ಡಿಜಿಟಲ್ ಅರೆಸ್ಟ್ ಪ್ರಕರಣಗಳ ಹೆಚ್ಚಳ: ಸಿಬಿಐ, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್‌

Date:

ದೇಶದಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮತ್ತು ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೋಟಿಸ್ ನೀಡಿದೆ. ಹಾಗೆಯೇ ಇಂತಹ ಅಪರಾಧಗಳನ್ನು ನಿಗ್ರಹಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಘಟಿತ ಪ್ರಯತ್ನ ತುರ್ತಾಗಿ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಪ್ಟೆಂಬರ್ 1ರಿಂದ 16ರ ನಡುವೆ ಅಂಬಾಲಾದ ಹಿರಿಯ ನಾಗರಿಕ ದಂಪತಿಗಳು ಡಿಜಿಟಲ್ ಬಂಧನಕ್ಕೆ ಒಳಗಾಗಿ ತಮ್ಮ ಜೀವಮಾನದ ಉಳಿತಾಯವೆಲ್ಲವನ್ನೂ ಕಳೆದುಕೊಂಡಿದ್ದಾರೆ. ಈ ಸಂಬಂಧ ದಂಪತಿ ಸೆಪ್ಟೆಂಬರ್ 16ರಂದು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯಮಾಲಾ ಬಾಗ್ಚಿ ಅವರ ಪೀಠವು ಕೇಂದ್ರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಸುಪ್ರೀಂ ಕೋರ್ಟ್ ಹರಿಯಾಣ ಸರ್ಕಾರ ಹಾಗೂ ಅಂಬಾಲಾದ ಸೈಬರ್ ಅಪರಾಧ ಘಟಕಕ್ಕೂ ನೋಟಿಸ್ ನೀಡಿದೆ.

ಇದನ್ನು ಓದಿದ್ದೀರಾ? 86 ವರ್ಷದ ವೃದ್ಧೆಗೆ 2 ತಿಂಗಳು ಡಿಜಿಟಲ್ ಅರೆಸ್ಟ್: 20 ಕೋಟಿ ರೂ. ವಂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬಿಐ, ಗುಪ್ತಚರ ಬ್ಯೂರೋ ಮತ್ತು ನ್ಯಾಯಾಂಗ ಅಧಿಕಾರಿಗಳೆಂದು ಹೇಳಿಕೊಂಡು ವಿಡಿಯೋ ಕರೆ, ದೂರವಾಣಿ ಕರೆ ಮೂಲಕ ವಂಚಕರು ದಂಪತಿಯನ್ನು ಸಂಪರ್ಕಿಸಿದ್ದಾರೆ. ವಾಟ್ಸಾಪ್ ಮತ್ತು ವಿಡಿಯೋ ಕರೆ ಮೂಲಕ ವಂಚಕರು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಪ್ರತಿಗಳನ್ನು ತೋರಿಸಿದ್ದಾರೆ. ಇದರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಕಲಿ ಸಹಿಯೂ ಇತ್ತು ಎಂದು ಹೇಳಲಾಗಿದೆ.

ಬಂಧನದ ಆತಂಕಕ್ಕೆ ಒಳಗಾದ ದಂಪತಿಗಳು ಬೇರೆ ಬೇರೆ ಬ್ಯಾಂಕ್‌ಗಳ ಮೂಲಕ ಒಟ್ಟಾಗಿ ಈ ವಂಚಕರಿಗೆ 1.5 ಕೋಟಿ ರೂ.ಗಳನ್ನು ವರ್ಗಾಯಿಸಿದ್ದಾರೆ. ವಂಚನೆಗೆ ಒಳಗಾಗಿರುವುದು ತಿಳಿದ ಬಳಿಕ ದೂರು ನೀಡಿದ್ದು, ಅಂಬಾಲಾದ ಸೈಬರ್ ಅಪರಾಧ ಶಾಖೆಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ವಂಚಕರು ಸುಪ್ರೀಂ ಕೋರ್ಟ್‌ ಹೆಸರಲ್ಲಿ ವಂಚನೆ ಮಾಡಿದ್ದಾರೆ ಎಂದು ತಿಳಿದು ಆಘಾತವಾಗಿದೆ. ಅದೂ ಇಡಿ ಅಧಿಕಾರಿಗಳ ಸಹಿಗಳು, ನ್ಯಾಯಾಲಯದ ಮುದ್ರೆಯೂ ನಕಲಿ ಕೋರ್ಟ್‌ ಆದೇಶ ಪ್ರತಿಯಲ್ಲಿತ್ತು ಎಂಬುದು ತಿಳಿದು ಆಘಾತವಾಗಿದೆ” ಎಂದು ಹೇಳಿದ್ದಾರೆ.

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾಲ್‌ ಸೆಂಟರ್ ಕಚೇರಿ ತೆರೆದು ಅದರಲ್ಲೇ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಅಮೆರಿಕ, ಕೆನಡಾದ ಪ್ರಜೆಗಳನ್ನು ವಂಚಿಸುತ್ತಿದ್ದ ವಿವಿಧ ರಾಜ್ಯಗಳ 16 ಮಂದಿಯನ್ನು ಎಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದಾರೆ. ‘ಸಿಬಿಟ್ಸ್ ಸಲ್ಯೂಷನ್ಸ್‌ ಪ್ರೈವೇಟ್ ಲಿಮಿಟೆಡ್’ ಎಂಬ ಹೆಸರಲ್ಲಿ ಕಂಪನಿಯನ್ನು ನಡೆಸಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...