ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ವಿವಾದ: ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆ

Date:

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜಕೀಯ ಸಹಾಯಕರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್, ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದಾರೆ. ಇದಕ್ಕೆ ನಿರಾಕರಿಸಿದಾಗ ಅವರನ್ನು ಸಚಿವರ ನಿವಾಸಕ್ಕೆ ಕರೆಸಿ, ಹಲ್ಲೆ ನಡೆಸಿ, ಬ್ಲ್ಯಾಕ್‌ಮೇಲ್ ಮಾಡಲು 10 ಲಕ್ಷ ರೂ. ಲಂಚ ಸ್ವೀಕರಿಸಿರುವುದಾಗಿ ಕ್ಯಾಮೆರಾದಲ್ಲಿ ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಪ.ಬಂಗಾಳ | ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿದ್ದ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಸಂಜೆ ರಾಂಧವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೂ ಮುನ್ನ ಒಂದು ವಿಡಿಯೋ ಮಾಡಿಕೊಂಡಿದ್ದು, ಅದರಲ್ಲಿ, “ನಿಮ್ಮ ಸ್ನೇಹಿತ ಸಚಿವ ಲಾಲ್ಜಿತ್ ಭುಲ್ಲರ್ ಅವರ ಭಯದಿಂದ ವಿಷ ಸೇವಿಸಿದೆ. ನಾನು ಇನ್ನು ಬದುಕುಳಿಯುವುದಿಲ್ಲ” ಎಂದು ಹೇಳಿದ್ದರು.

ಘಟನೆಯ ನಂತರ, ರಾಜೀನಾಮೆ ನೀಡುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಲಾಲ್ಜಿತ್ ಸಿಂಗ್ ಭುಲ್ಲರ್ ಅವರಿಗೆ ಸೂಚಿಸಿದ್ದಾರೆ. ಹಾಗೆಯೇ ಈ ಪ್ರಕರಣದ ತನಿಖೆ ನಡೆಸುವಂತೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಕೆಎಪಿ ಸಿನ್ಹಾ ಅವರಿಗೆ ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಬಿಜೆಪಿ ಸೇರಿದ ಅಶೋಕ್ ಚವಾಣ್

ಇನ್ನು ಸಿಎಂ ಸೂಚನೆಯಂತೆ ರಾಜೀನಾಮೆ ನೀಡಿರುವ ಭುಲ್ಲರ್, ಆರೋಪಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ನ್ಯಾಯಯುತ ತನಿಖೆಗೆ ಅನುವು ಮಾಡಿಕೊಡಲು ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಘಟನೆಯು ರಾಜಕೀಯ ಟೀಕೆಗೆ ಒಳಗಾಗಿದ್ದು, ವಿಪಕ್ಷಗಳು ಭುಲ್ಲರ್ ವಿರುದ್ಧ ಪ್ರಕರಣ ದಾಖಲಿಸುವಂತೆ, ಬಂಧಿಸುವಂತೆ ಒತ್ತಾಯಿಸಿದೆ. ಸಿಬಿಐ ತನಿಖೆಗೆ ಆಗ್ರಹಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ, “ರಾಂಧವಾ ಅವರು ಎಎಪಿ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಅವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದಾರೆ. ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಮತ್ತು ಯಾವುದೇ ವಿಳಂಬವು ಜನರಲ್ಲಿ ಅನುಮಾನ ಹೆಚ್ಚಿಸುತ್ತದೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಇದು ರಾಜಕೀಯವಲ್ಲ, ನ್ಯಾಯದ ಪ್ರಶ್ನೆ ಇಲ್ಲಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...