ಟ್ರಕ್ ಚಾಲಕರ ಜೊತೆಗಿನ ಪಯಣ-ಸಂವಾದ ವಿಡಿಯೋ ಹಂಚಿಕೊಂಡ ರಾಹುಲ್ ಗಾಂಧಿ

Date:

  • ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪಯಣಿಸಿದ್ದ ರಾಹುಲ್ ಗಾಂಧಿ
  • ರಾಷ್ಟ್ರೀಯ ಹೆದ್ದಾರಿ 44ರ ಮುರ್ತಾಲ್ ಢಾಬಾದಲ್ಲಿ ಚಾಲಕರ ಜೊತೆ ಮಾತುಕತೆ

ಇತ್ತೀಚೆಗೆ ದೆಹಲಿಯಿಂದ ಪಂಜಾಬ್‌ಗೆ ಟ್ರಕ್‌ನಲ್ಲಿ ಪಯಣಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಪ್ರಯಾಣ ಹಾಗೂ ಟ್ರಕ್ ಚಾಲಕರೊಂದಿಗಿನ ಮಾತುಕತೆಯನ್ನು ಅಧಿಕೃತ ಯುಟ್ಯೂಬ್‌ ವಾಹಿನಿಯಲ್ಲಿ ಸೋಮವಾರ (ಮೇ 29) ಹಂಚಿಕೊಂಡಿದ್ದಾರೆ.

ಭಾರತ್‌ ಜೋಡೋ ಯಾತ್ರೆಯ ನಂತರ ಈಗಲೂ ಜನರ ಜತೆಗೆ ರಾಹುಲ್‌ ಅವರು ಸಂವಾದ ನಡೆಸುತ್ತಿದ್ದಾರೆ. ಟ್ರಕ್‌ ಪಯಣದ ವೇಳೆ ರಾಷ್ಟ್ರೀಯ ಹೆದ್ದಾರಿ 44ರಲ್ಲಿಯ ಮುರ್ತಾಲ್‌ ಪ್ರದೇಶದ ಢಾಬಾದಲ್ಲಿ ಟ್ರಕ್‌ ಚಾಲಕರೊಂದಿಗೆ ಮಾತುಕತೆ ನಡೆಸಿದರು.

ಟ್ರಕ್ ಚಾಲಕರೊಂದಿಗಿನ ಪ್ರಯಾಣ ಒಂದು ಅದ್ಭುತ ಅನುಭವ ಎಂದು ರಾಹುಲ್ ಟ್ವಿಟರ್‌ನಲ್ಲೂ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಸೋಮವಾರ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲೇ ಪ್ರಯಾಣಿಸಿದ್ದ ರಾಹುಲ್ ಗಾಂಧಿ ಚಾಲಕರ ಜತೆ ಮಾತನಾಡಿ ಅವರ ಕುಂದು ಕೊರತೆ ಆಲಿಸಿದ್ದರು. ಆ ಪ್ರಯಾಣದ ವಿಡಿಯೋವನ್ನು ರಾಹುಲ್ ಈಗ ಹಂಚಿಕೊಂಡಿದ್ದಾರೆ.

ಬಿಳಿ ಟಿ ಶರ್ಟ್ ಧರಿಸಿರುವ ರಾಹುಲ್‌ ಅವರು ಟ್ರಕ್‌ನೊಳಗೆ ಕುಳಿತು ಚಾಲಕರೊಂದಿಗೆ ಪ್ರಯಾಣಿಸುತ್ತಿರುವುದು ಮತ್ತು ಢಾಬಾದಲ್ಲಿ ಇತರ ಚಾಲಕರೊಂದಿಗೆ ಮಾತನಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿದೆ.

“ಆರು ಗಂಟೆಗಳ ಕಾಲದ ದೆಹಲಿ-ಚಂಡೀಗಢ ಪ್ರಯಾಣದಲ್ಲಿ ಟ್ರಕ್‌ ಚಾಲಕರ ಜೊತೆ ಆಸಕ್ತಿದಾಯಕ ಮಾತುಕತೆ ನಡೆಸಿದೆ. 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವುದರಿಂದ ಅವರು ಭಾರತದ ಪ್ರತಿ ಮೂಲೆಯನ್ನು ಒಗ್ಗೂಡಿಸುತ್ತಾರೆ” ಎಂದು ರಾಹುಲ್‌ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಟ್ರಕ್ ಚಾಲಕರ ಜೊತೆಗಿನ ಪಯಣವನ್ನು ತಮ್ಮ ಅಧಿಕೃತ ಯೂಟ್ಯೂಬ್ ಪುಟದಲ್ಲಿಯೂ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ ವಿವಿಯಲ್ಲಿ ಗಾಂಧಿ ಚಿಂತನೆ ಬದಲಿಗೆ ಸಾವರ್ಕರ್ ಚಿಂತನೆ ಓದಿಗೆ ಒತ್ತು; ಅಧ್ಯಾಪಕರ ವಿರೋಧ

ಪಯಣದ ವೇಳೆ ಉತ್ತರ ಪ್ರದೇಶದ ಫಿರೋಜಾಬಾದ್‌ನ ಪ್ರೇಮ್‌ ರಜ್‌ಪೂತ್‌ ಅವರು ರಾಹುಲ್‌ ಅವರ ಜೊತೆಯಾದರು. ಪಯಣದಲ್ಲಿ ರಜಪೂತ್‌ ಅವರ ಸಹಚರ ರಾಕೇಶ್‌ ಅವರೂ ಇದ್ದರು ಎಂದು ವಿಡಿಯೋ ತೋರಿಸಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಬಹುಮತ ಪಡೆದರೆ ಟ್ರಕ್‌ ಚಾಲಕರ ಸಮಸ್ಯೆಗಳನ್ನು ನೀಗಿಸಲು ಕ್ರಮ ಕೈಗೊಳ್ಳುವುದಾಗಿ ರಾಹುಲ್‌ ಅವರು ಚಾಲಕರ ಜೊತೆಗಿನ ಸಂವಾದದ ವೇಳೆ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...