ಭಾರತ-ಪಾಕಿಸ್ತಾನ ಸಂಘರ್ಷ | ಪೊಲೀಸರ ಎಲ್ಲ ರಜೆಗಳನ್ನು ರದ್ದುಗೊಳಿಸಿದ ಮಧ್ಯಪ್ರದೇಶ

Date:

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ ಮಧ್ಯಪ್ರದೇಶ ಸರ್ಕಾರವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ.

ಈ ಬಗ್ಗೆ ಶುಕ್ರವಾರ ಬೆಳಿಗ್ಗೆ ಮಧ್ಯಪ್ರದೇಶ ಪೊಲೀಸ್ ಪ್ರಧಾನ ಕಚೇರಿ (PHQ) ಅಧಿಸೂಚನೆಯನ್ನು ಹೊರಡಿಸಿದೆ. “ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಯ ಎಲ್ಲಾ ರಜೆಗಳನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದೆ. ಹಾಗೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ಎಚ್ಚರಿಕೆ ನೀಡಿದೆ. ಯಾವುದೇ ತುರ್ತು ಪರಿಸ್ಥಿತಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದೆ.

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಪೊಲೀಸ್ ಮಹಾನಿರ್ದೇಶಕ ಕೈಲಾಶ್ ಮಕ್ವಾನಾ ಶುಕ್ರವಾರ ಎಲ್ಲಾ ಎಸ್‌ಪಿಗಳೊಂದಿಗೆ ವಿಡಿಯೋ ಕರೆ ಮೂಲಕ ಸಭೆ ನಡೆಸಲಿದ್ದಾರೆ. ಹಾಗೆಯೇ ಆಂತರಿಕ ಭದ್ರತೆಯನ್ನು ಪರಿಶೀಲಿಸಲು ಮತ್ತು ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲು ನಿರ್ಧರಿಸಿದ್ದಾರೆ.

ಪೊಲೀಸರಿಗೆ ಗಸ್ತು ತಿರುಗುವ ಅವಧಿಯನ್ನು ವಿಸ್ತರಿಸುವಂತೆ ಮತ್ತು ಗ್ರಾಮಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸುವಂತೆ ಪೊಲೀಸ್ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ನಡುವೆ ಸುಳ್ಳು ಮಾಹಿತಿ ಹರಡುವುದನ್ನು ತಡೆಯಲೂ ಸೈಬರ್ ಪೊಲೀಸರಿಗೆ ತಿಳಿಸಲಾಗಿದೆ.

ಇಂದೋರ್‌ನಲ್ಲಿ, ಜಿಲ್ಲಾಡಳಿತವು ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಪೂರ್ವಾನುಮತಿ ಇಲ್ಲದೆ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ಇಂದೋರ್ ಪೊಲೀಸ್ ಆಯುಕ್ತ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಪೊಲೀಸ್ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನದೊಂದಿಗೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಗಡಿ ರಾಜ್ಯಗಳಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...