ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲೇ ದೆಹಲಿ ವಿವಿ ಪ್ರಾಧ್ಯಾಪಕರಿಗೆ ಎಬಿವಿಪಿ ಸದಸ್ಯೆಯಿಂದ ಹಲ್ಲೆ

Date:

ದೆಹಲಿ ವಿವಿಯ ಡಾ.ಭೀಮರಾವ್ ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೊಬ್ಬರಿಗೆ ದೆಹಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಜಂಟಿ ಕಾರ್ಯದರ್ಶಿ, ಎಬಿವಿಪಿ ಸದಸ್ಯೆ ದೀಪಿಕಾ ಝಾ ಕಪಾಳಮೋಕ್ಷ ಮಾಡಿದ್ದಲ್ಲದೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಇತರ ಕಾರ್ಯಕರ್ತರು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುರುವಾರ ನಡೆದಿದೆ.

ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಪ್ರಾಧ್ಯಾಪಕರ ನಡುವೆ ಮಾತಿಕ ಚಕಮಕಿ ಮತ್ತು ಹಲ್ಲೆಯ ಘಟನೆಯನ್ನು ಬಿಂಬಿಸುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವವಿದ್ಯಾನಿಲಯದ ಬೋಧಕ ಸಿಬ್ಬಂದಿ ಈ ಘಟನೆಯನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.

“ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎನ್‍ಎಸ್‍ಯುಐ ಅಭ್ಯರ್ಥಿಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಇತರ ಎರಡು ಸ್ಥಾನಗಳಿಗೆ ಎಬಿವಿಪಿ ಸದಸ್ಯರು ಆಯ್ಕೆಯಾಗಿದ್ದರು. ವಿಜೇತರಾದ ಎನ್‍ಎಸ್‍ಯುಐ ಸದಸ್ಯರಿಗೆ ಎಬಿವಿಪಿ ಬೆಂಬಲಿಗರು ಹಲ್ಲೆ ಮಾಡಿದ್ದು, ಈ ಸಂಬಂಧ ದೂರು ನೀಡಲಾಗಿದೆ” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ದೆಹಲಿ ವಿವಿ ಪ್ರಾಧ್ಯಾಪಕರೊಬ್ಬರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತಿ ಮೀರಿದ ಭ್ರಷ್ಟಾಚಾರ ನೈತಿಕತೆಯ ಅಧಃಪತನದ ಸಂಕೇತವೇ?

ಹಲ್ಲೆಗೊಳಗಾದ ಪ್ರಾಧ್ಯಾಪಕರನ್ನು ಸುಜೀತ್ ಕುಮಾರ್ ಎಂದು ಗುರುತಿಸಲಾಗಿದ್ದು, ಕಾಲೇಜಿನ ಶಿಸ್ತುಸಮಿತಿ ಸಂಚಾಲಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಎಬಿವಿಪಿ ಸದಸ್ಯರು ಇತರ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಆಗುತ್ತಿರುವ ಕ್ಯಾಂಪಸ್ ಹಿಂಸೆಯ ಘಟನೆಗಳ ಬಗ್ಗೆ ಸಮಿತಿ ತನಿಖೆ ನಡೆಸುತ್ತಿದೆ ಎಂದು ಡೆಮಾಕ್ರಟಿಕ್ ಟೀಚರ್ಸ್ ಫ್ರಂಟ್ (ಡಿಟಿಎಫ್) ಪ್ರಕಟಿಸಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿ ವಿವಿ ಶಿಕ್ಷಕರ ಸಂಘ, ಕುಲಪತಿಗಳಿಗೆ ಪತ್ರ ಬರೆದಿದೆ.

ಪ್ರೊಫೆಸರ್ ತಮ್ಮ ಕರ್ತವ್ಯದಲ್ಲಿದ್ದಾಗ ಕಾಲೇಜಿನ ಒಳಗೆಯೇ ಕೆಲ ವಿದ್ಯಾರ್ಥಿಗಳು ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಗಮನಕ್ಕೆ ಬಂದಿದೆ. ಶಿಕ್ಷಣ ಸಂಸ್ಥೆಗಳಲಿ ಅಂಥ ಹಿಂಸಾಕೃತ್ಯಗಳಿಗೆ ಅವಕಾಶವಿಲ್ಲ. ಇದು ಬೋಧಕ ಸಮುದಾಯದ ಘನತೆಗೆ ಧಕ್ಕೆ ತರುವ ಕೃತ್ಯವಾಗಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಭೀತಿ ಮತ್ತು ಅಭದ್ರತೆಯನ್ನು ಸೃಷ್ಟಿಸುವ ಹುನ್ನಾರೆಂದು ಡಿಯುಟಿಎ ಹೇಳಿಕೆ ನೀಡಿದೆ.

ಇದಕ್ಕೂ ಮುನ್ನ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ನಲ್ಲೂ ಎಬಿವಿಪಿ ಸದಸ್ಯರಿಂದ ಹಿಂಸಾತ್ಮಕ ಘಟನೆಗಳು ನಡೆದಿದ್ದು, ವಿದ್ಯಾರ್ಥಿ ಸಂಘದ ನಾಯಕರ ಮೇಲೆ ಹಲ್ಲೆ, ಹಾಸ್ಟೆಲ್‌ಗಳಿಗೆ ನುಗ್ಗಿ ವಿದ್ಯಾರ್ಥಿಗಳನ್ನು ಹೊಡೆದ ಘಟನೆಗಳು ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದವು. ದೆಹಲಿ ವಿವಿಯ ಇತ್ತೀಚಿನ ಘಟನೆ ಆ ಹಿನ್ನಲೆಯಲ್ಲಿ ಮತ್ತೆ ಎಬಿವಿಪಿ ಶೈಕ್ಷಣಿಕ ವಲಯದಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

2020ರ ಜನವರಿ 5ರಂದು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಬಿವಿಪಿ ಸದಸ್ಯರು ಸಬರ್ಮತಿ ಹಾಸ್ಟೆಲ್ ಸೇರಿದಂತೆ ಹಾಸ್ಟೆಲ್‌ಗಳಿಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಬೋಧಕರ ಮೇಲೆ ಲಾಠಿ, ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿದರು. ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಹಲವರು ತೀವ್ರ ಗಾಯಗೊಂಡಿದ್ದರು.

ಇದೇ ರೀತಿ, 2022ರಲ್ಲಿ ರಾಮ ನವಮಿ ಸಂದರ್ಭದಲ್ಲಿ ಮಾಂಸಾಹಾರ ಸೇವನೆಯ ಕುರಿತು ಘರ್ಷಣೆಯಾಗಿದ್ದವು. ಇತ್ತೀಚಿನ ದಿನಗಳಲ್ಲಿ ಸಹ ದಸರಾ ಆಚರಣೆ ಮತ್ತು ಇತರ ವಿಷಯಗಳ ಕುರಿತು ಜೆಎನ್‌ಯುನಲ್ಲಿ ಘರ್ಷಣೆಗಳು ವರದಿಯಾಗಿವೆ. ಈ ಘಟನೆಗಳು ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳಲ್ಲಿ ರಾಜಕೀಯ ಹಿಂಸೆಯ ಸಮಸ್ಯೆಯನ್ನು ಎತ್ತಿ ತೋರಿಸುತ್ತವೆ. ಇದರಲ್ಲಿ ಎಬಿವಿಪಿ ಸಂಘಟನೆಯೆ ಪ್ರಮುಖ ಪಾತ್ರ ವಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...