ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಮುಂದಿನ ತಿಂಗಳು ಜಾರಿ ಸಾಧ್ಯತೆ

Date:

ನೆರೆಯ ದೇಶಗಳಿಂದ ಭಾರತಕ್ಕೆ ಬಂದು ನೆಲಸಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮುಂದಿನ ತಿಂಗಳು ಜಾರಿಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ನೋಂದಣಿಗೆ ಆನ್‌ಲೈನ್‌ ಪೋರ್ಟಲ್ ಹಾಗೂ ಕಾರ್ಯಾವಿಧಾನದ ಸ್ವರೂಪ ಕೇಂದ್ರ ಗೃಹ ಇಲಾಖೆಯಿಂದ ಈಗಾಗಲೇ ಸಿದ್ಧಪಡಿಸಲಾಗಿದ್ದು, ಲೋಕಸಭೆ ಚುನಾವಣೆಗೂ ಮೊದಲೇ ಕಾಯ್ದೆ ಜಾರಿಯಾಗಬಹುದು ಎಂದು ಹೇಳಲಾಗಿದೆ.

ಸಿಎಎ ಜಾರಿಯಿಂದ ನೆರೆಯ ದೇಶಗಳಿಂದ ವಲಸಿಗರಾಗಿ ಆಗಮಿಸಿ ದಾಖಲೆಯಿಲ್ಲದೆ ವಾಸಿಸುತ್ತಿರುವವರಿಗೆ ಅನುಕೂಲವಾಗಲಿದೆ. ಸಚಿವಾಲಯ ಸ್ವೀಕರಿಸಿದ ದೀರ್ಘಾವಧಿ ವೀಸಾಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಪಾಕಿಸ್ತಾನದಿಂದ ಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಎ ಜಾರಿಗೊಳಿಸಲು ಪೂರ್ವಗಾಮಿಯಾಗಿ ದೀರ್ಘಾವಧಿ ವೀಸಾಗಳಿಗೆ ನೀಡುವ ಅಧಿಕಾರವನ್ನು ಈಗಾಗಲೇ ಜಿಲ್ಲಾಡಳಿತಕ್ಕೆ ನೀಡಲಾಗಿದೆ.

1955ರ ಪೌರತ್ವ ಕಾಯ್ದೆಯಡಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಆಗಮಿಸಿದ ಹಿಂದುಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡುವ ಅಧಿಕಾರವನ್ನು ಕಳೆದ ಎರಡು ವರ್ಷಗಳಲ್ಲಿ 30 ಮ್ಯಾಜಿಸ್ಟ್ರೇಟರುಗಳು ಹಾಗೂ 9 ರಾಜ್ಯಗಳ ಗೃಹ ಕಾರ್ಯದರ್ಶಿಗಳಿಗೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಗೃಹ ಇಲಾಖೆಯ ವಾರ್ಷಿಕ ವರದಿಯಂತೆ, ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021ರವರೆಗೆ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಬಂದ ಒಟ್ಟು 1414 ಮುಸ್ಲಿಮೇತರರಿಗೆ 1955ರ ಪೌರತ್ವ ಕಾಯ್ದೆಯಡಿ ಭಾರತೀಯ ಪೌರತ್ವ ನೀಡಲಾಗುತ್ತದೆ.

ನೂತನ ನಿಯಮಗಳು ಮುಸ್ಲಿಮರ ವಿರುದ್ಧ ತಾರತಮ್ಯ ಹಾಗೂ ಭಾರತೀಯ ಸಂವಿಧಾನದ ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತವೆ ಎಂದು ವಿಪಕ್ಷಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ 2019ರಲ್ಲಿ ದೇಶಾದ್ಯಂತ ಪ್ರತಿಭಟನೆಯ ಬಿರುಗಾಳಿಯನ್ನು ಹಬ್ಬಿಸಿತ್ತು. ಆದರೆ ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಪ್ರತಿಭಟನೆಗಳು ತಣ್ಣಗಾಗಿದ್ದವು. ಪ್ರತಿಭಟನೆಗಳು ಅಂತ್ಯಗೊಳ್ಳುವ ಮೊದಲು, ದೇಶಾದ್ಯಂತ ಹೊರತರಬೇಕಾಗಿದ್ದ ರಾಷ್ಟ್ರೀಯ ನಾಗರಿಕರ ನೋಂದಣಿ ಕಾಯ್ದೆಯನ್ನು ಕೇಂದ್ರವು ತಡೆಹಿಡಿದಿತ್ತು.

ಕಳೆದ ತಿಂಗಳು ಪೌರತ್ವ ಕಾಯ್ದೆ ಬಗ್ಗೆ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ದೇಶದ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಿ ಪ್ರಚೋದಿಸಲಾಗುತ್ತಿದೆ. ಕಾಯ್ದೆಯು ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ದೌರ್ಜನ್ಯಕ್ಕೊಳಗಾಗಿ ಆಗಮಿಸಿದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುತ್ತದೆ.ಇಲ್ಲಿನ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ. ಹಾಗಾಗಿ, ಲೋಕಸಭಾ ಚುನಾವಣೆಗೂ ಮುನ್ನವೇ ಇದು ಜಾರಿಯಾಗಲಿದೆ” ಎಂದು ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...