ಬ್ಲ್ಯಾಕ್‌ಮೇಲ್ ಆರೋಪ; ಮಾಜಿ ಪ್ರೇಮಿಯ ಮೇಲೆ ಆ್ಯಸಿಡ್ ಎರಚಿದ ಯುವತಿ

Date:

ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಲುಗೆ ಬೆಳೆಸಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ತಮ್ಮ ಮಾಜಿ ಪ್ರೇಮಿಯ ಮೇಲೆ ಯುವತಿಯೊಬ್ಬರು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನಲ್ಲಿ ನಡೆದಿದೆ.

ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕ ವಿವೇಕ್‌ನನ್ನು ಭೇಟಿ ಮಾಡಲು ರೆಸ್ಟೋರೆಂಟ್‌ಗೆ ಕರೆದಿದ್ದ ಯುವತಿ, ಮಾತನಾಡುತ್ತಿದ್ದ ಸಮಯದಲ್ಲಿ ಬಾಟಲಿಯದ್ದ ತಂದಿದ್ದ ಆ್ಯಸಿಡ್ಅನ್ನು ಆತನ ಮೇಲೆರಚಿದ್ದಾರೆ. ಘಟನೆಯಲ್ಲಿ ಯುವಕನಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

“ಆ ಯುವಕ ನನ್ನನ್ನು ಮದುವೆಯಾಗುವುದಾಗಿ ಹೇಳಿದ್ದ. ಆದರೆ, ನನಗೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದ. ಪದೇ-ಪದೇ ಹಣ ಕೊಡುವಂತೆ ಪೀಡಿಸುತ್ತಿದ್ದ ಆತನ ಕಿರುಕುಳ ಸಹಿಸಲಾಗದೆ, ಆ್ಯಸಿಡ್ ಎರಚದ್ದೇನೆ” ಎಂದು ಯುವತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕನ ಕೈಗೆ ಸುಟ್ಟ ಗಾಯಗಳಾಗಿವೆ. ಪೊಲೀಸರು ಬರುವಷ್ಟರಲ್ಲಿ ಆತ ತನ್ನ ಶರ್ಟ್ ತೆಗೆದು ರೆಸ್ಟೋರೆಂಟ್ ನಿಂದ ಪರಾರಿಯಾಗಿದ್ದ. ಏತನ್ಮಧ್ಯೆ, ಮಹಿಳೆ ಮತ್ತು ಆಕೆಯ ತಾಯಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮಹಿಳೆಗೂ ಸುಟ್ಟ ಗಾಯಗಳಾಗಿದ್ದು, ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಯುವಕ ಮತ್ತು ಯುವತಿ ಒಬ್ಬರಿಗೊಬ್ಬರು ಪರಿಚಿತರಿದ್ದರು. ಅವರಿಬ್ಬರಿಗೂ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವು. ಘಟನೆ ಬಳಿಕ ಯುವಕ ಪರಾರಿಯಾಗಿದ್ದಾನೆ” ಎಂದು ಸಹಾಯಕ ಪೊಲೀಸ್ ಕಮಿಷನರ್ ಮಯಾಂಕ್ ಪಾಠಕ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...