ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

Date:

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಜಾರ್ಖಂಡ್‌ನ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆಯಾಗಿದೆ. ಸೇನಾ ಗುಪ್ತಚರ ಸಂಸ್ಥೆ ಮತ್ತು ಜಾರ್ಖಂಡ್ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಶುಕ್ರವಾರ ಜಂಟಿಯಾಗಿ ದಾಳಿ ನಡೆಸಿ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳನ್ನು ವಶಪಡಿಸಿಕೊಂಡಿವೆ.

ನಕಲಿ ಸಮವಸ್ತ್ರದ ಬಗ್ಗೆ ಲಕ್ನೋದ ಮಿಲಿಟರಿ ಗುಪ್ತಚರ ಸಂಸ್ಥೆಗೆ ಸುಳಿವು ಸಿಕ್ಕ ಬಳಿಕ ರಾಂಚಿಯ ರಾಂಚಿಯ ಬೂಟಿ ಮೋರ್‌ನಲ್ಲಿರುವ ಶ್ರೀ ಗಣೇಶ್ ಸೇನಾ ಅಂಗಡಿಗೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಾಚರಣೆಯ ಸಮಯದಲ್ಲಿ, ಯಾವುದೇ ಅನುಮತಿಯಿಲ್ಲದೆ ತಯಾರಿಸಲಾದ ನಕಲಿ ಸೇನಾ ಸಮವಸ್ತ್ರಗಳು ಮತ್ತು ಯುದ್ಧ ಉಡುಪುಗಳು ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ನಕಲಿ ಸಮವಸ್ತ್ರಗಳನ್ನು ಜನರಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ವರದಿಯಾಗಿದೆ.

ಸದ್ಯ ಈ ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಮತ್ತು ಅವರ ಉದ್ದೇಶವೇನು ಎಂಬುದನ್ನು ನಿರ್ಧರಿಸಲು ತನಿಖೆ ನಡೆಸಲಾಗುತ್ತಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ 26 ಭಾರತೀಯರನ್ನು ಬಲಿ ಪಡೆದುಕೊಂಡ ಬಳಿಕ ಇತ್ತೀಚೆಗೆ ಭಾರತ ಪಾಕಿಸ್ತಾನದ ಒಟ್ಟು ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ.

ಭಯೋತ್ಪಾದನೆ ವಿರುದ್ಧದ ಭಾರತ ಸರ್ಕಾರ ನಡೆಸಿದ ಈ ಪ್ರತಿದಾಳಿಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ. ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...