ಆಂಧ್ರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿ ಸಾವು

Date:

ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಮಂದಿ ದುರ್ಮರಣ ಹೊಂದಿರುವ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.

ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ನಡೆಸಿದೆ. ಇಬ್ಬರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್‌ಪಿ ತುಹಿನ್ ಸಿನ್ಹಾ ತಿಳಿಸಿದ್ದಾರೆ. ಘಟನೆ ಕುರಿತು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಗೃಹ ಸಚಿವೆ ವಿ ಅನಿತಾ ಭೇಟಿ ನೀಡಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡುವಂತೆ ಸೂಚನೆ ನೀಡಿದ್ದಾರೆ. ಅವರನ್ನು ಕಳುಹಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂದು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ನಿಖರ ಕಾರಣ ಗೊತ್ತಾಗಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...