾಜ್ಯಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಉಲ್ಲೇಖಿಸಿ ಅಖಿಲೇಶ್ ಯಾದವ್‌ ಹೇಳಿದ್ದರು.

“ಬಿಜೆಪಿ ಅಧಿಕಾರ, ಸರ್ಕಾರ ಹಾಗೂ ಆಡಳಿತಕ್ಕಾಗಿ ಕಿತ್ತಾಡುತ್ತಿದ್ದರೆ, ಉತ್ತರ ಪ್ರದೇಶದ ಜನರಿಗೆ ತೊಂದರೆಯಾಗುತ್ತದೆ. ಬಿಜೆಪಿ ಈ ಮೊದಲು ಇತರ ಪಕ್ಷಗಳನ್ನು ಹಾಳು ಮಾಡುತ್ತಿತ್ತು. ಆದರೆ ಈಗ ತನ್ನ ಪಕ್ಷದಲ್ಲಿಯೇ ಅದೇ ಬೆಳವಣಿಗೆ ನಡೆಯುತ್ತಿದೆ. ಬಿಜೆಪಿಯಲ್ಲಿ ಯಾರೊಬ್ಬರು ಸಾರ್ವಜನಿಕರ ಬಗ್ಗೆ ಚಿಂತಿಸುತ್ತಿಲ್ಲ” ಎಂದು ಅಖಿಲೇಶ್ ಯಾದವ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಲಖನೌದಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಉತ್ತರ ಪ್ರದೇಶ ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ಅವರು ಸರ್ಕಾರಕ್ಕಿಂತ ಪಕ್ಷ ದೊಡ್ಡದು ಎಂದು ಆದಿತ್ಯನಾಥ್ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...