ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ | ಜೂನ್ 9ಕ್ಕೆ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

Date:

ಆಂಧ್ರಪ್ರದೇಶದಲ್ಲಿ ಲೋಕಸಭಾ ಜತೆಗೆ ವಿಧಾನಸಭಾ ಚುನಾವಣೆಯೂ ನಡೆಯುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಷ 16 ಲೋಕಸಭೆ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೇ, ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ಜೂನ್ 9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ಪಕ್ಷ ಹೇಳಿದೆ.

ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಈ ಎರಡರಲ್ಲೂ ಮುನ್ನಡೆ ಸಾಧಿಸಿದೆ.

ಜಗನ್ ಮೋಹನ್ ರೆಡ್ಡಿ ನೇತೃತ್ವದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) 2019ರ ಚುನಾವಣೆಯಲ್ಲಿ 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದು ಜಯ ಸಾಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಟಿಡಿಪಿ 130, ಜನಸೇನಾ ಪಕ್ಷ 20 ಮತ್ತು ಬಿಜೆಪಿ 7 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಲೋಕೇಶ್ ಕ್ರಮವಾಗಿ ಕುಪ್ಪಂ ಮತ್ತು ಮಂಗಳಗಿರಿ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವೈಎಸ್ಆರ್ಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಜಗನ್ ರೆಡ್ಡಿ ಪುಲಿವೆಂದುಲಾದಲ್ಲಿ ಟಿಡಿಪಿ ಪ್ರತಿಸ್ಪರ್ಧಿ ಬಿ ರವಿಗಿಂತ 21,292 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪವನ್ ಕಲ್ಯಾಣ್ ಅವರು ಪಿಠಾಪುರಂನಲ್ಲಿ ವೈಎಸ್ಆರ್ಸಿಪಿ ಪ್ರತಿಸ್ಪರ್ಧಿ ವಿ ಗೀತಾ ಅವರನ್ನು ಸೋಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌ನಲ್ಲಿ ಖಾತೆ ತೆರೆದ ಕಾಂಗ್ರೆಸ್; ಕೈ ಅಭ್ಯರ್ಥಿ ಗೆನಿಬೆನ್ ಠಾಕೂರ್ ಗೆಲುವು

ವೈಎಸ್​​ಆರ್​​​ಪಿ ಪಕ್ಷವು ಹೀನಾಯವಾಗಿ ಸೋಲನ್ನು ಕಂಡಿದೆ. ಹಿನ್ನೆಲೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಜಗನ್​​ ಮೋಹನ್​​ ರೆಡ್ಡಿ ಮುಂದಾಗಿದ್ದಾರೆ. ಇಂದು ಸಾಯಂಕಾಲದೊಳಗೆ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಹಾಗಾಗಿ, ರಾಜೀನಾಮೆ ನೀಡುವುದಕ್ಕಾಗಿರಾಜ್ಯಪಾಲರ ಭೇಟಿಗೆ ಜಗನ್ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...