ಮಿಚಾಂಗ್ ಚಂಡಮಾರುತಕ್ಕೆ ಆಂಧ್ರ – ತಮಿಳುನಾಡು ತತ್ತರ; 120 ರೈಲುಗಳ ಸಂಚಾರ ರದ್ದು

Date:

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ, ಡಿಸೆಂಬರ್ 6ರವರೆಗೆ ಚೆನ್ನೈ ಜೊತೆ ಸಂಪರ್ಕ ಒದಗಿಸುತ್ತಿದ್ದ ಸುಮಾರು 120 ರೈಲುಗಳನ್ನು ರದ್ದುಗೊಳಿಸಲಾಗಿದೆ. ಅವುಗಳಲ್ಲಿ ಬಹುತೇಕ ರೈಲುಗಳು ಆಂಧ್ರ ಮತ್ತು ತೆಲಂಗಾಣ ಮೂಲಕ ಹಾದುಹೋಗುವ ರೈಲುಗಳಾಗಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

“ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಭಾನುವಾರ ಮುಂಜಾನೆಯಿಂದ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ. ಚಂಡಮಾರುತವು ವಾಯವ್ಯ ಭಾಗದ ಕಡೆಗೆ ಚಲಿಸುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ನೆಲ್ಲೂರು ಮತ್ತು ಮಚಲಿಪಟ್ಟಣಂ ಹಾಗೂ ಉತ್ತರ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿದ ಈ ನಾಲ್ಕೂ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೆಲ್ಲೂರು, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ವಿಲ್ಲುಪುರಂ, ಕಡಲೂರು, ಕಲ್ಲಕುರಿಚಿ ಮತ್ತು ತಿರುಪತ್ತೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭಾರೀ ಮಳೆಯಿಂದಾಗಿ 120 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಚೆನ್ನೈ, ಬೆಂಗಳೂರು ಮತ್ತು ತಿರುವನಂತಪುರದಿಂದ ದೆಹಲಿ, ಧನಾಪುರ, ಸಂತ್ರಗಚಿ, ಪಾಟ್ನಾ, ವಿಶಾಖಪಟ್ಟಿಣಂ, ವಿಜಯವಾಡ ಮತ್ತು ಹೌರಾ ಸೇರಿದಂತೆ ದೇಶದ ಉತ್ತರ ಭಾಗಕ್ಕೆ ಹೋಗುವ ಹಲವಾರು ರೈಲುಗಳು ರದ್ದಾಗಿವೆ. ಚೆನ್ನೈ ಸೆಂಟ್ರಲ್, ಚೆನ್ನೈ ಎಗ್ಮೋರ್ ಮತ್ತು ತಾಂಬರಂನಿಂದ ಹೊರಡುವ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆ ರದ್ದಾಗಿದೆ. ರದ್ದಾಗಿರುವ ರೈಲುಗಳಲ್ಲಿ ಟಿಕೆಟ್‌ ಖಾಯ್ದಿರಿಸಿದ್ದ ರೈಲು ಪ್ರಯಾಣಿಕರಿಗೆ ಟಿಕೆಟ್ ದರದ ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ರೈಲ್ವೇ ಭರವಸೆ ನೀಡಿದೆ.

ಚೆನ್ನೈ-ಸೂಲೂರ್‌ಪೇಟ್ಟೈ ಮತ್ತು ಚೆನ್ನೈ-ಅರ್ಕಾಕೋಣಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ಉಪನಗರ ರೈಲುಗಳು ಕೂಡ ರದ್ದಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...