ಅಮೆರಿಕ ಪತ್ರಕರ್ತ ರೋಲೋ ರೋಮಿಗ್ ಬರೆದ ‘ಗೌರಿ ಲಂಕೇಶ್’ ಹತ್ಯೆ ಕುರಿತ ಕೃತಿ ಪುಲಿಟ್ಜರ್ ಪ್ರಶಸ್ತಿಗೆ ನಾಮಿನೇಟ್

Date:

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ, ಸಮಾನತೆಗಾಗಿ ಅವಿರತ ಶ್ರಮಿಸಿದ ಗೌರಿ ಲಂಕೇಶ್ ಅವರ ಹತ್ಯೆ ಹಿನ್ನೆಲೆಯಲ್ಲಿ ಬರೆದ ‘ಐ ಆಮ್ ಆನ್ ದಿ ಹಿಟ್ ಲಿಸ್ಟ್: ಎ ಜರ್ನಲಿಸ್ಟ್ಸ್ ಮರ್ಡರ್ ಅಂಡ್ ದಿ ಮಿಥ್-ಮೇಕಿಂಗ್ ಇನ್ ಸೌತ್ ಇಂಡಿಯಾ’ ಕೃತಿ ಪುಲಿಟ್ಜರ್ ಪ್ರಶಸ್ತಿಗೆ ನಾಮಿನೇಟ್ ಆಗಿದೆ.

ಅಮೇರಿಕನ್ ಪತ್ರಕರ್ತ, ಪ್ರಬಂಧಕಾರ ಹಾಗೂ ವಿಮರ್ಶಕ ರೋಲೋ ರೋಮಿಗ್ ಅವರು ‘ಐ ಆಮ್ ಆನ್ ದಿ ಹಿಟ್ ಲಿಸ್ಟ್: ಎ ಜರ್ನಲಿಸ್ಟ್ಸ್ ಮರ್ಡರ್ ಅಂಡ್ ದಿ ಮಿಥ್-ಮೇಕಿಂಗ್ ಇನ್ ಸೌತ್ ಇಂಡಿಯಾ’ ಕೃತಿಯನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಪೆಂಗ್ವಿನ್ ಪ್ರಕಾಶನ ಆಗಸ್ಟ್ 6, 2024 ರಂದು ಪ್ರಕಟಿಸಿದೆ.

ಅಮೇರಿಕನ್ ಪತ್ರಕರ್ತ ರೋಲೋ ರೋಮಿಗ್ ಅವರು 2013 ರಿಂದ ದಕ್ಷಿಣ ಭಾರತದ ಕುರಿತು ‘ದಿ ನ್ಯೂಯಾರ್ಕ್ ಟೈಮ್ಸ್’ ಗೆ ಬಗ್ಗೆ ವರದಿ ಮಾಡುತ್ತಿದ್ದಾರೆ. ಇದು ಅವರ ಮೊದಲ ಕೃತಿ ಇದಾಗಿದೆ. ‘ದಿ ಟ್ರಿಬ್ಯೂನ್’ ವೆಬ್‌ಸೈಟ್‌ ಈ ಕುರಿತು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯೂಯಾರ್ಕ್ ನಗರದ ಕೊಲಂಬಿಯಾ ವಿಶ್ವವಿದ್ಯಾಲಯವು “ಪತ್ರಿಕೋದ್ಯಮ, ಕಲೆ ಹಾಗೂ ಪತ್ರಿಕೋದ್ಯಮ” ಕ್ಷೇತ್ರದಲ್ಲಿನ ಸಾಧನೆಗಾಗಿ ಪುಲಿಟ್ಜರ್ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡುತ್ತಿದೆ. ಜೋಸೆಫ್ ಪುಲಿಟ್ಜರ್ ಅವರ ಇಚ್ಛೆಯ ಮೇರೆಗೆ 1917 ರಲ್ಲಿ ಪ್ರಶಸ್ತಿ ಸ್ಥಾಪಿಸಲಾಗಿದೆ.

ಗೌರಿ ಲಂಕೇಶ್ ಅವರ ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. 2017 ಸೆಪ್ಟಂಬರ್‌ 5ರಂದು ರಾತ್ರಿ ಎಂಟು ಗಂಟೆಯ ವೇಳೆಗೆ ತಮ್ಮ ಕಚೇರಿಯಿಂದ ರಾಜರಾಜೇಶ್ವರಿ ನಗರದ ತಮ್ಮ ಮನೆಯ ಮುಂದೆ ಕಾರಿನಿಂದಿಳಿದು ಗೇಟು ತೆರೆದು ಬಾಗಿಲ ಕಡೆ ಹೆಜ್ಜೆ ಹಾಕುತ್ತಿದ್ದಂತೆ ಅವರ ಎದುರಿಗೆ ಬಂದು ನಿಂತಿದ್ದ ಹಂತಕರು ನೇರವಾಗಿ ಎದೆಗೆ ಗುಂಡಿಟ್ಟು ಪರಾರಿಯಾಗಿದ್ದರು.

ಗುಬ್ಬಚ್ಚಿಯಂಥ ಪುಟ್ಟದೇಹ ಬಾಗಿಲ ಬಳಿ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಗೌರಿಯವರನ್ನು ಕೊಂದಿದ್ದು ಯಾರು ಮತ್ತು ಯಾವ ಕಾರಣಕ್ಕೆ ಎಂಬುದು ಬಹುತೇಕರಿಗೆ ಸ್ಪಷ್ಟವಿತ್ತು. ಅದು ನಿಜವೂ ಆಗಿತ್ತು. ಗೌರಿ ಅವರು ಹಿಂದೂ ಕೋಮುವಾದಿ ಸಂಘಟನೆಗಳನ್ನು ಎದುರು ಹಾಕಿಕೊಂಡಿದ್ದರು.

ಗೌರಿ ಅವರ ಹತ್ಯೆಗೂ ಮುನ್ನ ಇಂತಹದೇ ಮೂರು ಹತ್ಯೆಗಳಾಗಿದ್ದವು. 2013 ರಿಂದ 2017 ರವರೆಗೆ ಒಟ್ಟು ಗೌರಿ ಸೇರಿ ನಾಲ್ವರು ವಿಚಾರವಾದಿ ಲೋಕಚಿಂತಕರ ಹತ್ಯೆ ನಡೆದಿದೆ. ಮಹಾರಾಷ್ಟ್ರದಲ್ಲಿ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ ಪಾನ್ಸರೆ ಹತ್ಯೆಯಾಗಿದ್ದರೆ, ಕರ್ನಾಟಕದಲ್ಲಿ ಎಂ.ಎಂ. ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಕೊಲೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...