ಉತ್ತರ ಪ್ರದೇಶ | ಚಾಕುವಿನಿಂದ ಇರಿದು ಎಎನ್‌ಐ ಪತ್ರಕರ್ತನ ಕೊಲೆ

Date:

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಸುದ್ದಿಸಂಸ್ಥೆ ಎಎನ್‌ಐ ಪತ್ರಕರ್ತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. 38 ವರ್ಷದ ಪತ್ರಕರ್ತ ದಿಲೀಪ್ ಸೈನಿ ಮೇಲೆ ದಾಳಿ ನಡೆಸಿದ ವೇಳೆ ಪತ್ರಕರ್ತನ ಜೊತೆಗಿದ್ದ ಅವರ ಸ್ನೇಹಿತ, ಬಿಜೆಪಿ ಮುಖಂಡರೊಬ್ಬರ ಮೇಲೆಯೂ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಭೂಮಿಗೆ ಸಂಬಂಧಿಸಿದ ಕೆಲವು ವಿವಾದಗಳಿಂದಾಗಿ ಹತ್ಯೆ ನಡೆದಿದೆ ಎನ್ನಲಾಗಿದೆ. ಪತ್ರಕರ್ತನ ಸ್ನೇಹಿತ, ಬಿಜೆಪಿ ಮುಖಂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈನಿ ಅವರ ಸ್ನೇಹಿತ ಹಾಗೂ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖಂಡ ಶಾಹಿದ್ ಖಾನ್ ಅವರು ದಿಲೀಪ್ ಸೈನಿ ಅವರನ್ನು ರಕ್ಷಿಸಲು ಯತ್ನಿಸಿದಾಗ ಅವರ ಮೇಲೆಯೂ ದಾಳಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ದಾರುಣ ಸಾವು

“ನಾವು ದಿಲೀಪ್ ಸೈನಿ ಜೊತೆ ರಾತ್ರಿ ಊಟ ಮಾಡುತ್ತಿದ್ದೆವು. ಈ ವೇಳೆ ಅವರು (ದಾಳಿ ನಡೆಸಿದವರು) ಒಳಗೆ ಬಂದು ದಿಲೀಪ್‌ಗೆ ಇರಿದಿದ್ದಾರೆ. ನಾನು ಅವರನ್ನು ಕಾಪಾಡಲು ಯತ್ನಿಸಿದೆ. ಆಗ ನನಗೂ ಇರಿದಿದ್ದಾರೆ. ಗುಂಡು ಕೂಡಾ ಹಾರಿಸಿ ಸೈನಿ ಹತ್ಯೆ ಮಾಡಿದ್ದಾರೆ” ಎಂದು ಶಾಹಿದ್ ಖಾನ್ ಹೇಳಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯೇ ದಿಲೀಪ್ ಸೈನಿ ಸಾವನ್ನಪ್ಪಿದ್ದಾರೆ. ಶಾಹಿದ್ ಖಾನ್ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ನಂತರ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫತೇಪುರ್ ಪೊಲೀಸ್ ಮುಖ್ಯಸ್ಥ ಧವಲ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

“ನಾವು ಪ್ರಕರಣವನ್ನು ದಾಖಲಿಸಿ ಎಲ್ಲಾ ಸಂಗತಿಗಳನ್ನು ಪರಿಶೀಲಿಸಲಾಗುವುದು. ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...