ಹಿಂದಿ ಹೇರಿಕೆ ವಿವಾದ | ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ ಕಡ್ಡಾಯಗೊಳಿಸಿದ ತೆಲಂಗಾಣ

Date:

ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವ ವಿಚಾರದಲ್ಲಿ ಈಗಾಗಲೇ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಶೀತಲ ಸಮರ ನಡೆಯುತ್ತಿದೆ. ಈ ನಡುವೆ ತೆಲಂಗಾಣ ಸರ್ಕಾರವು ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ ಕಡ್ಡಾಯಗೊಳಿಸಿದೆ.

ಸಿಬಿಎಸ್‌ಇ ಸೇರಿದಂತೆ ಎಲ್ಲಾ ಶಾಲೆಗಳಲ್ಲಿ ಸ್ಥಳೀಯರು ತಮ್ಮ ಮಾತೃಭಾಷೆಯಾದ ತೆಲುಗು ಬೋಧಿಸುವುದು ಮತ್ತು ಹೊರ ರಾಜ್ಯದಿಂದ ಬಂದವರಿಗೂ ಸ್ಥಳೀಯ ಭಾಷೆಯಾದ ತೆಲುಗು ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತೆಲಂಗಾಣ ಸರ್ಕಾರ ಹೇಳಿದೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಒಂಬತ್ತನೇ ಮತ್ತು ಹತ್ತನೇ ತರಗತಿಗೆ ಸದ್ಯ ಬೋಧಿಸಲಾಗುತ್ತಿರುವ ಕ್ಲಿಷ್ಟ ತೆಲುಗಿನ ಪಠ್ಯ ಕ್ರಮವನ್ನು ಸರಳ ತೆಲುಗಿಗೆ ಬದಲಾಯಿಸಲಾಗುವುದು. ಹಳೆ ವಿದ್ಯಾರ್ಥಿಗಳಿಗೆ 2025/26ರಿಂದ, ಹೊಸ ವಿದ್ಯಾರ್ಥಿಗಳಿಗೆ 2026/27ರಿಂದ ಈ ಪಠ್ಯ ಕ್ರಮ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ತ್ರಿಭಾಷಾ ನೀತಿಯನ್ನು ಕೇಂದ್ರ ಸರ್ಕಾರವು ಜಾರಿಗೆ ತರಲು ಮುಂದಾಗಿದೆ. ಈ ವಿಚಾರದಲ್ಲಿ ಈಗಾಗಲೇ ಕೇಂದ್ರ ಬಿಜೆಪಿ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ವಾಕ್ಸಮರ ಏರ್ಪಟ್ಟಿದೆ. ಈ ಹಿಂದಿನಿಂದಲೂ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡು ಸರ್ಕಾರ, ಈಗ ಇತರೆ ದಕ್ಷಿಣ ಭಾರತದ ರಾಜ್ಯಗಳಂತೆ ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿದೆ.

ಇದನ್ನು ಓದಿದ್ದೀರಾ? ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ಈ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದಿದ್ದರೆ ಸಮಗ್ರ ಶಿಕ್ಷ ಮಿಷನ್‌ಗೆ 2,400 ರೂಪಾಯಿ ನಿಧಿಯನ್ನು ನೀಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ಬೆದರಿಕೆ ಹಾಕಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. “ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ” ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಇದೀಗ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕೂಡಾ ಕೇಂದ್ರದೊಂದಿಗೆ ಭಾಷಾ ಸಮರಕ್ಕೆ ಇಳಿಯುವ ಸೂಚನೆಯಿದೆ.

ಸದ್ಯ ಕೇಂದ್ರ ಸರ್ಕಾರ ಇತರೆ ಮಾತೃ ಭಾಷೆ ಹೊಂದಿರುವ ರಾಜ್ಯಗಳ ಮೇಲೆಯೂ ಹಿಂದಿ ಹೇರಿಕೆ ಮಾಡುತ್ತಿರುವುದಕ್ಕೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇತರೆ ಭಾಷೆಗಳನ್ನು ಕೂಡಾ ಕಲಿಯುವುದು ಉತ್ತಮ. ಆದರೆ ಯಾವುದೇ ಭಾಷೆಯನ್ನು ನಾಶಗೊಳಿಸಿ ಇತರೆ ಭಾಷೆಯನ್ನು ಹೇರಿಕೆ ಮಾಡಬಾರದು ಎಂಬುದು ಇತರೆ ರಾಜ್ಯಗಳ ವಾದವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...