ಬಿಹಾರ ಚುನಾವಣೆ | ಅಲಿನಗರವನ್ನು ಸೀತಾನಗರ ಮಾಡುತ್ತೇವೆ; ಬಿಜೆಪಿ ಸೇರಿ ಕೋಮುದ್ವೇಷಿಯಾದ ಜಾನಪದ ಗಾಯಕಿ ಮೈಥಿಲಿ

Date:

ಬಿಹಾರದ ಅಲಿನಗರವನ್ನು ಸೀತಾನಗರವೆಂದು ಮರುನಾಮಕರಣ ಮಾಡುತ್ತೇವೆ ಎಂದು ಹೇಳುವ ಮೂಲಕ ಜಾನಪದ ಗಾಯಕಿ, ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ವಿವಾದ ಸೃಷ್ಠಿಸಿದ್ದಾರೆ. ಬಿಜೆಪಿ ಸೇರುತ್ತಿದ್ದಂತೆಯೇ ಕೋಮುದ್ವೇಷದ ಭಾಷಣ ಮಾಡಲು ಆರಂಭಿಸಿದ್ದಾರೆ.

ಮೂಲತಃ ಬಿಹಾರದ ಮಿಥಿಲಾ ಪ್ರದೇಶದವರಾದ ಮೈಥಿಲಿ ಅವರ ಕುಟುಂಬವು 1990ರ ದಶಕದಲ್ಲಿ ಬಿಹಾರ ತೊರೆದು ದೆಹಲಿಯಲ್ಲಿ ನೆಲೆಸಿತ್ತು. ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ಅಲಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೈಥಿಲಿ ಠಾಕೂರ್ ಸ್ಪರ್ಧಿಸಿದ್ದಾರೆ. ಈ ಮೂಲಕ ತಾವು ಬಿಹಾರಕ್ಕೆ ಮರಳಿದ್ದೇನೆಂದು ಹೇಳಿಕೊಂಡಿದ್ದಾರೆ.

ಶುಕ್ರವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮೈಥಿಲಿ, “ಚುನಾವಣೆಯಲ್ಲಿ ನಾನು ಈ ಕ್ಷೇತ್ರದಿಂದ ಗೆದ್ದರೆ ಅಲಿನಗರವು ಸೀತಾನಗರವಾಗುತ್ತದೆ” ಎಂದು ಹೇಳಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆಗುತ್ತಿದ್ದಂತೆ ವಿವಾದದಿಂದ ತಪ್ಪಿಸಿಕೊಳ್ಳಲು ಯತ್ನಿಸಿರುವ ಮೈಥಿಲಿ, “ಇದು ನನ್ನ ಆಲೋಚನೆಯಲ್ಲ. ಈ ಸಲಹೆಯನ್ನು ಬಿಜೆಪಿ ನಾಯಕ, ಕೇಂದ್ರ ಸಚಿವ ನಿತ್ಯಾನಂದ ರೈ ಅವರು ದರ್ಭಂಗಾದಲ್ಲಿ ನಾಮಪತ್ರ ಸಲ್ಲಿಸುವ ಸಮಯದಲ್ಲಿ ನನ್ನೊಂದಿಗೆ ಹಂಚಿಕೊಂಡರು. ಕ್ಷೇತ್ರದ ಹೆಸರು ಮಿಥಿಲಾಂಚಲ್‌ನೊಂದಿಗೆ ಸಂಬಂಧ ಹೊಂದಿರಬೇಕೆಂದು ನಾನು ಭಾವಿಸಿರುವುದರಿಂದ, ಅವರ ಅವರ ಸಲಹೆಯನ್ನು ಒಪ್ಪಿಕೊಂಡೆ” ಎಂದು ಹೇಳಿಕೊಂಡಿದ್ದಾರೆ.

ರಾಜಕೀಯ ವಿಶ್ಲೇಷಕರು, ಮೈಥಿಲಿ ಅವರ ಹೇಳಿಕೆಗಳು ಮತ್ತು ಮರುನಾಮಕರಣ ಮಾಡುವ ಕಲ್ಪನೆಯು ಒಂದು ನಿರ್ದಿಷ್ಟ ಸಮುದಾಯದ ಮತಗಳನ್ನು ಧ್ರುವೀಕರಿಸುವ ಬಿಜೆಪಿಯ ತಂತ್ರವಾಗಿದೆ. ಇಂತಹ ಹೇಳಿಕೆಗಳು ಬಿಜೆಪಿ ಅಭ್ಯರ್ಥಿಗಳಿಗೆ ಲಾಭ ಮಾಡಿಕೊಡುತ್ತವೆ ಎಂದು ಬಿಜೆಪಿ ಭಾವಿಸಿದೆ ಎಂದು ಹೇಳುತ್ತಾರೆ.

ಈ ಲೇಖನ ಓದಿದ್ದೀರಾ?: ತೆರಿಗೆ ಹಂಚಿಕೆ | ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಭಾರೀ ಅನ್ಯಾಯ? ಕೇಂದ್ರದ ಸಮರ್ಥನೆಗೆ ರಾಜ್ಯ ಬಿಜೆಪಿ ಸಿದ್ದ

2020ರ ವಿಧಾನಸಭಾ ಚುನಾವಣೆಯಲ್ಲಿ, ಅಲಿನಗರ ಕ್ಷೇತ್ರವನ್ನು ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷ ಮುಖೇಶ್ ಸಹಾನಿ ನೇತೃತ್ವದ ವಿಕಾಸಶೀಲ ಇನ್ಸಾನ್ ಪಕ್ಷ (ವಿಐಪಿ)ಗೆ ನೀಡಲಾಗಿತ್ತು. ಆ ಚುನಾವಣೆಯಲ್ಲಿ ವಿಐಪಿ ಅಭ್ಯರ್ಥಿ ಮಿಶ್ರಿ ಲಾಲ್ ಯಾದವ್ ಗೆದ್ದರು. ಆದರೆ, ವಿಐಪಿ ಎನ್‌ಡಿಎ ತೊರೆದ ಬಳಿಕ, ಮಿಶ್ರಿ ಲಾಲ್ ಅವರು ಬಿಜೆಪಿ ಸೇರಿದ್ದರು. ಆದಾಗ್ಯೂ, ಕ್ರಿಮಿನಲ್ ಪ್ರಕರಣದಲ್ಲಿ ಅವರು ಶಿಕ್ಷೆಗೆ ಗುರಿಯಾಗಿದ್ದರಿಂದ ಅವರ ಶಾಸಕತ್ವವನ್ನು ಅನರ್ಹಗೊಳಿಸಲಾಗಿತ್ತು. ಆದರೆ, ಕೆಲವು ವಾರಗಳ ಹಿಂದೆ, ಅವರ ಶಾಸಕತ್ವವನ್ನು ಮರಳಿ ನೀಡಲಾಗಿದೆ. ಆದರೆ, ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀರಾಕರಿಸಿದ್ದು, ಮೈಥಿಲಿ ಠಾಕೂರ್ ಅವರನ್ನು ಕಣಕ್ಕಿಳಿಸಿದೆ.

ಅಲಿನಗರದಲ್ಲಿ ಮೈಥಿಲಿ ಮತ್ತು ಆರ್‌ಜೆಡಿಯ ವಿನೋದ್ ಮಿಶ್ರಾ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಬ್ರಾಹ್ಮಣರು, ಯಾದವರು ಹಾಗೂ ಮುಸ್ಲಿಮರು ಪ್ರಾಬಲ್ಯ ಹೊಂದಿದ್ದಾರೆ. ಮೈಥಿಲಿ ಅವರು ತಮ್ಮ ಜಾನಪದ ಮತ್ತು ಭಕ್ತಿ ಗೀತೆಗಳನ್ನು ಹಾಡುವ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ. ಇದೀಗ, ಹೆಸರು ಬದಲಿಸುವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅವರ ವಿವಾದಾತ್ಮಕ ಹೇಳಿಕೆಗೆ ಆರ್‌ಜೆಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. “ಜನರಿಗೆ ಬಿಜೆಪಿಯ ಆಟ ಮತ್ತು ತಂತ್ರದ ಬಗ್ಗೆ ತಿಳಿದಿದೆ. ಹೆಸರು ಬದಲಾವಣೆಯು ಯಾವುದೇ ಉದ್ದೇಶವನ್ನು ಪೂರೈಸುವುದಿಲ್ಲ. ಜನರು ಉದ್ಯೋಗ ಮತ್ತು ಅಭಿವೃದ್ಧಿಯನ್ನು ಬಯಸುತ್ತಾರೆ” ಎಂದು ಆರ್‌ಜೆಡಿ ಅಭ್ಯರ್ಥಿ ಮಿಶ್ರಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...