ಆಂಧ್ರದಲ್ಲಿ ಅಮಾನುಷ ಘಟನೆ: ಒಡಿಶಾ ಅಪ್ರಾಪ್ತೆ ಮೇಲೆ 13 ಮಂದಿಯಿಂದ ಸಾಮೂಹಿಕ ಅತ್ಯಾಚಾರ

Date:

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 17 ವರ್ಷದ ಅಪ್ರಾಪ್ತೆಯ ಮೇಲೆ 13 ಮಂದಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ 11 ಆರೋಪಿಗಳನ್ನು ಜನವರಿ 12ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

“ಮೊದಲು ಅಪ್ರಾಪ್ತೆಯನ್ನು ಆಕೆಯ ಪರಿಚಿತ ಗೆಳೆಯ ಹಾಗೂ ಆತನ ಸ್ನೇಹಿತ ಲಾಡ್ಜಿನಲ್ಲಿ ಅತ್ಯಾಚಾರವೆಸಗಿದ್ದಾರೆ. ಆಕೆ ವಿಶಾಖಪಟ್ಟಣದ ಆರ್ ಕೆ ಪಟ್ಟಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲಿದ್ದ ಫೋಟೋಗ್ರಾಫರ್ ಒಬ್ಬ ಬಾಲಕಿಗೆ ಸಹಾಯ ನೀಡುವುದಾಗಿ ಹೇಳಿ ಮೊದಲು ಅತ್ಯಾಚಾರವೆಸಗಿದ್ದೇನೆ. ನಂತರ ತನ್ನ 10 ಸ್ನೇಹಿತರೊಟ್ಟಿಗೆ ಹಲವು ದಿನ ವಿವಿಧ ಲಾಡ್ಜ್‌ಗಳಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ. ಆನಂತರದಲ್ಲಿ ಆಕೆಯನ್ನು ಒಡಿಶಾಗೆ ಬಿಟ್ಟಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಡಿಶಾ ಮೂಲದವಳಾದ ಬಾಲಕಿ 9 ತಿಂಗಳ ಹಿಂದೆ ಕೆಲಸದ ಪ್ರಯುಕ್ತ ವಿಶಾಖಪಟ್ಟಣಕ್ಕೆ ಆಗಮಿಸಿ ಮನೆಯೊಂದರಲ್ಲಿ ಅಡುಗೆ ಸಹಾಯಕಳಾಗಿ ಕೆಲಸ ಮಾಡುತ್ತಿದ್ದಾಳೆ. ಡಿ.17 ರಂದು ಬಾಲಕಿ ಕಾಣೆಯಾದ ನಂತರ ಆಕೆಯ ತಂದೆ ವಿಶಾಖಪಟ್ಟಣದಲ್ಲಿ ದೂರು ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ಡಿ.23ರಂದು ಒಡಿಶಾ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಆಂಧ್ರ ಪೊಲೀಸರಿಗೆ ತಿಳಿಸಿದ್ದರು. ಬಾಲಕಿಯ ತಂದೆ ಹಾಗೂ ಪೊಲೀಸ್‌ ತಂಡ ಡಿ.25 ರಂದು ಒಡಿಶಾದಿಂದ ವಿಶಾಖಪಟ್ಟಣಕ್ಕೆ ಕರೆದುಕೊಂಡು ಬಂದಿದ್ದರು.

ಅತ್ಯಾಚಾರದಿಂದ ಬಾಲಕಿ ಮಾನಸಿಕ ಆಘಾತಕ್ಕೊಳಗಾಗಿದ್ದಳು. ಪೋಷಕರು ಆಕೆಯ ಆರೋಗ್ಯ ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಡಿ.31ರಂದು ತನ್ನನ್ನು 13 ಮಂದಿ ವಿವಿಧ ಸ್ಥಳಗಳಲ್ಲಿ ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಅಪ್ರಾಪ್ತೆ ತಿಳಿಸಿದ್ದಾಳೆ.

ವಿಪಕ್ಷದಿಂದ ಆಂಧ್ರ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯದಲ್ಲಿ ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳು ಆಡಳಿತಾರೂಢ ವೈಎಸ್ಆರ್ಸಿಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ವಿಶಾಖಪಟ್ಟಣಂನಲ್ಲಿ ನಡೆದ ಘಟನೆಯನ್ನು ಖಂಡಿಸಿರುವ ಟಿಡಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಆಂಧ್ರಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ವೈಎಸ್ಆರ್ಸಿಪಿ ನಾಯಕರು ಶಾಂತಿಯುತವಾದ ವಿಶಾಖಪಟ್ಟಣಕ್ಕೆ ಶಾಪವಾಗಿದ್ದಾರೆ ಎಂದು ಟಿಡಿಪಿ ನಾಯಕ ನಾರಾ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...