ಅಮೆಜಾನ್, ಫ್ಲಿಪ್‌ಕಾರ್ಟ್ ಹಾವಳಿ – ಆತಂಕದಲ್ಲಿದೆ ಚಿಲ್ಲರೆ ವ್ಯಾಪಾರ; ಇ-ಕಾಮರ್ಸ್‌ ನೀತಿ ಜಾರಿಗೆ ಆಗ್ರಹ

Date:

ಭಾರತೀಯ ಚಿಲ್ಲರೆ ವ್ಯಾಪಾರ ವ್ಯವಸ್ಥೆಯ ಮೇಲೆ ಅಮೆಜಾನ್, ಫ್ಲಿಪ್‌ಕಾರ್ಟ್‌ನಂತರ ಇ-ಕಾಮರ್ಸ್ ದೈತ್ಯ ಸಂಸ್ಥೆಗಳು ಕರಿನೆರಳು ಆವರಿಸಿದೆ. ದೈತ್ಯ ಸಂಸ್ಥೆಗಳು ಚಿಲ್ಲರೆ ವ್ಯಾಪಾರವನ್ನು ನಾಶ ಮಾಡುತ್ತಿವೆ. ಚಿಲ್ಲರೆ ವ್ಯಾಪಾರ ಸಮೂಹ ನಾಮಾವಶೇಷವಾದಂತೆ ತಡೆಯಬೇಕು. ಅದಕ್ಕಾಗಿ, ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ), ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ), ಆಲ್ ಇಂಡಿಯಾ ಮೊಬೈಲ್ ರಿಟೇಲರ್ಸ್ಸ್ ಅಸೋಸಿಯೇಷನ್ (ಎಐಎಂಆರ್‌ಎ) ಬಿಡುಗಡೆ ಮಾಡಿರುವ ಸಮಗ್ರ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಎಐಎಂಆರ್‌ಎ ಒತ್ತಾಯಿಸಿದೆ.

ಶಿಫಾರಸ್ಸುಗಳನ್ನು ಪರಿಗಣಿಸಿ ಕಟ್ಟುನಿಟ್ಟಾದ ಇ-ಕಾಮರ್ಸ್‌ ನೀತಿಯಲ್ಲಿ ಜಾರಿಗೆ ತರಬೇಕೆಂದು ಆಗ್ರಹಿಸಿ ಎಐಎಂಆರ್‌ಎನ ರಾಜ್ಯಾಧ್ಯಕ್ಷ ರವಿ ಕುಮಾರ್, ಬೆಂಗಳೂರು ವಲಯ ಉಪಾಧ್ಯಕ್ಷ ಜಿ. ನಾಗರಾಜ ನಾಯ್ಡು ಕಾರ್ಯದರ್ಶಿ ಸುಹಾಸ್ ಕಿಣಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. “ದಸರಾ ಹಬ್ಬದ ಮಾರಾಟದಲ್ಲಿ ಇ-ಕಾಮರ್ಸ್‌ಗಳ ಒಟ್ಟು ಸರಾಸರಿ ವ್ಯಾಪಾರದಲ್ಲಿ ಶೇ.70ರಷ್ಟು ಮೊಬೈಲ್‌ಗಳೇ ಮಾರಾಟವಾಗಿವೆ. ಇದು, ರಿಟೇಲ್ ವ್ಯಾಪಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಚಿಲ್ಲರೆ ವ್ಯಾಪಾರ ವ್ಯವಸ್ಥೆಯನ್ನು ರಕ್ಷಿಸಬೇಕೆಂಬ ಸಂದೇಶ ನೀಡಿದೆ. ಚಿಲ್ಲರೆ ವ್ಯಾಪಾರ ಕ್ಷೇತ್ರ ಉಳಿಯಲು ಕಟ್ಟುನಿಟ್ಟಾದ ಇ-ಕಾಮರ್ಸ್ ನೀತಿಯನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ಒಂಬುಡ್ಸ್ ಮನ್ ವ್ಯವಸ್ಥೆಯನ್ನು ಅಳವಡಿಸಬೇಕು. ಬಿ2ಸಿ ಇ-ಕಾಮರ್ಸ್ ವಹಿವಾಟಿಗೆ ಜಿಎಸ್‌ಟಿ ಇನ್‌ಪುಟ್ ತೆರಿಗೆ ರದ್ದುಪಡಿಸಬೇಕು. ವಿಶೇಷವಾಗಿ, ಕ್ಯಾಶ್ ಬ್ಯಾಕ್ ಪ್ರೋತ್ಸಾಹ ಮತ್ತು ಹಬ್ಬಗಳ ಋತುವಿನ ವಿಶೇಷ ಮಾರಾಟ ಉತ್ಸವಗಳನ್ನು ರದ್ದುಪಡಿಸಿ ಇ-ಕಾಮರ್ಸ್ ಮೇಲೆ ವಿಲಾಸಿ ತೆರಿಗೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತೀಯ ಚಿಲ್ಲರೆ ವಲಯದ ಮೇಲೆ ಇ-ಕಾಮರ್ಸ್ ದೈತ್ಯರಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ನಿಂದ ವ್ಯಾಪಕ ಹಾನಿಕಾರಕ ಪರಿಣಾಮಗಳು ಉಂಟಾಗುತ್ತಿವೆ. ಇದನ್ನು ತಡೆಗಟ್ಟದಿದ್ದರೆ ಚಿಲ್ಲರೆ ವ್ಯಾಪಾರ ಕ್ಷೇತ್ರ ಕುಸಿದು ಬೀಳಲಿದೆ. ಈ ಎರಡೂ ದೊಡ್ಡ ಸಂಸ್ಥೆಗಳು ಎಲ್ಲ ವಲಯಗಳಲ್ಲೂ ತನ್ನ ಜಾಲವನ್ನು ವ್ಯಾಪಿಸಿಕೊಂಡಿವೆ. ಸ್ಪರ್ಧಾತ್ಮಕ ವ್ಯಾಪಾರ ವ್ಯವಸ್ಥೆಯನ್ನು ಹಾಳುಗೆಡವಿದೆ. ಎರಡೂ ವೇದಿಕೆಗಳು ವಿಶೇಷ ಉತ್ಪನ್ನಗಳ ಬಿಡುಗಡೆಗಳಿಗಾಗಿ ಸ್ಮಾರ್ಟ್ಫೋನ್ ಮತ್ತು ತಂತ್ರಜ್ಞಾನ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿವೆ. ತಮ್ಮ ಆದ್ಯತೆಯ ಮಾರಾಟಗಾರರಿಗೆ ಆಳವಾದ ರಿಯಾಯಿತಿಗಳನ್ನು ನೀಡುತ್ತಿರುವುದರಿಂದ ಚಿಲ್ಲರೆ ಮಾರಾಟ ವಲಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ” ಎಂದಿದ್ದಾರೆ.

“ಈ ಸಂಸ್ಥೆಗಳು ಮಾರುಕಟ್ಟೆಯಲ್ಲಿ ಏಕಸ್ವಾಮ್ಯತೆ ಸಾಧಿಸಿವೆ. ವಸ್ತುಗಳ ದರ ನಿಗದಿ ಮಾಡುವಲ್ಲಿಯೂ ತನ್ನ ಪ್ರಭಾವ ಬೀರುತ್ತಿವೆ. ವಿದೇಶಿ ನೇರ ಬಂಡವಾಳ ಹೂಡಿಕೆ ನಿಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಪ್ರಮುಖ ಬ್ರ್ಯಾಂಡ್‌ಗಳ ಮತ್ತು ಇ-ಕಾಮರ್ಸ್ ವೇದಿಕೆಗಳ ನಡುವಿನ ಉನ್ನತ ಮಟ್ಟದ ಒಪ್ಪಂದಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ತಪ್ಪಿತಸ್ಥ ಕಂಪನಿಗಳು ಮತ್ತು ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನ್ಯಾಯಯುತ ವ್ಯಾಪಾರ ಅಭ್ಯಾಸಗಳನ್ನು ಉತ್ತೇಜಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...