ಬಿಹಾರ | ಮತ್ತೊಂದು ಸೇತುವೆ ಕುಸಿತ; ಮೂರು ವಾರಗಳಲ್ಲಿ 13ನೇ ಪ್ರಕರಣ!

Date:

ಬಿಹಾರ ಸೇತುವೆ ಕುಸಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಾ ಸಾಗುತ್ತಿದೆ. ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಮುಂಜಾನೆ ಮತ್ತೊಂದು ಸೇತುವೆ ಕುಸಿದಿದ್ದು, ಮೂರು ವಾರಗಳಲ್ಲಿ 13ನೇ ಪ್ರಕರಣ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

“ಇದು ಸಣ್ಣ ಸೇತುವೆ ಎಂದು ಹೇಳಬಹುದು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ನಾವು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಹೆಚ್ಚುವರಿ ಜಿಲ್ಲಾಧಿಕಾರಿ (ಸಹರ್ಸಾ), ಜ್ಯೋತಿ ಕುಮಾರ್ ಹೇಳಿದರು.

ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ಸೇತುವೆ ಕುಸಿತ ಘಟನೆಗಳು ನಡೆಯುತ್ತಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಬಿಹಾರ ಸರ್ಕಾರ ಕನಿಷ್ಠ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  17 ದಿನಗಳಲ್ಲಿ 12 ಬ್ರಿಡ್ಜ್‌ಗಳು ಕುಸಿತ; ಬಿಹಾರ ಸೇತುವೆಗಳು ಬೀಳುತ್ತಿರುವುದೇಕೆ? 

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯದ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಕಾರಣ ಅವಘಡಗಳು ಸಂಭವಿಸುತ್ತಿದೆ. ಆದರೆ ಈ ಪೈಕಿ ಅಧಿಕ ಸುದ್ದಿಯಾಗಿರುವುದು ಬಿಹಾರ. ‘ಸೇತುವೆಗಳು ಉರುಳುವ ರಾಜ್ಯ’ ಎಂದು ಬಿಹಾರವನ್ನು ಟ್ರೋಲ್ ಮಾಡಲಾಗುತ್ತಿದೆ. ಬಿಜೆಪಿ-ಜೆಡಿಯು ಸರ್ಕಾರವನ್ನು ಟೀಕಿಸಲಾಗುತ್ತಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...