ದಕ್ಷಿಣ ಆಫ್ರಿಕಾದಿಂದ ಕರೆತಂದಿದ್ದ ಮತ್ತೊಂದು ಚೀತಾ ಸಾವು

Date:

  • ಮಧ್ಯಪ್ರದೇಶದಲ್ಲಿ ಜನವರಿ ಮತ್ತು ಏಪ್ರಿಲ್‌ನಲ್ಲಿ ಎರಡು ಚೀತಾಗಳ ಸಾವು
  • 2022ರ ಸೆಪ್ಟೆಂಬರ್, ಈ ವರ್ಷ ಫೆಬ್ರವರಿಯಲ್ಲಿ ಕರೆತಂದಿದ್ದ ಚೀತಾಗಳು  

ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಮರಾಗಳಿಗೆ ಪೋಸ್ ಕೊಡುತ್ತಾ ಅಬ್ಬರದ ಪ್ರಚಾರದಲ್ಲಿ ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದ್ದ ಚೀತಾಗಳು ಒಂದೊಂದಾಗಿ ಸಾವನ್ನಪ್ಪುತ್ತಿರುವುದು ಬಿಜೆಪಿ ಸರ್ಕಾರಕ್ಕೆ ಮುಜುಗರವೆನಿಸಿದೆ. ಇದೀಗ ಹೆಣ್ಣು ಚೀತಾ ದಕ್ಷಾ, ಉದ್ಯಾನವನದೊಳಗೆ ಇತರ ಚೀತಾಗಳೊಂದಿನ ಕಾದಾಟದಲ್ಲಿ ಸಾವನ್ನಪ್ಪಿದೆ. ತಿಂಗಳೊಳಗೆ ಕುನೊದಲ್ಲಿ ಮೂರನೇ ಚೀತಾ ಸಾವನ್ನಪ್ಪಿರುವುದು ಅನೇಕ ಪ್ರಶ್ನೆಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಪುರುಷ ಚೀತಾಗಳಾದ ಪಿಂಡಾ, ವಾಯು, ಅಗ್ನಿ ಎಂಬ ಚೀತಾಗಳೊಂದಿಗೆ ನಡೆದ ಕಾದಾಟದಲ್ಲಿ ದಕ್ಷಿಣ ಆಫ್ರಿಕಾದ ಚೀತಾ ದಕ್ಷಾ ಮೃತಪಟ್ಟಿದೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಕರೆ ತಂದ ನಂತರ ಕುನೊದಲ್ಲಿ ಸಾವನ್ನಪ್ಪಿದ ಮೂರನೇ ಚಿರತೆ ಇದಾಗಿದೆ.

ಕಳೆದ ವರ್ಷದಿಂದ ಇಪ್ಪತ್ತು ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಎರಡು ಚೀತಾಗಳು ಸಾವನ್ನಪ್ಪಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಸೇತುವೆಯಿಂದ ಬಸ್ ಉರುಳಿ 15 ಮಂದಿ ಸಾವು, 25 ಜನರಿಗೆ ಗಾಯ

ಇತ್ತೀಚಿಗೆ ಮೃತಪಟ್ಟ ಸಶಾ ಎಂಬ ಹೆಣ್ಣು ಚೀತಾ, ಭಾರತಕ್ಕೆ ಕರೆತರುವ ಮೊದಲು ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿತ್ತು. ಜನವರಿ 23 ರಂದು, ಆಯಾಸ ಮತ್ತು ದೌರ್ಬಲ್ಯದ ಲಕ್ಷಣಗಳು ಕಾಣಿಸಿಕೊಂಡ ನಂತರ ಉದ್ಯಾನವನದ ಅಧಿಕಾರಿಗಳು ಚೀತಾವನ್ನು ಚಿಕಿತ್ಸೆಗಾಗಿ ಕ್ವಾರಂಟೈನ್ ಆವರಣಕ್ಕೆ ಸ್ಥಳಾಂತರಿಸಿದ್ದರು.

ಏಪ್ರಿಲ್‌ನಲ್ಲಿ ಎರಡನೇ ಉದಯ್ ಎಂಬ ಹೆಸರಿನ ಚೀತಾ, ರಾಷ್ಟ್ರೀಯ ಉದ್ಯಾನವನದಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತ್ತು.

ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುವ ಮೊದಲು ಐದು ಚಿರತೆಗಳನ್ನು – ಮೂರು ಹೆಣ್ಣು ಮತ್ತು ಎರಡು ಗಂಡುಗಳನ್ನು ಹೊಂದಿಕೊಳ್ಳಲು ಸಾಧ್ಯವಾಗುವಂತೆ ಒಟ್ಟಾಗಿ ಇರಿಸಿದ್ದ ಶಿಬಿರಗಳಿಂದ ಕುನೋ ರಾಷ್ಟ್ರೀಯ ಉದ್ಯಾನವನದ ಮುಕ್ತ-ಶ್ರೇಣಿಯ ಪರಿಸ್ಥಿತಿಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಪರಿಸರ ಸಚಿವಾಲಯ ಇಂದು ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದ ವಿಶೇಷ ಆವರಣಕ್ಕೆ ನಮೀಬಿಯಾದಿಂದ ಕರೆತಂದ ಎಂಟು ಚಿರತೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳನ್ನು ಕರೆತಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...