ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ; ರೈಲಿನಲ್ಲಿ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

Date:

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಮೇಲೆ ರೈಲ್ವೇ ನೌಕರನೊಬ್ಬನನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ನಡೆದಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ರೈಲ್ವೇ ಸಿಬ್ಬಂದಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬಾಲಕಿ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ರೈಲ್ವೇ ಸಿಬ್ಬಂದಿಯನ್ನು ಹಿಡಿದ ಕುಟುಂಬಸ್ಥರು ಮತ್ತು ಇತರ ಪ್ರಯಾಣಿಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಬಿಹಾರದ ಸಿವಾನ್‌ ಮೂಲದ ಕುಟುಂಬವು ರೈಲಿನಲ್ಲಿ ದೆಹಲಿಗೆ ತೆರಳುತ್ತಿತ್ತು. ಈ ವೇಳೆ, ಅದೇ ಕೋಚ್‌ನಲ್ಲಿದ್ದ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಎಂಬಾತ ಬಾಲಕಿಯನ್ನು ತನ್ನ ಸೀಟ್‌ನಲ್ಲಿ ಕೂರಿಸಿಕೊಂಡಿದ್ದ. ಬಾಲಕಿಯ ತಾಯಿ ಶೌಚಾಲಯಕ್ಕೆ ತೆರಳಿದಾಗ, ಆತ ಬಾಲಕಿಯೊಂದಿಗೆ ವರ್ತಿಸಿದ್ದಾನೆ. ಬಾಲಕಿ ತನ್ನ ತಾಯಿ ಮರಳಿ ಬಂದಾಗ ಆತನ ಅಸಭ್ಯ ವರ್ತನೆಯ ಬಗ್ಗೆ ತಿಳಿಸಿದ್ದಾಳೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಗ್ಗೆ ಬಾಲಕಿಯ ತಾಯಿ ತನ್ನ ಪತಿ ಮತ್ತು ಕುಟುಂಬಸ್ಥರಿಗೆ ಹಾಗೂ ಇತರ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಕೋಪಗೊಂಡ ಪ್ರಯಾಣಿಕರು ಮತ್ತು ಕುಟುಂಬಸ್ಥರು ಪ್ರಶಾಂತ್ ಕುಮಾರ್ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್‌ನನ್ನು ಉತ್ತರ ಪ್ರದೇಶದ ಕಾನ್ಪುರ ರೈಲು ನಿಲ್ದಾಣದಲ್ಲಿ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಟುಂಬಸ್ಥರು ಆತನ ವಿರುದ್ಧ ದೂರು ನೀಡಿದ್ದಾರೆ. ಗಂಭೀರ ಪರಿಸ್ಥಿತಿಯಲ್ಲಿದ್ದ ಪ್ರಶಾಂತ್‌ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆತ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...