ಅಂಬಾನಿ ಒಡೆತನದ ಮೃಗಾಲಯಕ್ಕೆ ದೇವಾಲಯದ ಆನೆ

Date:

ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ (ಮೃಗಾಲಯ) ಕೊಲ್ಲಾಪುರದ ನಂದನಿ ಮಠದಲ್ಲಿರುವ ದೇವಾಲಯದ ಆನೆಯನ್ನು ಕೇಂದ್ರ ಸರ್ಕಾರ ಸ್ಥಳಾಂತರಿಸಿದೆ. ಈ ನಡೆಯನ್ನು ಮಹಾರಾಷ್ಟ್ರ ಮತ್ತು ಕರ್ನಾಟಕದ ಜೈನ ಸಮುದಾಯವು ವಿರೋಧಿಸಿದೆ.

ಪೆಟಾ-ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆನೆಯನ್ನು ವಂತಾರ ಮೃಗಾಲಯಕ್ಕೆ ವರ್ಗಾಯಿಸಲು ಸೂಚಿಸಿತ್ತು. ಅದರಂತೆ ಆನೆಯನ್ನು ಸ್ಥಳಾಂತರ ಮಾಡಲಾಗಿದೆ. ಆದರೆ, ಈ ಕ್ರಮವನ್ನು ಅನೇಕ ಜೈನರು ಖಂಡಿಸಿದ್ದಾರೆ. ಆನೆಯನ್ನು ಅನಂತ್ ಅಂಬಾನಿಯ ಖಾಸಗಿ ಉದ್ಯಮವಾಗಿರುವ ವಂತಾರ ಕೇಂದ್ರದಲ್ಲಿ ಇರಿಸುವ ಬದಲು ಮಠಕ್ಕೆ ಹಿಂತಿರುಗಿಸಬೇಕು ಅಥವಾ ಸರ್ಕಾರಿ ಮೃಗಾಯಲಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಜೈನ ಸಮುದಾಯದವರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಭಾರತದಾದ್ಯಂತದ ಪ್ರಮುಖ ಜೈನ ಸಂತರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಆನೆಯನ್ನು ಮಠಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ಅರ್ಜಿ ಸಲ್ಲಿಸಲು ಉದ್ದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...