ಆಲಮಟ್ಟಿ ಎತ್ತರ ಹೆಚ್ಚಳ: ಕರ್ನಾಟಕದ ವಿರುದ್ಧ ಕೇಂದ್ರಕ್ಕೆ ಮಹಾರಾಷ್ಟ್ರ ಪತ್ರ

Date:

ಬಾಗಲಕೋಟೆ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸರ್ಕಾರ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸದಂತೆ ಕರ್ನಾಟಕವನ್ನು ತಡೆಯಿರಿ ಎಂದು ಒತ್ತಾಯಿಸಿದೆ

ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿರುವ ಮಹಾರಾಷ್ಟ್ರ ನೀರಾವರಿ ಸಚಿವ ರಾಧಾಕೃಷ್ಣ ಪಾಟೀಲ್ ಅವರು ಕರ್ನಾಟಕದ ವಿರುದ್ಧ ದೂರು ನೀಡಿದ್ದಾರೆ. “ಕರ್ನಾಟಕವು ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸಲು ಮುಂದಾಗಿದೆ. ಇದು ಕಾರ್ಯಗತವಾದರೆ, ಜಲಾಶಯದ ಹಿನ್ನೀರಿನಿಂದ ಮಹಾರಾಷ್ಟ್ರದ ಸಾಂಗ್ಲಿ, ಸತಾರಾ ಹಾಗೂ ಕೊಲ್ಹಾಪುರ ಜಿಲ್ಲೆಯ ಕೆಲವು ಪ್ರದೇಶಗಳು ಮುಳುಗುವ ಮತ್ತು ಪ್ರವಾಹ ಉಂಟಾಗುವ ಸಾಧ್ಯತೆಗಳು ದಟ್ಟವಾಗಿವೆ” ಎಂದು ಆರೋಪಿಸಿದ್ದಾರೆ.

“ಜಲಾಶಯದ ಎತ್ತರ ಹೆಚ್ಚಿಸುವುದರಿಂದ, ಮಹಾರಾಷ್ಟ್ರದ ಗಡಿ ಭಾಗದಲ್ಲಿ ಗಂಭೀರ ಪರಿಣಾಮಗಳು ಎದುರಾಗುತ್ತವೆ. ಇದು, ಪರಿಸರ ಮತ್ತು ಮನುಷ್ಯರ ಮೇಲೆ ನಾನಾ ಹಾನಿಗೆ ಕಾರಣವಾಗುತ್ತದೆ. ಇದೆಲ್ಲವನ್ನೂ ಪರಿಗಣಿಸಿಯೇ ಮಹಾರಾಷ್ಟ್ರವು ಕರ್ನಾಟಕದ ಯೋಜನೆಯನ್ನು ನಿರಂತರವಾಗಿ ಆಕ್ಷೇಪಿಸುತ್ತಲೇ ಬಂದಿದೆ. ಜಲಾಶಯ ಎತ್ತರದಿಂದ ಆಗುವ ನಷ್ಟಗಳ ಎಲ್ಲ ಅಂಕಿಅಂಶಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ. ಕೇಂದ್ರ ಸರ್ಕಾರವು ಕರ್ನಾಟಕದ ಪ್ರಸ್ತಾಪವನ್ನು ರದ್ದುಗೊಳಿಸಬೇಕು” ಎಂದು ಕೇಂದ್ರ ಸಚಿವರನ್ನು ರಾಧಾಕೃಷ್ಣ ಪಾಟೀಲ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...