ಪವನ್ ಕಲ್ಯಾಣ್‌ಗೆ ಜೀರೋ ಟ್ರಾಫಿಕ್: ಜೆಇಇ ಪ್ರವೇಶ ಪರೀಕ್ಷೆ ತಪ್ಪಿಸಿಕೊಂಡ ಹಲವು ವಿದ್ಯಾರ್ಥಿಗಳು

Date:

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಡಿಸಿಎಂ ಪವನ್ ಕಲ್ಯಾಣ್‌ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರಿಂದ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಗೆ ಸೂಕ್ತ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ತಡವಾಗಿ ಬಂದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದಿಂದ ವಾಪಸ್‌ ಕಳುಹಿಸಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 2ರಂದು ವಿಶಾಖಪಟ್ಟಣಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದರು. ಈ ವೇಳೆ ಗೋಪಾಲಪಟ್ಟಣಂ–ಪೆಂಡುರ್ತಿ ಮಾರ್ಗದ ಸರ್ವಿಸ್ ರಸ್ತೆ ಬಳಿ ಸಾರ್ವಜನಿಕ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ಇದರಿಂದ ಬೆಳಿಗ್ಗೆ ಜೆಇಇ ಪ್ರವೇಶ ಪರೀಕ್ಷೆಗೆ ತೆರಳಬೇಕಿದ್ದ 30ಕ್ಕೂ ಅಧಿಕ ವಿದ್ಯಾರ್ಥಿಗಳು ಟ್ರಾಫಿಕ್‌ನಲ್ಲೇ ಸಿಲುಕಿಕೊಂಡು ಪರೀಕ್ಷೆಗೆ ಸೂಕ್ತ ಸಮಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ.

ಪರೀಕ್ಷೆಗೆ ಕುಳಿತುಕೊಳ್ಳಲು ಅನುಮತಿ ನೀಡದೆ ಎಲ್ಲಾ 30 ವಿದ್ಯಾರ್ಥಿಗಳನ್ನು ಪರೀಕ್ಷಾ ಹಾಲ್‌ನ ಗೇಟ್‌ನಿಂದಲೇ ವಾಪಸ್‌ ಕಳುಹಿಸಲಾಗಿದೆ ಎಂದು ಪೋಷಕರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನಕ್ಕೆ ಸಂಚಾರ ನಿರ್ಬಂಧಗಳನ್ನು ಜಾರಿಗೊಳಿಸಿದ್ದರಿಂದ ನನ್ನ ಮಗನಿಗೆ ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗಿಲ್ಲʼ ಎಂದು ಬಿ ಕಲಾವತಿ ಎಂಬವರು ಮಾಧ್ಯಮಗಳಿಗೆ ತಿಳಿಸಿದರು. ಇದೇ ರೀತಿ ಇತರ ವಿದ್ಯಾರ್ಥಿಗಳ ಪೋಷಕರು ಕೂಡ ಆರೋಪವನ್ನು ಮಾಡಿದ್ದಾರೆ.

ಆದರೆ, ಈ ಆರೋಪವನ್ನು ನಗರ ಪೊಲೀಸರು ನಿರಾಕರಿಸಿದರು. ಬೆಳಿಗ್ಗೆ 8.30ರ ನಂತರ ನಾವು ಪವನ್ ಕಲ್ಯಾಣ್ ಅವರಿಗೆ ಝೀರೋ ಟ್ರಾಫಿಕ್ ನೀಡಿದ್ದೇವೆ. ಹೀಗಾಗಿ ಪರೀಕ್ಷೆಗೆ ಹೋಗುವವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಆರೋಪದ ಹಿನ್ನೆಲೆ ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...