ಉತ್ತರ ಪ್ರದೇಶ: ಅಂಬೇಡ್ಕರ್ ಪ್ರತಿಮೆಯನ್ನು ನಾಲೆಗೆ ಎಸೆದ ದುಷ್ಕರ್ಮಿಗಳು

Date:

ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ನೆಲಕ್ಕುರುಳಿಸಿ, ಅದನ್ನು ನಾಲೆಗೆ ಎಸೆದಿದ ಘಟನೆ ಪ್ರಯಾಗ್ ರಾಜ್‌ನ ಗಂಗಾನಗರದ ಕೊಡಾಪುರ್ ಗ್ರಾಮದಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ಪ್ರತಿಮೆಯನ್ನು ವ್ಯಾಜ್ಯವಿದ್ದ ಹೊಲದ ರಸ್ತೆಯೊಂದರಲ್ಲಿ ಸ್ಥಾಪಿಸಲಾಗಿತ್ತು ಎನ್ನಲಾಗಿದೆ ಎಂದು ಅವರು ಹೇಳಿದ್ದಾರೆ.

ಅಪರಿಚಿತ ದುಷ್ಕರ್ಮಿಗಳು ಈ ಪ್ರತಿಮೆಯನ್ನು ನೆಲಕ್ಕುರುಳಿಸಿದ್ದು, ನಂತರ ಅದನ್ನು ಸಮೀಪದ ನಾಲೆಯೊಂದಕ್ಕೆ ಎಸೆದಿದ್ದರು ಎಂದು ಹೇಳಲಾಗಿದೆ. ಈ ಪ್ರತಿಮೆಯ ವಿಚಾರದಲ್ಲಿ ಸ್ಥಳೀಯರ ನಡುವೆ ವೈಮನಸ್ಸು ಮೂಡಿತ್ತು ಎಂದು ಗಂಗಾನಗರ ಉಪ ಪೊಲೀಸ್ ಆಯುಕ್ತ ಕುಲದೀಪ್ ಗುಣಾವತ್ ಸೋಮವಾರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಹಾಗೂ ಶೀಘ್ರದಲ್ಲೇ ಅಂಬೇಡ್ಕರ್ ಅವರ ನೂತನ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ಸದ್ಯ ಸ್ಥಳದಲ್ಲಿ ಶಾಂತ ವಾತಾವರಣವಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದೂ ಅವರು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಹಲವು ಬಾರಿ ನಡೆದಿರುವ ಘಟನೆಗಳು

ಕಳೆದ ಕೆಲವು ವರ್ಷಗಳಿಂದ ಆಂಧ್ರಪ್ರದೇಶವು ಇಂತಹ ಹಲವಾರು ಘಟನೆಗಳಿಗೆ ಸಾಕ್ಷಿಯಾಗಿದೆ. ಫೆಬ್ರವರಿ 13, 2023 ರಂದು, ನಂದ್ಯಾಲ್ ಜಿಲ್ಲೆಯ ಬೊಮ್ಮಲಸತ್ರಂ ಗ್ರಾಮದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಆರೋಪಿಗಳ ಬಂಧನವಾಗಲಿಲ್ಲ.

ಫೆಬ್ರವರಿ 2021 ರಲ್ಲಿ, ಆಂಧ್ರಪ್ರದೇಶದ ಚಿಂತಲಪುಡಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪಾದರಕ್ಷೆಗಳ ಹಾರ ಹಾಕಿ ಅಪವಿತ್ರಗೊಳಿಸಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದರು. ಎರಡು ವರ್ಷಗಳ ಹಿಂದೆ, 2018 ರಲ್ಲಿ, ವಿಶಾಖಪಟ್ಟಣದ ಹೊರವಲಯದಲ್ಲಿರುವ ಪೆಡಗಂಟ್ಯಾಡದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಅಂಬೇಡ್ಕರ್‌ ಪ್ರತಿಮೆಯನ್ನು ವಿರೂಪಗೊಳಿಸುವ ಹಲವಾರು ಘಟನೆಗಳು ನಡೆಯುತ್ತಲೇ ಇವೆ.

ಕಳೆದ ವರ್ಷ, ಡಿಸೆಂಬರ್ 2024 ರಲ್ಲಿ, ಗುಜರಾತ್‌ನ ಖೋಖರಾದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸ ಮಾಡಿದ್ದಕ್ಕಾಗಿ ಅಹಮದಾಬಾದ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...