ಮಧ್ಯಪ್ರದೇಶದಲ್ಲಿ ಮತ್ತೊಬ್ಬ ‘ನಕಲಿ ವೈದ್ಯ’ ಪತ್ತೆ; ಬಿಜೆಪಿ ವೈದ್ಯಕೀಯ ಸೆಲ್‌ನಲ್ಲಿದ್ದ ಆರೋಪಿ

Date:

ಮಧ್ಯಪ್ರದೇಶದಲ್ಲಿ ಮತ್ತೊಬ್ಬ ನಕಲಿ ವೈದ್ಯ ಪತ್ತೆಯಾಗಿದ್ದು, ಈ ಆರೋಪಿ ಬಿಜೆಪಿ ವೈದ್ಯಕೀಯ ಸೆಲ್‌ನಲ್ಲಿ ಕಾರ್ಯನಿರ್ವಹಿಸಿದ್ದ ಎಂದು ಹೇಳಲಾಗಿದೆ. ಆಯುಷ್ ಪದವಿ ಪಡೆದಿರುವುದಾಗಿ ಸುಳ್ಳು ಹೇಳಿಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.

ದೂರಿನ ನಂತರ ಬಿಜೆಪಿ ಜಬಲ್ಪುರ ಜಿಲ್ಲಾ ವೈದ್ಯಕೀಯ ಕೋಶದ ಸಹ-ಸಂಚಾಲಕನಾಗಿಯೂ ಸೇವೆ ಸಲ್ಲಿಸಿದ್ದ ನಕಲಿ ವೈದ್ಯನ ವಿರುದ್ಧ ವಂಚನೆ ಆರೋಪದ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಶುಭಂ ಅವಸ್ಥಿ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಹೃದಯ ಶಸ್ತ್ರಚಿಕಿತ್ಸೆ ಮಾಡಿದ ನಕಲಿ ‘ಬ್ರಿಟಿಷ್’ ವೈದ್ಯ; ಏಳು ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಪ್ರದೇಶದ ದಾಮೋಹ್ ಮಿಷನರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ಬ್ರಿಟಿಷ್ ವೈದ್ಯನ ಬಂಧನಕ್ಕೂ ಎರಡು ದಿನ ಮುನ್ನ ಅವಸ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ಜಬಲ್ಪುರ ಜಿಲ್ಲೆಯ ನ್ಯಾಯಾಲಯದ ಆದೇಶದ ನಂತರ ಪೊಲೀಸರು ನಕಲಿ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

“ನಕಲಿ ಆಯುಷ್ ಪದವಿಯನ್ನು ಬಳಸಿಕೊಂಡು ಸರ್ಕಾರಿ ಸ್ವಾಮ್ಯದ ಸೇಠ್ ಗೋವಿಂದ್ ದಾಸ್ ಜಬಲ್ಪುರ್ ಜಿಲ್ಲಾ ಆಸ್ಪತ್ರೆಯಲ್ಲಿ (ಹಿಂದೆ ವಿಕ್ಟೋರಿಯಾ ಆಸ್ಪತ್ರೆ ಎಂದು ಕರೆಯಲಾಗುತ್ತಿತ್ತು) ಕೆಲಸ ಮಾಡುತ್ತಿದ್ದ ಆರೋಪ ಹೊತ್ತಿರುವ ಶುಭಂ ಅವಸ್ಥಿ ವಿರುದ್ಧ ವಂಚನೆ ಆರೋಪದ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನೆಹರು ಸಿಂಗ್ ಖಾಂಡೇಟ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಬಿಜೆಪಿ ಜಬಲ್ಪುರ್ ಮುಖ್ಯಸ್ಥ ರತ್ನೇಶ್ ಸೋಂಕರ್, “ಪ್ರಕರಣದ ಅಧಿಕೃತ ದೃಢೀಕರಣ ದೊರೆತ ಬಳಿಕ ಬಿಜೆಪಿ ಮಾರ್ಗಸೂಚಿ ಪ್ರಕಾರ ಅವಸ್ಥಿ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ಪ್ರತಿಪಾದಿಸಿದ್ದಾರೆ.

ಇನ್ನು ಆಡಳಿತರೂಢ ಬಿಜೆಪಿ ಆರೋಪಿ ಕಾರ್ಯಕರ್ತ ಎಂಬುದನ್ನು ಒಪ್ಪಿಕೊಂಡಿದೆ. ಆದರೆ ಎರಡು ವರ್ಷಗಳ ಹಿಂದೆ ಬಿಜೆಪಿ ಜಬಲ್ಪುರ ಜಿಲ್ಲಾ ವೈದ್ಯಕೀಯ ಕೋಶದ ಸಹ-ಸಂಚಾಲಕ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ಬಿಜೆಪಿ ವೈದ್ಯಕೀಯ ಸೆಲ್‌ನ ಸಹ-ಸಂಚಾಲಕಿ ಮತ್ತು ದಂತವೈದ್ಯೆ ಅಶ್ವಿನಿ ತ್ರಿವೇದಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರಾಮಮಂದಿರಕ್ಕೆ ಮುಸ್ಲಿಮರ ಹೆಸರಲ್ಲಿ ಬಾಂಬ್ ಬೆದರಿಕೆ: ಇಬ್ಬರು ಹಿಂದೂ ಯುವಕರ ಬಂಧನ

ಪೊಲೀಸರು ಬರೀ ದೂರು ದಾಖಲಿಸಿಕೊಂಡು ಯಾವುದೇ ಕ್ರಮಕೈಗೊಂಡಿಲ್ಲ. ಈ ಕಾರಣದಿಂದಾಗಿ ದೂರುದಾರರು ಅವಸ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಎಫ್‌ಐಆರ್ ದಾಖಲಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಮತ್ತೋರ್ವ ನಕಲಿ ವೈದ್ಯರು ಪತ್ತೆಯಾಗಿದ್ದರು. ಮಧ್ಯಪ್ರದೇಶದ ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ‘ಬ್ರಿಟಿಷ್’ ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು, ಈವರೆಗೆ ಏಳು ಮಂದಿ ಈ ನಕಲಿ ವೈದ್ಯನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ತಾನು ಹೃದ್ರೋಗ ತಜ್ಞ ಎಂದು ಹೇಳಿಕೊಂಡಿದ್ದ ನಕಲಿ ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆಗಳನ್ನೂ ಮಾಡಿದ್ದನು. ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯ ನಂತರ ಆರೋಪಿಯ ನಿಜವಾದ ಹೆಸರು ನರೇಂದ್ರ ವಿಕ್ರಮಾದಿತ್ಯ ಯಾದವ್ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...