‘ಖಲಿಸ್ತಾನಿ ಹೋರಾಟಗಾರರ ವಿರುದ್ಧ ಹಿಂಸಾಚಾರಕ್ಕೆ ಆದೇಶಿಸಿದ್ದೇ ಅಮಿತ್ ಶಾ’; ಕೆನಡಾ ಆರೋಪ

Date:

ಕೆನಡಾದಲ್ಲಿ ನೆಲೆಸಿರುವ ಸಿಖ್ ಪ್ರತ್ಯೇಕತಾವಾದಿ (ಖಲಿಸ್ತಾನ ಬೇಡಿಕೆ) ಗುಂಪುಗಳ ಮೇಲೆ ಹಿಂಸಾಚಾರ ನಡೆಸಲು ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ. ಖಲಿಸ್ತಾನಿ ಹೋರಾಟಗಾರರಿಗೆ ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನ ಹಿಂದೆ ಅಮಿತ್ ಶಾ ಅವರ ಕೈವಾಡವಿದೆ ಎಂದು ತಾವು ಆರೋಪಿಸಿದ್ದಾಗಿ ಕೆನಡಾ ಸಚಿವ ಒಪ್ಪಿಕೊಂಡಿದ್ದಾರೆ.

ಖಲಿಸ್ತಾನಿ ಹೋರಾಟಗಾರರ ವಿರುದ್ಧ ನಡೆಯುತ್ತಿರುವ ಹಿಂಸಾಚಾರಕ್ಕೆ ಅಮಿತ್ ಶಾ ಅವರೇ ಆದೇಶಿಸಿದ್ದಾರೆ ಎಂದು ತಾವು ವಾಷಿಂಗ್ಟನ್‌ ಪೋಸ್ಟ್‌ ತಿಳಿಸಿರುವುದಾಗಿ ಕೆಡನಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್ ಮಾರಿಸನ್ ಹೇಳಿಕೊಂಡಿದ್ದಾರೆ. ತಾವು ಮಾಡಿದ ಆರೋಪದ ಬಗ್ಗೆ ಕನಡಾದ ರಾಷ್ಟ್ರೀಯ ಭದ್ರತಾ ಸಮಿತಿಯ ಸಂಸತ್ ಸದಸ್ಯರಿಗೆ ಮಾರಿಸನ್ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕದ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಾರಿಸನ್, “ಖಲಿಸ್ತಾನಿ ಹೋರಾಟಗಾರರ ಹತ್ಯೆಯ ಹಿಂದೆ ಅಮಿತ್ ಶಾ ಕೈವಾಡವಿದೆ” ಎಂದು ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅವರ ಆರೋಪವು ಭಾರತ ಮತ್ತು ಕೆನಡಾ ನಡುವಿನ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಕೆನಡಾದಲ್ಲಿ ನೆಲೆಸಿದ್ದ ಭಾರತದ ಮೂಲಕದ ಖಲಿಸ್ತಾನಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಾಗಿದೆ. ಈ ಹತ್ಯೆಯನ್ನು ತಾವೇ ಮಾಡಿರುವುದಾಗಿ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್ ಒಪ್ಪಿಕೊಂಡಿದೆ. ಈ ಹತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡವಿದೆ. ಕೆಡನಾದಲ್ಲಿರುವ ಭಾರತದ ರಾಯಭಾರಿ ಕಚೇರಿ ಹತ್ಯೆಗೆ ಸಹಕಾರ ನೀಡಿದೆ. ಲಾರೆನ್ಸ್‌ ಗ್ಯಾಂಗ್‌ಅನ್ನು ಬಳಸಿಕೊಂಡು ಭಾರತ ಸರ್ಕಾರ (ಕೇಂದ್ರ ಸರ್ಕಾರ) ತಮ್ಮ ವಿರೋಧಿಗಳನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಕೆನಡಾ ಆರೋಪಿಸಿತ್ತು.

ಈ ವರದಿ ಓದಿದ್ದೀರಾ?: ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ಬೆಳ್ಳಂಬೆಳಗ್ಗೆ ಕ್ಷಿಪಣಿ ದಾಳಿ

ಈ ಬೆನ್ನಲ್ಲೇ, ಭಾರತ ಮತ್ತು ಕೆನಡಾ ನಡುವೆ ನಿರಂತರ ಆರೋಪ-ಪ್ರತ್ಯಾರೋಪಗಳು ಮುನ್ನೆಲೆಗೆ ಬಂದಿದ್ದವು. ಅಕ್ಟೋಬರ್ 14 ರಂದು, ಕೆನಡಾ ಸರ್ಕಾರವು ಭಾರತೀಯ ಹೈಕಮಿಷನರ್ ಮತ್ತು ಐವರು ರಾಜತಾಂತ್ರಿಕರನ್ನು ಕೆನಡಾದಿಂದ ಹೊರಹಾಕಿತು. ನಂತರ, ಭಾರತ ಸರ್ಕಾರವೂ ಕೂಡ ದೆಹಲಿಯಲ್ಲಿದ್ದ ಕೆನಡಾ ರಾಯಭಾರಿ ಕಚೇರಿಯನ್ನು ಮುಚ್ಚುವುದಾಗಿ ಘೋಷಿಸಿತು. ರಾಜತಾಂತ್ರಿಕರನ್ನು ಭಾರತ ತೊರೆಯುವಂತೆ ನಿರ್ದೇಶಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...