ನರೋಡಾ ಗಾಮ್ ಹತ್ಯೆ ಪ್ರಕರಣ | ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲ ಆರೋಪಿಗಳು ಖುಲಾಸೆ

Date:

  • 2002ರಲ್ಲಿ ನಡೆದಿದ್ದ ಗಲಭೆಯಲ್ಲಿ 11 ಜನರನ್ನು ಹತ್ಯೆ ಮಾಡಲಾಗಿತ್ತು
  • ಎಸ್ಐಟಿ ಪ್ರಕರಣಗಳ ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟ

ಗುಜರಾತಿನ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳು ಖುಲಾಸೆಯಾಗಿದ್ದಾರೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಕೋಮು ಗಲಭೆಯಲ್ಲಿ ಮುಸ್ಲಿಂ ಸಮುದಾಯದ 11 ಜನರನ್ನು ಹತ್ಯೆಗೈಯಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 86 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆಗೆ ಯತ್ನ), 143 (ಕಾನೂನುಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧಗಳಿಂದ ಶಸ್ತ್ರಸಜ್ಜಿತವಾದ ಗಲಭೆ), 120 (ಬಿ) (ಕ್ರಿಮಿನಲ್ ಪಿತೂರಿ) 150 ( ಕೋಮು ಹಿಂಸಾಚಾರಕ್ಕೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಒಟ್ಟು ಆರೋಪಿಗಳಲ್ಲಿ 18 ಜನರು ಈಗಾಗಲೇ ಮೃತಪಟ್ಟಿದ್ದರು. ಉಳಿದ 68 ಮಂದಿಯನ್ನು ಪ್ರಕರಣದಿಂ ಆರೋಪ ಮುಕ್ತಗೊಳಿಸಿ ಎಸ್ಐಟಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಸ್‌ಕೆ ಬಾಕ್ಸಿ ಅವರು ತೀರ್ಪು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ 2010ರಲ್ಲಿ ಆರಂಭವಾದ ವಿಚಾರಣೆಯ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ 187 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸುಮಾರು 13 ವರ್ಷಗಳ ಕಾಲ 6 ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಿದ್ದಾರೆ ಎಂದು ವಿಶೇಷ ಪ್ರಾಸಿಕ್ಯೂಟರ್ ಸುರೇಶ್ ಶಾ ತಿಳಿಸಿದ್ದಾರೆ.

ಘಟನೆ ಏನು?

2002ರ ಫೆ. 27ರಂದು ಗೋಧ್ರಾದಲ್ಲಿ ಅಯೋಧ್ಯೆಯಿಂದ ಮರಳುತ್ತಿದ್ದ ಕರಸೇವಕರಿದ್ದ ಸಾಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಭೋಗಿಗೆ ಬೆಂಕಿ ಹಚ್ಚಿಲಾಗಿತ್ತು. ಘಟನೆಯಲ್ಲಿ 58 ಜನರು ಸಾವನ್ನಪ್ಪಿದ್ದರು. ಘಟನೆಯಿಂದ ಗುಜರಾತ್‌ನಾದ್ಯಂತ ಕೋಮು ಹಿಂಸಾಚಾರ ಭುಗಿಲೆದ್ದಿತ್ತು. ಅಹಮದಾಬಾದ್ ನಗರದ ನರೋಡಾ ಗಾಮ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ 11 ಮಂದಿಯನ್ನು ಕೊಲೆ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? : ಸಲಿಂಗ ವಿವಾಹ ಮಾನ್ಯತೆ | ದೈಹಿಕ ಸಂಬಂಧ ಮಾತ್ರವಲ್ಲ ಭಾವನಾತ್ಮಕ ಸಂಬಂಧ ಹೊಂದಿದೆ : ಡಿ ವೈ ಚಂದ್ರಚೂಡ್

2002ರಲ್ಲಿ ಗುಜರಾತ್‌ನಲ್ಲಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಆ ಸರ್ಕಾರದಲ್ಲಿ ಮಾಯಾ ಕೊಡ್ನಾನಿ ಸಚಿವರಾಗಿದ್ದರು. ಕೊಡ್ನಾನಿ ಅವರು 97 ಜನರನ್ನು ಕಗ್ಗೊಲೆ ಮತ್ತು ನರೋಡಾ ಪಾಟಿಯಾ ಗಲಭೆ ಪ್ರಕರಣದಲ್ಲಿ ಅಪರಾಧಿ ಮತ್ತು 28 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ನಂತರ ಆಕೆಯನ್ನು ಗುಜರಾತ್ ಹೈಕೋರ್ಟ್ ಬಿಡುಗಡೆಗೊಳಿಸಿತ್ತು. ಸೆಪ್ಟೆಂಬರ್ 2017ರಲ್ಲಿ ಈಗಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಯಾ ಕೊಡ್ನಾನಿ ಪರ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದರು.

2002ರಲ್ಲಿ ನಡೆದ 9 ಪ್ರಮುಖ ಕೋಮು ಗಲಭೆ ಪ್ರಕರಣಗಳಲ್ಲಿ ಒಂದಾಗಿದ್ದ ನರೋಡಾ ಗಾಮ್ ಹತ್ಯಕಾಂಡ ಪ್ರಕರಣದಲ್ಲಿ ಆಕೆಯ ಮೇಲೆ ಗಲಭೆ, ಕೊಲೆ ಮತ್ತು ಕೊಲೆ ಯತ್ನದ ಜೊತೆಗೆ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿತ್ತು. ನರೋಡಾ ಗಾಮ್‌ ಹತ್ಯಾಕಾಂಡ ಕುರಿತು ಎಸ್‌ಐಟಿ ಮತ್ತು ವಿಶೇಷ ನ್ಯಾಯಾಲಯ ತನಿಖೆ ಮತ್ತು ವಿಚಾರಣೆ ನಡೆಸುತ್ತಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...